ಆರೇಮಲ್ಲಾಪುರ ಸರ್ಕಾರಿ ಶಾಲೆಯಲ್ಲಿ ಸಮಾಜಮುಖಿ ಸೇವೆ; ಶಿಕ್ಷಣಕ್ಕೆ ಹಳೆ ವಿದ್ಯಾರ್ಥಿಗಳ ಬೆಂಬಲ
Social service at Aaremallapura Government School; alumni support for education
ರಾಣೆಬೆನ್ನೂರು, ಜು. 3: ತಾಲೂಕಿನ ಆರೇಮಲ್ಲಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಲ್ಕೆಜಿ ಹಾಗೂ ಯುಕೆಜಿ ಮಕ್ಕಳಿಗೆ ಹಳೆ ವಿದ್ಯಾರ್ಥಿಗಳ ಸಂಘದ ವತಿಯಿಂದ ಉಚಿತವಾಗಿ ಊಟದ ತಟ್ಟೆಗಳನ್ನು ವಿತರಿಸಲಾಯಿತು. ಶಾಲಾ ಮಕ್ಕಳ ಅನುಕೂಲಕ್ಕಾಗಿ ಹಳೆ ವಿದ್ಯಾರ್ಥಿಗಳ ಸಂಘ ಈ ಸಮಾಜಮುಖಿ ಕಾರ್ಯಕ್ರಮವನ್ನು ಆಯೋಜಿಸಿದ್ದು, ಶಾಲೆಯ ಎಲ್ಲ ವಿದ್ಯಾರ್ಥಿಗಳಿಗೆ ಊಟದ ತಟ್ಟೆಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಸಂಘದ ಪದಾಧಿಕಾರಿ ಹಾಗೂ ಮಾಜಿ ಸೈನಿಕ ರವಿಕುಮಾರ ಡಿ. ಐರಣಿ, ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಮೂಲಸೌಕರ್ಯಗಳ ವೃದ್ಧಿಗೆ ಹಳೆ ವಿದ್ಯಾರ್ಥಿಗಳು ನಿರಂತರವಾಗಿ ಸಹಕಾರ ನೀಡಬೇಕು. ಸಮಾಜದ ಸಹಭಾಗಿತ್ವದಿಂದ ಸರ್ಕಾರಿ ಶಾಲೆಗಳನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ಸಾಧ್ಯ ಎಂದು ಹೇಳಿದರು.
ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವೃಂದ ಹಳೆ ವಿದ್ಯಾರ್ಥಿಗಳ ಸಂಘದ ಸೇವಾ ಮನೋಭಾವವನ್ನು ಶ್ಲಾಘಿಸಿ, ವಿದ್ಯಾರ್ಥಿಗಳ ಕಲ್ಯಾಣಕ್ಕಾಗಿ ನೀಡಿದ ಸಹಾಯಕ್ಕೆ ಕೃತಜ್ಞತೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಸಂಘದ ಸದಸ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಗ್ರಂಥಪಾಲಕ ಬಸವರಾಜ ಕೋಳಜಿ, ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ಶಾಲಾ ಸಿಬ್ಬಂದಿ, ಎಸ್ಡಿಎಂಸಿ ಸದಸ್ಯರು, ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 