ಡಾ. ಎನ್.ಎ. ಮಗದುಮ್ ಜನ್ಮದಿನ ಅಂಗವಾಗಿ ಸಮಾಜಮುಖಿ ಕಾರ್ಯಕ್ರಮಗಳು
Socially-oriented programs marking Dr. N.A. Magadum's birthday
ಮಾಂಜರಿ 22: ಗ್ರಾಮೀಣ ಭಾಗದ ಸಾಮಾನ್ಯ ವಿದ್ಯಾರ್ಥಿಗಳಿಗೆ ಪ್ರಥಮ ತರಗತಿಯಿಂದ ಪದವಿವರೆಗೆ ಹಾಗೂ ವೈದ್ಯಕೀಯ ಶಿಕ್ಷಣದವರೆಗೆ ಗುಣಮಟ್ಟದ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಡಾ. ಎನ್.ಎ. ಮಗದುಮ್ ಅವರು ಗೊಮಟೇಶ ಶಿಕ್ಷಣ ಸಂಸ್ಥೆಯ ಮೂಲಕ ಸಲ್ಲಿಸುತ್ತಿರುವ ಶೈಕ್ಷಣಿಕ ಸೇವೆ ಶ್ಲಾಘನೀಯವಾಗಿದೆ ಎಂದು ಚಿಕ್ಕೋಡಿಯ ಸಂಪಾದನ ಚರಮೂರ್ತಿ ಮಠದ ಪರಮಪೂಜ್ಯ ಸಂಪಾದನ ಮಹಾಸ್ವಾಮೀಜಿ ಹೇಳಿದರು. ಅಂಕಲಿಯ ಗೊಮಟೇಶ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ. ಎನ್.ಎ. ಮಗದುಮ್ ಅವರ 69ನೇ ಜನ್ಮದಿನದ ಅಂಗವಾಗಿ ಬುಧವಾರ ಸಂಸ್ಥೆಯ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಗೊಮಟೇಶ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಡಾ. ಹರ್ಷವರ್ಧನ ಮಗದುಮ್, ಕಾರ್ಯದರ್ಶಿ ಸುರೇಶ್ ಚೌಗುಲೆ, ಶ್ರೀಮತಿ ಲಲಿತಾ ಮಗದುಮ್, ಗೊಮಟೇಶ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಕೇಂದ್ರದ ಪ್ರಾಚಾರ್ಯ ಡಾ. ಪ್ರಸನ್ನ ಸಾವನೂರ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು. ಜನ್ಮದಿನದ ಅಂಗವಾಗಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ವಿತರಣೆ, ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ ಓಷಧೀಯ ಸಸಿ ನೆಡುವ ಕಾರ್ಯಕ್ರಮ ಹಾಗೂ ಉಚಿತ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಗಳಿಗೆ ಪರಮಪೂಜ್ಯ ಮಹಾಸ್ವಾಮೀಜಿ, ಡಾ. ಎನ್.ಎ. ಮಗದುಮ್ ಹಾಗೂ ಗಣ್ಯರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಡಾ. ಎನ್.ಎ. ಮಗದುಮ್ ಅವರಿಗೆ ಅಭಿಮಾನಿಗಳು, ಹಿತೈಷಿಗಳು ಜನ್ಮದಿನದ ಶುಭಾಶಯ ಕೋರಿದರು. ಡಾ. ಪ್ರಸನ್ನ ಸಾವನೂರ, ಲಲಿತಾ ಮಗದುಮ್, ಡಾ. ಹರ್ಷವರ್ಧನ ಮಗದುಮ್ ಹಾಗೂ ರಾಮಚಂದ್ರ ಚೌಗುಲೆ ಅವರು ಡಾ. ಮಗದುಮ್ ಅವರ ಶೈಕ್ಷಣಿಕ ಮತ್ತು ಸಾಮಾಜಿಕ ಸೇವೆಯನ್ನು ಪ್ರಶಂಸಿಸಿದರು. ಕಾರ್ಯಕ್ರಮದಲ್ಲಿ ಗೊಮಟೇಶ ಶಿಕ್ಷಣ ಸಂಸ್ಥೆಯ ವಿವಿಧ ಘಟಕಗಳ ಪ್ರಾಚಾರ್ಯರು, ಶಿಕ್ಷಕರು, ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ಸಿಬಿಎಸ್ಇ ಶಾಲೆಯ ಪ್ರಾಚಾರ್ಯ ಎನ್.ಎಸ್. ನಿಡಗುಂದೆ ಅತಿಥಿಗಳನ್ನು ಸ್ವಾಗತಿಸಿದರು. ವಿವೇಕ ಸೋಲಾಪುರಕರ ಕಾರ್ಯಕ್ರಮ ನಿರೂಪಿಸಿದರು. ಯಾಕೂಬ್ ತಾಂಬಟ್ ವಂದಿಸಿದರು.
ಅದ್ದೂರಿಯಿಂದ ಜರುಗಿದ ಕೋಣ ಬಿಡುವ ಸಂಪ್ರದಾಯ ಕಾರ್ಯಕ್ರಮ : ಸಂಕೇಶ್ವರ ಮಹಾಲಕ್ಷ್ಮೀ ಜಾತ್ರೆಯ ಚೊಚ್ವಲು ಕಾರ್ಯಕ್ಕೆ ಚಾಲನೆ
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು 