ಅಂಗನವಾಡಿ ಕೇಂದ್ರಗಳಿಗೆ ಸ್ಮಾರ್ಟ್ ಟಿವಿ ವಿತರಿಸಿ ಅಗತ್ಯ ಸೌಲಭ್ಯ ಕಲ್ಪಿಸಲಾಗುತ್ತಿದೆ :ಶ್ರೀನಿವಾಸ ಮಾನೆ
Smart TVs are being distributed to Anganwadi centers and necessary facilities are being provided: Sr
ಹಾನಗಲ್ 29 :ಸರ್ಕಾರಿ ಪ್ರಾಥಮಿಕ ಶಾಲೆ, ಅಂಗನವಾಡಿ ಸೇರಿದಂತೆ ತಾಲೂಕಿನ ಒಟ್ಟು 50 ಕಡೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಕ್ಕೆ ಕ್ರಮ ಕೈಗೊಳ್ಳಲಾಗಿದ್ದು ಅಂಗನವಾಡಿ ಕೇಂದ್ರಗಳಿಗೆ ಸ್ಮಾರ್ಟ್ ಟಿವಿ ವಿತರಿಸಿ ಅಗತ್ಯ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
ತಾಲೂಕಿನ ದಶರಥಕೊಪ್ಪ ಗ್ರಾಮದಲ್ಲಿ 19 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ 2 ನೇ ನಂ. ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು. ಸಾಮಾನ್ಯ ಹಾಗೂ ಬಡ ಕುಟುಂಬಗಳ ಮಕ್ಕಳಿಗೂ ಸಹ ಪೂರ್ವ ಪ್ರಾಥಮಿಕ ಶಿಕ್ಷಣ ಸಿಗಬೇಕು ಎನ್ನುವ ಉದ್ದೇಶದೊಂದಿಗೆ ಎಲ್‌ಕೆಜಿ, ಯುಕೆಜಿ ಆರಂಭಿಸಲಾಗಿದೆ. ಇದರಿಂದ ಸ್ಥಳೀಯವಾಗಿ ಗುಣಮಟ್ಟದ ಶಿಕ್ಷಣ ಸಿಗಲು ಸಾಧ್ಯವಾಗಲಿದೆ. ಮಾದರಿ ಅಂಗನವಾಡಿ ಕೇಂದ್ರಗಳ ಮೂಲಕ ಮಕ್ಕಳಿಗೆ ಸಕಲ ಸೌಲಭ್ಯ ಕಲ್ಪಿಸಲಾಗುತ್ತಿದೆ. ಇದರಿಂದ ಮಕ್ಕಳ ದಾಖಲಾತಿ ಹೆಚ್ಚಳಕ್ಕೆ ಅನುಕೂಲವಾಗಲಿದೆ ಎಂದರು.
ಗ್ರಾಪಂ ಅಧ್ಯಕ್ಷ ಹನುಮಂತಪ್ಪ ಮಾಳಾಪೂರ,ಉಪಾಧ್ಯಕ್ಷೆ ನನ್ನಿಮಾ ನಾಸಿಪುಡಿ, ಸದಸ್ಯರಾದ ಕಮಲವ್ವ ಹುಲ್ಲತ್ತಿ, ಲೀಲಾವತಿ ಪಾಟೀಲ, ಬಗರ್ ಹುಕುಂ ಸಮಿತಿ ಅಧ್ಯಕ್ಷ ಪುಟ್ಟಪ್ಪ ನರೇಗಲ್, ತಾಪಂ ಕೆಡಿಪಿ ಸದಸ್ಯ ಹನೀಫ್ ಬಂಕಾಪೂರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತಪ್ಪ ಮರಗಡಿ, ಮುಖಂಡರಾದ ಮುನ್ನಾ ಪಠಾಣ, ಚನ್ನಬಸಪ್ಪ ಬಿದರಗಡ್ಡಿ, ಮತೀನ್ ಶಿರಬಡಗಿ, ಶಿವಣ್ಣ ಗೊಲ್ಲರ, ರಾಜಾಹುಲಿ ಮಕ್ತೇಶ್ವರ, ಅಶೋಕ ಜಾಧವ, ರಾಮಣ್ಣ ಓಲೇಕಾರ, ಗುರುರಾಜ್ ನಿಂಗೋಜಿ, ಪರಶುರಾಮ ಖಂಡೂನವರ, ಶಿವು ಭದ್ರಾವತಿ, ಬಂಗಾರಗೌಡ ಪಾಟೀಲ, ಅಣ್ಣಪ್ಪ ಫಕ್ಕೀರಣ್ಣನವರ, ಮಂಜುನಾಥಸ್ವಾಮಿ ಹಿರೇಮಠ, ಶಿವಲಿಂಗಯ್ಯ ಕಡ್ಲಿಮಠ, ಸಿಡಿಪಿಒ ರಾಮು ಬೈಲಸೀಮಿ ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 