ಶಿಕ್ಷಣ ಮತ್ತು ಉದ್ಯೋಗದಿಂದ ಸಮಾಜ ಅಭಿವೃದ್ಧಿ ಕಾಣಲು ಸಾಧ್ಯ; ಪಟೇಲ್
Social development can be achieved through education and employment: Patel
ಶಿಕ್ಷಣ ಮತ್ತು ಉದ್ಯೋಗದಿಂದ ಸಮಾಜ ಅಭಿವೃದ್ಧಿ ಕಾಣಲು ಸಾಧ್ಯ; ಪಟೇಲ್
ಕೊಪ್ಪಳ 13: ಸಮಾಜದಲ್ಲಿರುವ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವದು ನಮ್ಮೆಲ್ಲರ ಜವಾಬ್ದಾರಿ, ಏಕೆಂದರೆ ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಸಮಗ್ರ ಅಭಿವೃದ್ಧಿ ಕಾಣಲು ಸಾಧ್ಯ ಎಂದು ಕೊಪ್ಪಳ ನಗರಸಭೆಯ ಅಧ್ಯಕ್ಷ ಅಮ್ಜದ್ ಪಟೇಲ್ ಹೇಳಿದರು.
ಅವರು ನಗರದ ಶಿರಸಪ್ಪಯ್ಯನ ಮಠ ಅವರಣದಲ್ಲಿ ತಾಲೂಕ ಮಟ್ಟದ ವಿಶ್ವಕರ್ಮ ಸಮಾಜದ ನೌಕರರ ಸಂಘ ಮತ್ತು ವಿಶ್ವಕರ್ಮ ವಿದ್ಯಾರ್ಥಿ ನಿಲಯ ಇವರುಗಳ ಸಂಯುಕ್ತ ಆಶ್ರಯದಲ್ಲಿ ಏರಿ್ಡಸಿದ ಕೊಪ್ಪಳ ಜಿಲ್ಲಾ ಮಟ್ಟದ ವಿಶ್ವಕರ್ಮ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು.
ಮುಂದುವರೆದು ಮಾತನಾಡಿ ಸಮಾಜಗಳು ಸುಧಾರಣೆ ಆಗಬೇಕಾದರೆ ಸಮಾಜದಲ್ಲಿರುವ ಮಕ್ಕಳಿಗೆ ಒಳ್ಳೆಯ ಗುಣಮಟ್ಟದ ಶಿಕ್ಷಣವನ್ನು ನೀಡುವದರ ಮುಖಾಂತರ ಸಮಾಜವನ್ನು ಸುಧಾರಣೆ ಮತ್ತು ಅಭಿವೃದ್ಧಿ ಮಾಡುವ ಕೆಲಸ ಆಯ ಸಮಾಜದ ಮುಖಂಡರು ಶಿಕ್ಷಣ ಗೆ ಹೆಚ್ಚು ಆದ್ಯತೆ ನೀಡಿ ಶ್ರಮಿಸಬೇಕು ಎಂದರು, ಅದರಂತೆ ಸಮಾಜದ ಮುಖಂಡರು ಶಿಕ್ಷಣಕ್ಕೆ ಆದ್ಯತೆ ನೀಡಿ ಕೆಲಸ ಮಾಡುತ್ತಿದ್ದಾರೆ ಇದು ಒಳ್ಳೆಯ ಬೆಳವಣಿಗೆ ಪ್ರತಿಭಾ ಪುರಸ್ಕಾರ ಮೂಲಕ ಸಮಾಜದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವಂತಾಗುತ್ತದೆ ಎಂದು ಹೇಳಿದವರು, ಈ ಹಿಂದೆ ಜಗದ್ಗುರು ಮೌನೇಶ್ವರ ಜಯಂತಿ ಸಮಾರಂಭದಲ್ಲಿ ಪಾಲ್ಗೊಂಡಿರುವ ಸಂದರ್ಭದಲ್ಲಿ ಕೊಟ್ಟಂತಹ ಮಾತು ಈಡೇರಿಸಿದ್ದೇನೆ ಮುಂದೆಯೂ ಸಹ ಸಮಾಜ ಬಯಸಿದ ಅಭಿವೃದ್ಧಿಪರ ಕೆಲಸಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಕೊಪ್ಪಳ ನಗರಸಭೆಯ ಅಧ್ಯಕ್ಷ ಅಮ್ಜದ್ ಪಟೇಲ್ ಭರವಸೆ ನೀಡಿದರು,
ಶಿರಸಪ್ಪಯ್ಯನ ಮಠದ ಸ್ವಾಮೀಜಿ ಸಮಾರಂಭದ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು ,ಜೆಡಿಎಸ್ ಪಕ್ಷದ ರಾಜ್ಯ ಮುಖಂಡ ಸಿವಿ ಚಂದ್ರಶೇಖರ್ ರವರು ಕಾರ್ಯಕ್ರಮದಲ್ಲಿ ವಿಶೇಷ ಆಮಂತ್ರಿತರಾಗಿ ಪಾಲ್ಗೊಂಡು ಮಾತನಾಡಿ ಸಮಾಜದ ಅಭಿವೃದ್ಧಿಪರ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡುವ ಇಂತಹ ಕಾರ್ಯಕ್ರಮಗಳಿಗೆ ತಮ್ಮ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದರು, ವಿಶ್ವಕರ್ಮ ಸಮಾಜದ ಮುಖಂಡರು ನೌಕರರು ವಿದ್ಯಾರ್ಥಿಗಳ ಪಾಲಕರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು ನಂತರ ಪ್ರತಿಭಾ ಪುರಸ್ಕಾರ ಸಮಾರಂಭ ಜರುಗಿತ್ತು, ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ವಿತರಣೆ ಮಾಡಲಾಯಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 