ಸಾಮಾಜಿಕ ಕಳಕಳಿಯ ಪತ್ರಕರ್ತ ಮಲ್ಲಿಕಾರ್ಜುನ ಪಟ್ಟಣಶೆಟ್ಟಿ: ಕುಳೆಕುಮಟಗಿ
Socially concerned journalist Mallikarjuna Pattanashetty: Kulekumatagi
ದೇವರಹಿಪ್ಪರಗಿ 25:ಸಾಮಾಜಿಕ ಕಳಕಳಿಯ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುವಂತ ಕನ್ನಡ ಪ್ರಭ ಪತ್ರಿಕೆಯ ವರದಿಗಾರ ಮಲ್ಲಿಕಾರ್ಜುನ ಪಟ್ಟಣಶೆಟ್ಟಿ ಅವರು ತಾಲೂಕಿನಲ್ಲಿ ಮಾಡಿದ ಸಾಧನೆ ಗುರುತಿಸಿ ಜಿಲ್ಲಾ ಪ್ರಶಸ್ತಿ ಪ್ರದಾನ ಮಾಡಿದ್ದು ಹೆಮ್ಮೆಯ ವಿಷಯವಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ(ಹಸಿರು ಸೇನೆ) ತಾಲೂಕು ಘಟಕದ ಅಧ್ಯಕ್ಷರಾದ ಈರಪ್ಪ ಕುಳೇಕುಮಟಗಿ ಹೇಳಿದರು.
ಶುಕ್ರವಾರದಂದು ಅವರ ಸ್ವಗ್ರಹದಲ್ಲಿ ತಾಲೂಕು ರೈತ ಸಂಘದ ಪದಾಧಿಕಾರಿಗಳ ನೇತೃತ್ವದಲ್ಲಿ ಸನ್ಮಾನಿಸಿ, ಗೌರವಿಸಿ ಮಾತನಾಡಿದ ಅವರು, ನಮ್ಮ ರೈತ ಸಂಘದಿಂದ ನಡೆದ ಹಲವಾರು ಪ್ರತಿಭಟನೆ, ರೈತರ ಸಮಸ್ಯೆಗಳ ಕುರಿತು ಸದಾ ಮಾರ್ಗದರ್ಶನ ನೀಡುತ್ತಾ ಬಂದಿದ್ದಾರೆ. ಸಮಾಜದಲ್ಲಿ ಕಾರ್ಯಾಂಗ ಶಾಸಕಾಂಗ ನ್ಯಾಯಾಂಗ ಸರಿಯಾದ ರೀತಿಯಲ್ಲಿ ಕೆಲಸ ಮಾಡುತ್ತಾ ಇದ್ದೀಯಾ ಇಲ್ಲ ಎಂದು ನಿಗಾ ಇಟ್ಟು ಸಮಾಜದಲ್ಲಿ ಆಗುವಂತಹ ವಿವಿಧ ರೀತಿಯ ಬೆಳವಣಿಗೆಗಳನ್ನು ಬಿತ್ತರಿಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ತಮ್ಮದೇ ಆದ ಬರವಣಿಗೆಯ ಮೂಲಕ ಮಾಡುತ್ತಿದ್ದಾರೆ. ರೈತ ಸಂಘ ಹಾಗೂ ರೈತರ ಸಮಸ್ಯೆಗಳಿಗೆ ಸದಾ ಸ್ಪಂದಿಸುತ್ತಾ ವರದಿ ಮಾಡಿದ ಅವರಿಗೆ ಇನ್ನು ರಾಜ್ಯಮಟ್ಟದ ಪ್ರಶಸ್ತಿಗಳನ್ನು ಲಭಿಸಲಿ ಎಂದು ರೈತ ಸಂಘದಿಂದ ಶುಭ ಹಾರೈಸುತ್ತೇವೆ ಎಂದು ಹೇಳಿದರು.ಇದೇ ಸಂದರ್ಭದಲ್ಲಿ ರೈತ ಸಂಘದ ಗೌರವಾಧ್ಯಕ್ಷರಾದ ಶಿವಾನಂದ ಹಿರೇಮಠ ಸೇರಿದಂತೆ ಹಲವಾರು ಜನ ಸದಸ್ಯರು ಉಪಸ್ಥಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 