ಜನರ ಸಮಸ್ಯೆ ಪರಿಹಾರವೇ ಮೊದಲ ಆದ್ಯತೆ: ಶ್ರೀನಿವಾಸ ಮಾನೆ
Solving people's problems is the first priority: Srinivas Mane
ಲೋಕದರ್ಶನ ವರದಿ
ಹಾನಗಲ್ 15 : ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಸ್ಪಂದಿಸುವ ಉದ್ದೇಶದಿಂದ ಶಾಸಕ ಶ್ರೀನಿವಾಸ ಮಾನೆ ಅವರು ಆಯೋಜಿಸಿದ್ದ ಜನತಾದರ್ಶನ ಕಾರ್ಯಕ್ರಮಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.
ಕ್ಷೇತ್ರದ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ನೂರಾರು ಜನರು ತಮ್ಮ ಅಹವಾಲುಗಳನ್ನು ಶಾಸಕರ ಮುಂದಿಟ್ಟರು. ಕುಡಿಯುವ ನೀರಿನ ಸಮಸ್ಯೆ, ರಸ್ತೆ ಅಭಿವೃದ್ಧಿ, ಚರಂಡಿ ವ್ಯವಸ್ಥೆ, ವಿದ್ಯುತ್ ಸಮಸ್ಯೆ, ವಸತಿ ಯೋಜನೆ, ಪಿಂಚಣಿ ಸೌಲಭ್ಯ ಸೇರಿದಂತೆ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರು ಮನವಿ ಸಲ್ಲಿಸಿದರು. ಪ್ರತಿಯೊಂದು ಅಹವಾಲನ್ನು ಗಮನವಿಟ್ಟು ಆಲಿಸಿದ ಶಾಸಕ ಮಾನೆ, ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ತ್ವರಿತ ಕ್ರಮ ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸುವುದು ನನ್ನ ಮೊದಲ ಆದ್ಯತೆ. ಜನರು ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ಬರಬಾರದು. ಜನತಾ ದರ್ಶನದ ಮೂಲಕ ಜನರ ಮನೆ ಬಾಗಿಲಿಗೆ ಆಡಳಿತ ತಲುಪಿಸುವ ಕೆಲಸ ಪ್ರತಿ ವಾರವೂ ಮಾಡಲಾಗುತ್ತಿದೆ ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು. ಕಾರ್ಯಕ್ರಮದಲ್ಲಿ ಹಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ದೊರೆತ ಹಿನ್ನೆಲೆಯಲ್ಲಿ ಸಾರ್ವಜನಿಕರು ಸಂತಸ ವ್ಯಕ್ತಪಡಿಸಿದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 