ಕೊಪ್ಪಳ 13: ಜಿಲ್ಲೆಯಲ್ಲಿ ಘನ ತ್ಯಾಜ್ಯ ವಸ್ತುಗಳ ನಿರ್ವಹಣೆ ಸರಿಯಾಗಿ ನಡೆಯುತ್ತಿಲ್ಲ, ಇದು ಕಟ್ಟುನಿಟ್ಟಾಗಿ ನಡೆಯಬೇಕು, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ, ಗ್ರಾಮ ಪಂಚಾಯತ ಅಧಿಕಾರಿಗಳು ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ರಾಷ್ಟ್ರೀಯ ಹಸಿರು ನ್ಯಾಯಪೀಠದ ರಾಜ್ಯಮಟ್ಟದ ಸಮಿತಿಯ ಅಧ್ಯಕ್ಷರಾಧ ಸುಭಾಷ ಬಿ.ಆಡಿ ಹೇಳಿದರು.
ಜಿಲ್ಲಾಡಳಿತ ಸಭಾಂಗಣದಲ್ಲಿ ಇಂದು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಪ್ಲಾಸ್ಟಿಕ್ ಬಳಕೆ ನಿಷೇಧವಿದ್ದರೂ ಇನ್ನೂ ಜನರು ಬಳಕೆ ಮಾಡುತ್ತಿದ್ದಾರೆ ಇದರ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು. ಕಸ ಸಂಗ್ರಹ ವಾಹನಗಳಿಗೆ ಕಸ ನೀಡದೆ ಎಲ್ಲೆಂದರಲ್ಲಿ ಕಸ ಎಸೆಯುವವರು ಹಾಗೂ ಸ್ಚಚ್ಛತೆ ಮತ್ತು ಪ್ಲಾಸ್ಟಿಕ್ ನಿಷೇಧದದ ಕುರಿತ ನಿಯಮಗಳನ್ನು ಪಾಲಿಸದವರ ವಿರುದ್ಧ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ದಂಡ ವಿಧಿಸಬೇಕು. ಹಳ್ಳಿಗಳಲ್ಲಿ ಗ್ರಾಮ ಪಂಚಾಯತ ಪಿ.ಡಿ.ಒ ಅಧಿಕಾರಿಗಳು ಕ್ಲಸ್ಟರ್ ಆಫ್ ಗ್ರಾಮ ಪಂಚಾಯತ ಎಂಬ ಯೋಜನೆ ಹಾಕಿಕೊಂಡು ಘನ ತ್ಯಾಜ್ಯ ವಿಲೇವಾರಿಯ ನಿರ್ವಹಣೆ ಮಾಡಬೇಕು. ಈಗಾಗಲೇ ಜಿಲ್ಲೆಗೆ ಈ ಯೋಜನೆಯಡಿ ಅನುದಾನ ಬಂದಿದ್ದು ಅದನ್ನು ಸರಿಯಾಗಿ ಬಳಸಿಕೊಳ್ಳುವಂತೆ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ, ಜಿ.ಪಂ. ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ರಘುನಂದನ್ ಮೂತರ್ಿ ಉಪಸ್ಥಿತರಿದ್ದರು.