ಧಾರವಾಡ ಜಿಲ್ಲೆಯಲ್ಲಿ ಕರಡು ಮತದಾರರ ಪಟ್ಟಿ ಪ್ರಕಟ: ೧೩.೫೩ ಲಕ್ಷ ಮತದಾರರ ಸೇರ್ಪಡೆ
Skip to main contentAccessibility help kannada to english All Images Forums Videos Shopping Short
ಲೋಕದರ್ಶನ ವರದಿ
ಧಾರವಾಡ ೨೪: ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ - ೨೦೨೬ ಸಂಬAಧಿಸಿದAತೆ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಒಟ್ಟು ೧೬,೨೧,೯೬೧ ಮತದಾರರ ಪೈಕಿ ೧೩,೫೩,೯೪೬ ಮತದಾರರ ಮಾಹಿತಿಯನ್ನು ಪರಿಶೀಲಿಸಿ ಕರಡು ಪಟ್ಟಿಗೆ ಸೇರ್ಪಡೆ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಸ್ನೇಹಲ್ ಆರ್. ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಭವನದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರಡು ಪಟ್ಟಿಯಿಂದ ಒಟ್ಟು ೨,೬೮,೦೧೫ ಮತದಾರರನ್ನು ಹೊರಗಿಡಲಾಗಿದೆ. ಇವರಲ್ಲಿ ೫೨,೭೯೧ ಮಂದಿ ಮೃತಪಟ್ಟವರು, ೧,೨೫,೨೮೭ ಮಂದಿ ಶಾಶ್ವತವಾಗಿ ವಲಸೆ ಹೋದವರು, ೨೭,೧೮೫ ಮಂದಿ ದ್ವಿಪ್ರತಿ ಮತದಾರರು, ೬೨,೦೭೯ ಮಂದಿ ಗೈರುಹಾಜರಿರುವ ಮತದಾರರು ಹಾಗೂ ೬೭೩ ಮಂದಿ ಇತರ ವರ್ಗಕ್ಕೆ ಸೇರಿದವರಾಗಿದ್ದಾರೆ ಎಂದು ವಿವರಿಸಿದರು.
ಆ.೨೪ರಂದು ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಸೆ.೨೩ರವರೆಗೆ ಸಾರ್ವಜನಿಕರಿಂದ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಹ ಮತದಾರರು ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ಪಟ್ಟಿಯಲ್ಲಿ ಹೆಸರು ಇಲ್ಲದ ಅರ್ಹ ಮತದಾರರು ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅ.೧, ೨೦೨೬ಕ್ಕೆ ೧೮ ವರ್ಷ ಪೂರ್ಣಗೊಳ್ಳುವವರು ಭರ್ತಿ ಮಾಡಿ ಮತದಾರರಾಗಿ ನೋಂದಾಯಿಸಿಕೊಳ್ಳಬಹುದು ಎಂದು ತಿಳಿಸಿದರು.
ಮತದಾರರ ಪಟ್ಟಿಯಲ್ಲಿನ ಹೆಸರು, ವಿಳಾಸ ಮತ್ತಿತರ ವಿವರಗಳಲ್ಲಿ ತಿದ್ದುಪಡಿ ಅಥವಾ ಮತಗಟ್ಟೆ ಬದಲಾವಣೆಗೆ ಆ.೨೪ರಿಂದ ಅ.೨೨ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಜಿಗಳನ್ನು ಮತಗಟ್ಟೆ, ತಾಲೂಕು ಕಚೇರಿ ಹಾಗೂ ಮತದಾರರ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಸಲ್ಲಿಸಬಹುದು. ಜೊತೆಗೆ ಚುನಾವಣಾ ಆಯೋಗದ ಗಿoಣeಡಿs Poಡಿಣಚಿಟ ಮತ್ತು ಇಅI ಓಇಖಿ ಒobiಟe ಂಠಿಠಿಟiಛಿಚಿಣioಟಿ ಮೂಲಕವೂ ಆನ್ಲೆöÊನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಿಗೆ ಸಂಬAಧಿಸಿದAತೆ ಈ ಹಿಂದೆ ೧,೬೬೫ ಮತಗಟ್ಟೆಗಳಿದ್ದು, ಇದೀಗ ೧,೭೦೭ ಮತಗಟ್ಟೆಗಳನ್ನು ಪ್ರಕಟಿಸಲಾಗಿದೆ. ಕರಡು ಮತದಾರರ ಪಟ್ಟಿಗಳು ಹಾಗೂ ೧,೭೦೭ ಮತಗಟ್ಟೆಗಳ ಪಟ್ಟಿಯನ್ನು ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಮಾಹಿತಿಗಾಗಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.
ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆ
ವಿಶೇಷ ಸಮಗ್ರ ಕರಡು ಮತದಾರರ ಪಟ್ಟಿಯನ್ನು ಪ್ರಚುರಪಡಿಸುವ ಕುರಿತು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರ ಅಧ್ಯಕ್ಷತೆಯಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆ ನಡೆಯಿತು. ಕರಡು ಪಟ್ಟಿಯನ್ನು ಮತಗಟ್ಟೆ ಕೇಂದ್ರಗಳು, ಗ್ರಾಮ ಪಂಚಾಯಿತಿ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ತಾಲೂಕು ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳ ವೆಬ್ಸೈಟ್ನಲ್ಲಿ ಪರಿಶೀಲಿಸಬಹುದಾಗಿದೆ.
ಅರ್ಹ ಮತದಾರರು ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಪರಿಶೀಲಿಸಿ, ಹೆಸರು ಸೇರ್ಪಡೆ, ಕೈಬಿಟ್ಟ ಹೆಸರು, ವಿವರಗಳ ತಿದ್ದುಪಡಿ ಅಥವಾ ಮತಗಟ್ಟೆ ಬದಲಾವಣೆಗೆ ಅಗತ್ಯ ನಮೂನೆಗಳೊಂದಿಗೆ ಅರ್ಜಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ್ ಎಸ್. ಘಾಳಿ, ಉಪವಿಭಾಗಾಧಿಕಾರಿ ಪ್ರಭಾವತಿ ಫಕೀರಪುರ ಸೇರಿದಂತೆ ಎಲ್ಲ ವಿಧಾನಸಭಾ ಕ್ಷೇತ್ರಗಳ ಮತದಾರರ ನೋಂದಣಾಧಿಕಾರಿಗಳು, ಸಹಾಯಕ ಮತದಾರರ ನೋಂದಣಾಧಿಕಾರಿಗಳು ಹಾಗೂ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 