ಅರಳಿಕಟ್ಟಿಯಲ್ಲಿ ಬಸವೇಶ್ವರ ದೇವಸ್ಥಾನ ಸ್ಲ್ಯಾಬ್ ಕಾಮಗಾರಿಗೆ ಚಾಲನೆ

ಅರಳಿಕಟ್ಟಿಯಲ್ಲಿ ಬಸವೇಶ್ವರ ದೇವಸ್ಥಾನ ಸ್ಲ್ಯಾಬ್ ಕಾಮಗಾರಿಗೆ ಚಾಲನೆ  Slab work for the Basaveshwara Temple at Aralikatte launched


 ಬೆಳಗಾವಿ  06:  ಅರಳಿಕಟ್ಟಿ ಗ್ರಾಮದಲ್ಲಿ ಸುಮಾರು ?1 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಶ್ರೀ ಬಸವೇಶ್ವರ ದೇವಸ್ಥಾನದ ಮೇಲ್ಚಾವಣಿ ಸ್ಲ್ಯಾಬ್ ಕಾಮಗಾರಿಗೆ ಮಾಜಿ ಸಚಿವೆ ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಪೂಜೆ ನೆರವೇರಿಸಿ ಚಾಲನೆ ನೀಡಿದರು.  

 ದೇವಸ್ಥಾನದ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿದ ಅವರು, ಕಾಮಗಾರಿ ಉತ್ತಮ ಗುಣಮಟ್ಟದಲ್ಲಿ ಹಾಗೂ ಶೀಘ್ರ ಪೂರ್ಣಗೊಳ್ಳಲಿ ಎಂದು ಹಾರೈಸಿದರು. ಗ್ರಾಮಸ್ಥರ ಬಹುದಿನಗಳ ಆಶಯದಂತೆ ಸುಸಜ್ಜಿತ ದೇವಸ್ಥಾನ ನಿರ್ಮಾಣವಾಗುತ್ತಿರುವುದು ಸಂತಸದ ಸಂಗತಿ ಎಂದರು.  

 ಶ್ರೀ ಬಸವೇಶ್ವರ ದೇವಸ್ಥಾನವು ಗ್ರಾಮದ ಧಾರ್ಮಿಕ ಭಕ್ತಿ, ಸಾಮಾಜಿಕ ಒಗ್ಗಟ್ಟು ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಪ್ರಮುಖ ಕೇಂದ್ರವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು. ದೇವಸ್ಥಾನದ ನಿರ್ಮಾಣಕ್ಕೆ ಗ್ರಾಮಸ್ಥರು ಹಾಗೂ ಭಕ್ತರು ನೀಡುತ್ತಿರುವ ಸಹಕಾರವನ್ನು ಶ್ಲಾಘಿಸಿದ ಅವರು, ಕಾಮಗಾರಿ ಪೂರ್ಣಗೊಳ್ಳಲು ಅಗತ್ಯ ಸಹಕಾರ ನೀಡುವುದಾಗಿ ತಿಳಿಸಿದರು.  

 ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಪರಮಪೂಜ್ಯ ಶ್ರೀ ಶಿವಮೂರ್ತಿ ಮಹಾಸ್ವಾಮಿಗಳು ಸೇರಿದಂತೆ ಗ್ರಾಮಸ್ಥರು, ದೇವಸ್ಥಾನ ನಿರ್ಮಾಣ ಸಮಿತಿ ಸದಸ್ಯರು ಹಾಗೂ ಭಕ್ತರು ಉಪಸ್ಥಿತರಿದ್ದರು.