ವಿದ್ಯಾರ್ಥಿಗಳಿಗೆ ಸ್ಮಾರ್ಟ್ ಕ್ಲಾಸ್ ಅವಶ್ಯಕ

ಲೋಕದರ್ಶನ ವರದಿ

ಬೈಲಹೊಂಗಲ 11: ಆಧುನಿಕ ಜಗತ್ತಿನಲ್ಲಿ ವಿದ್ಯಾರ್ಥಿಗಳಿಗೆ ಸ್ಮಾರ್ಟ ಕ್ಲಾಸ್ ಅತಿ ಅವಶ್ಯವಾಗಿದೆ ಎಂದು ಶಾಸಕ ಮಹಾಂತೇಶ ಕೌಜಲಗಿ ಹೇಳಿದರು.

     ಅವರು ತಾಲೂಕಿನ ಒಕ್ಕುಂದ ಗ್ರಾಮದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ, ಸ್ಮಾರ್ಟ ಕ್ಲಾಸ್ ಉದ್ಘಾಟನೆ ಹಾಗೂ ಸಮಾಜ ವಿಜ್ಞಾನ ಮತ್ತು ಗಣಿತ ವಿಷಯದ ಕುರಿತು ವಸ್ತು ಪ್ರದರ್ಶನ ಉದ್ಘಾಟಿಸಿ ಮಾತನಾಡಿ,  ಸ್ಮಾರ್ಟ ಕ್ಲಾಸ್ ಗಳು ಶಿಕ್ಷಕರು ಮತ್ತು ಮಕ್ಕಳ ಮೇಲಿನ ಹೊರೆಯನ್ನು ಕಡಿಮೆ ಮಾಡುವುದಲ್ಲದೇ  ಮಕ್ಕಳು ಇಲ್ಲಿ ಬಹುಬೇಗ ವಿಷಯಗಳನ್ನು ಗ್ರಹಿಸುತ್ತಾರೆ.  ತರಗತಿಯ ಡಿಜಿಟಲ್ ಪರದೆಯತ್ತ ತಮ್ಮ ಮನಸ್ಸನ್ನು ಕೇಂದ್ರಿಕರಿಸುವದರಿಂದ ಪಠ್ಯದ ವಿಷಯಗಳು ಬಹು ಬೇಗನೆ ಮಕ್ಕಳ ಮನಸ್ಸಿನಲ್ಲಿ ಉಳಿಯುತ್ತವೆ. ಶಿಕ್ಷಕರು ಪಠ್ಯಕ್ಕೆ ಸಂಭಂದಿಸಿದ ಯಾವುದೇ ವಿಷಯಗಳನ್ನು ಉದಾಹರಣೆಗಳ ಮೂಲಕ ತೋರಿಸುವದರಿಂದ ವಿದ್ಯಾರ್ಥಿಗಳಲ್ಲಿ ಯಾವುದೇ ಗೊಂದಲಗಳಿರುವುದಿಲ್ಲ. ವಿದ್ಯಾರ್ಥಿಗಳು ಈ ಸೌಲಬ್ಯವನ್ನು ಸದುಪಯೋಗಪಡಿಸಿಕೊಂಡು ಉತ್ತಮ ಅಂಕ ಪಡೆದು ಶಾಲೆಯ ಕೀತರ್ಿ ತರಬೇಕೆಂದರು. 

ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ರಾಮನಗೌಡ ಕನ್ನೊಳ್ಳಿ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಆಸಕ್ತಿ ವಹಿಸಬೇಕು ಎಂದರು.

   ವೇದಿಕೆ ಮೇಲೆ ಜಿಪಂ.ಸದಸ್ಯ ಈರಣ್ಣ ಕರೀಕಟ್ಟಿ, ತಾಪಂ.ಸದಸ್ಯ ಬಸನಗೌಡ ಪಾಟೀಲ, ಗ್ರಾಪಂ.ಅಧ್ಯಕ್ಷ  ಪರ್ವತಗೌಡ ಪಾಟೀಲ, ಉಪಾಧ್ಯಕ್ಷೆ ಭಾರತಿ ಇಳಿಗೇರ, ರಾಮನಗೌಡ ಪಾಟೀಲ, ಅಶೋಕ ಭದ್ರಶೆಟ್ಟಿ ಇದ್ದರು. ಎಸ್.ಎಂ. ಶಟ್ಟೆಪ್ಪನವರ ನಿರೂಪಿಸಿದರು, ಪ್ರಾಂಶುಪಾಲ ಈರಣ್ಣ ಮುನವಳ್ಳಿ ಸ್ವಾಗತಿಸಿದರು, ವಿ,.ಎಸ್.ಕರಬನ್ನವರ ವಂದಿಸಿದರು. ಈ ಸಂದರ್ಬದಲ್ಲಿ ಶಿಕ್ಷಕ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು, ಗ್ರಾಮಸ್ಥರು ಇದ್ದರು.