ಶಾಂತಿಯುತ, ಸಮೃದ್ಧ ಹಾಗೂ ಸಹಬಾಳ್ವೆಗೆ ಸಾಮಾಜಿಕ ನಾಯಯ ಅತ್ಯಗತ್ಯ -- ಮುತಾಲಿಕದೇಸಾಯಿ
ಹಾವೇರಿ 28 : ಜನತೆಯ ಶಾಂತಿಯುತ, ಸಮೃದ್ಧ ಹಾಗೂ ಸಹಬಾಳ್ವೆಗೆ ಸಾಮಾಜಿಕ ನ್ಯಾಯ ಅತ್ಯಗತ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಬಿ.ಆರ್.ಮುತಾಲಿಕದೇಸಾಯಿ ಅವರು ಹೇಳಿದರು.
ಡಾ.ಬಿ.ಆರ್.ಅಂಬೇಡ್ಕರ ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ ನಂ.2ರಲ್ಲಿ ಗುರುವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ ಹಾಗೂ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಾಮಾಜಿಕ ಅಸಮಾನತೆಯನ್ನು ತೊಡೆದುಹಾಕಬೇಕು ಹಾಗೂ ಸಾಮಾಜಿಕ ನ್ಯಾಯದ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಕೆಲಸವಾಗಬೇಕು. ಕಾನೂನು ಅರಿವು ಹಾಗೂ ನೆರವಿನ ಅಶವ್ಯಕತೆ ಇದ್ದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ಟೋಲ್ ಫ್ರೀ ಸಹಾಯವಾಣಿ ಸಂಖ್ಯೆ 15100 ಸಂಪರ್ಕಿಸಬಹುದು ಎಂದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಾಯಕ ಕಾನೂನು ನೆರವು ಅಭಿರಕ್ಷಕ ಎನ್.ಎನ್.ಡಿಳ್ಳೆಪ್ಪನರ ಅವರು ವಿಶ್ವ ಸಾಮಾಜಿಕ ನ್ಯಾಯ ಸಿದ್ದಾಂತದ ಕುರಿತು ಉಪನ್ಯಾಸ ನೀಡಿದರು.
ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಆಂಜನೇಯ ಹುಲ್ಲಾಳ ಅವರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಸ್.ಎಚ್.ಜತ್ತಿ, ಕಾರ್ಯದರ್ಶಿ ಪಿ.ಎಸ್.ಹೆಬ್ಬಾಳ ಹಾಗೂ ನಿಲಯ ಪಾಲಕಿ ನಂದಾ ಹೂಗಾರ ಅವರು ಉಪಸ್ಥಿತರಿದ್ದರು.