ಜನುಮದಿನದ ಸಂಭ್ರಮಕ್ಕೆ ಸಾಮಾಜಿಕ ಸೇವೆಯ ಸ್ಪರ್ಶ: 500 ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್ ವಿತರಣೆ
Social Service Marks Birthday Celebration: Free School Bags Distributed to 500 Government School Stu
ಯರಗಲ್ಲ: ಕಲಾಸಿಂಚನ ಸಾಂಸ್ಕೃತಿಕ ಸಂಸ್ಥೆಯ ವತಿಯಿಂದ ಹಾಸ್ಯ ಕಲಾವಿದ ಗೋಪಾಲ ಹೂಗಾರ ಅವರ ಜನುಮದಿನದ ನಿಮಿತ್ಯ ಯರಗಲ್ಲ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 500 ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಕಾರ್ಯಕ್ರಮಕ್ಕೆ ಆಗಮಿಸಿದ್ದ ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ರುದ್ರಯ್ಯ ದಮ್ಮೂರಮಠ ಮಾತನಾಡಿ, “ಭಗವಂತ ಎಲ್ಲರಿಗೂ ಎಲ್ಲವನ್ನೂ ಕೊಟ್ಟಿರುತ್ತಾನೆ. ಆದರೆ ಕೊಡುವ ಮನಸ್ಸನ್ನು ಕೆಲವರಿಗೆ ಮಾತ್ರ ನೀಡಿರುತ್ತಾನೆ. ಅಂತಹವರಲ್ಲಿ ಹಾಸ್ಯ ಕಲಾವಿದರಾದ ಗೋಪಾಲ ಹೂಗಾರ ಹಾಗೂ ಗೋಪಾಲ ಇಂಚಗೇರಿ ಅವರು ಕೂಡ ಒಬ್ಬರು. ತಾವು ಹುಟ್ಟಿದ ಊರಿನ ಸರ್ಕಾರಿ ಶಾಲಾ ಮಕ್ಕಳಿಗೆ ಜನುಮದಿನದ ಸಂದರ್ಭದಲ್ಲಿ ಸಹಾಯ ಮಾಡಿರುವುದು ಅತ್ಯಂತ ಅರ್ಥಪೂರ್ಣವಾದ ಸಾಮಾಜಿಕ ಕಾರ್ಯ,” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ತಾಲ್ಲೂಕು ಅಕ್ಷರ ದಾಸೋಹದ ಅಧಿಕಾರಿ ಡಾ. ಎಂ.ಎಂ. ಬೆಳಗಲ್ಲ ಮಾತನಾಡಿ, “ದೊಡ್ಡ ಶ್ರೀಮಂತರು ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಿ ಅನಾವಶ್ಯಕವಾಗಿ ಹಣ ವ್ಯಯಿಸುವ ಬದಲು, ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಬಡ ಮಕ್ಕಳಿಗೆ ಈ ರೀತಿಯಾಗಿ ಸಹಾಯ ಮಾಡಿದರೆ ಅವರಿಗೆ ಸಾಕಷ್ಟು ಅನುಕೂಲವಾಗುತ್ತದೆ. ಇಂತಹ ಕಾರ್ಯಗಳಿಂದ ಮಕ್ಕಳಲ್ಲಿ ಶಾಲೆಯ ಬಗ್ಗೆ ಆಸಕ್ತಿ ಹೆಚ್ಚುವುದರ ಜೊತೆಗೆ ಹಾಜರಾತಿ ಮತ್ತು ಕಲಿಕೆಯಲ್ಲಿಯೂ ಉತ್ತಮ ಬೆಳವಣಿಗೆ ಕಂಡುಬರುತ್ತದೆ,” ಎಂದರು.
ಹಾಸ್ಯ ಕಲಾವಿದ ಗೋಪಾಲ ಇಂಚಗೇರಿ ಮಾತನಾಡಿ, “ನಾವು ಪ್ರತಿವರ್ಷ ನಮ್ಮ ಜನುಮದಿನವನ್ನು ವೃದ್ಧಾಶ್ರಮ, ಅನಾಥಾಶ್ರಮ, ಎಚ್ಐವಿ ಪೀಡಿತ ಮಕ್ಕಳು, ಕುಷ್ಠರೋಗಿಗಳು, ಮಂಗಳಮುಖಿಯರು ಹಾಗೂ ಜೋಪಡಿಗಳಲ್ಲಿ ವಾಸಿಸುವ ಅಲೆಮಾರಿ ಜನಾಂಗದವರೊಂದಿಗೆ ಆಚರಿಸುತ್ತಾ ಬಂದಿದ್ದೇವೆ. ಈ ಬಾರಿ ಸರ್ಕಾರಿ ಶಾಲಾ ಮಕ್ಕಳಿಗೆ ಸ್ಕೂಲ್ ಬ್ಯಾಗ್ ವಿತರಿಸುವ ಮೂಲಕ ಜನುಮದಿನ ಆಚರಿಸಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಸಾಮಾಜಿಕ ಸೇವಾ ಕಾರ್ಯಗಳನ್ನು ಕೈಗೊಳ್ಳುತ್ತೇವೆ,” ಎಂದು ಹೇಳಿದರು.
ಈ ಸಂದರ್ಭದಲ್ಲಿ ಎಸ್ಡಿಎಂಸಿ ಅಧ್ಯಕ್ಷೆ ಮಂಗಳಾ ಎಂ. ಗಡೇದ, ಸಿಆರ್ಪಿ ಎ.ಸಿ. ಕಸಬೇಗೌಡ, ಊರಿನ ಗಣ್ಯರಾದ ಚಂದುಮುತ್ಯಾ ಢಮನಾಳ, ಬಸವರಾಜ ಢಮನಾಳ, ಶಾಂತಗೌಡ ಪಾಟೀಲ, ಭೀಮರಾಯ ಹಳ್ಳೂರ, ಶರಣು ಗಂಗಾವತಿ, ಧರಿಯಪ್ಪ ಜಂಬಗಿ, ಗುರುರಾಜ ಬಿರಾದಾರ, ಮಹಾದೇವಪ್ಪ ಗಡೇದ, ಶಿವಾನಂದ ಪಟೇದ, ಎಸ್.ಎನ್. ಹೂಗಾರ, ಸಿದ್ದು ಹೂಗಾರ, ಲಕ್ಷ್ಮೀ ಇಂಚಗೇರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕಲಾವಿದರಾದ ಗೋಪಾಲ ಇಂಚಗೇರಿ, ಕೃಷ್ಣ ಬೀದರ, ಮಲ್ಲು ಮುದ್ದೇಬಿಹಾಳ, ಹನುಮಂತ ಮಹಾಲಿಂಗಪುರ, ಪಾಲಕರು, ಕಲಾವಿದರು, ಮುಖ್ಯಶಿಕ್ಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಜನುಮದಿನದ ಸಂಭ್ರಮವನ್ನು ಕೇವಲ ವೈಯಕ್ತಿಕ ಆಚರಣೆಗೆ ಸೀಮಿತಗೊಳಿಸದೆ, ಬಡ ಹಾಗೂ ಅಗತ್ಯವಿರುವ ಮಕ್ಕಳಿಗೆ ನೆರವಾಗುವ ಮೂಲಕ ಸಾಮಾಜಿಕ ಕಾಳಜಿ ಮೆರೆದಿರುವ ಕಲಾಸಿಂಚನ ಸಾಂಸ್ಕೃತಿಕ ಸಂಸ್ಥೆಯ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಯಿತು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 