ಧರ್ಮಸ್ಥಳಕ್ಕೆ ಅಪಪ್ರಚಾರ ಖಂಡನೀಯ
Slander against Dharmasthala is condemnable.
ಸಿಂದಗಿ 03 : ಧರ್ಮಸ್ಥಳ ಕ್ಷೇತ್ರದ ವಿರುದ್ಧ ದುರುದ್ದೇಶದಿಂದ ಅಪಪ್ರಚಾರ ಮಾಡುತ್ತಿರುವ ಎಡಪಂಥೀಯರ ಜೊತೆ ಕಾಂಗ್ರೆಸ್ ಶಾಮೀಲಾಗಿರುವುದು ಅತ್ಯಂತ ಖಂಡನೀಯ ಎಂದು ಸಂಸದ ರಮೇಶ ಜಿಗಜಿಣಗಿ ಆರೋಪಿಸಿದರು.
ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ಮಂಡಲ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿ, ಧರ್ಮಸ್ಥಳದಲ್ಲಿ ರಾಜ್ಯ ಬಿಜೆಪಿ ನೇತೃತ್ವದಲ್ಲಿ ನಡೆಯಲಿರುವ ಧರ್ಮಸ್ಥಳ ಚಲೋ ಸಮಾವೇಶದಲ್ಲಿ 1 ಲಕ್ಷದಷ್ಟು ಹಿಂದೂಗಳು ಪಾಲ್ಗೊಳ್ಳಲಿದ್ದಾರೆ ಎಂದು ಸಂಸದರು ತಿಳಿಸಿದರು.
ಧರ್ಮಸ್ಥಳದ ವಿರುದ್ದ ನಡೆಯುತ್ತಿರುವ ಅಪಪ್ರಚಾರದಲ್ಲಿ ರಾಜ್ಯ ಸರ್ಕಾರದ ಕೈವಾಡ ಇದೆ. ಈ ಷಡ್ಯಂತ್ರದ ತನಿಖೆಯನ್ನು ಎನ್‌ಐಎಗೆ ವಹಿಸಿಕೊಡಬೇಕು ಎಂದರು.
ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪುರ ಮಾತನಾಡಿ, ಮೈಸೂರು ಚಾಮುಂಡೇಶ್ವರಿ ಬೆಟ್ಟ ಹಿಂದೂ ಧರ್ಮಕ್ಕೆ ಸೇರಿದ್ದಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿಕೆ ನೀಡಿರುವುದು ಅತ್ಯಂತ ಖಡನಾರ್ಹವಾದುದು ಎಂದು ಟೀಕಿಸಿದರು.
ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸುರೇಶ ಬಿರಾದಾರ, ಬಿಜೆಪಿ ಮಂಡಲ ಅಧ್ಯಕ್ಷ ಸಂತೋಷ ಪಾಟೀಲ ಡಂಬಳ, ಗುರು ತಳವಾರ ಮಾತನಾಡಿದರು. ನಂತರ ಪ್ರತಿಭಟನಾ ಸಭೆ ಮೆರವಣಿಗೆಯಾಗಿ ಮಾರ್ಾಡಾಗಿ ತಾಲ್ಲೂಕು ಪ್ರಜಾಸೌಧ ಗೆ ತೆರಳಿ ಅಲ್ಲಿ ತಹಶೀಲ್ದಾರ್ ಕರೆಪ್ಪ ಬೆಳ್ಳಿ ಅವರಿಗೆ ಮನವಿ ಸಲ್ಲಿಸಲಾಯಿತು.
ಬಿಜೆಪಿ ಜಿಲ್ಲಾ ಪ್ರಮುಖರಾದ ಮಳುಗೌಡ ಪಾಟೀಲ, ಈರಣ್ಣ ರಾವೂರ, ರಮೇಶ ಮಸಬಿನಾಳ ಹಾಗೂ ತಾಲ್ಲೂಕು ಪ್ರಮುಖರಾದ ಅಶೋಕ ಅಲ್ಲಾಪೂರ, ಪ್ರಶಾಂತ ಕದ್ದರಕಿ, ಪೀರೂ ಕೆರೂರ, ಸಿದ್ರಾಮ ಆನಗೊಂಡ, ನೀಲಮ್ಮ ಯಡ್ರಾಮಿ, ಶ್ರೀಶೈಲಗೌಡ ಬಿರಾದಾರ ಮಾಗಣಗೇರಾ, ಅಶೋಕ ನಾರಾಯಣಪುರ ಹಾಗೂ ಜೆಡಿಎಸ್ ರಾಜ್ಯ ಘಟಕದ ಕಾರ್ಯದರ್ಶಿ ಪ್ರಕಾಶ ಹಿರೇಕುರುಬರ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 