ಸೋಮಶೇಖರ್ ರೆಡ್ಡಿ ಬಂಧನಕ್ಕೆ ಕನ್ನಡಪರ ಸಂಘಟನೆ ಆಗ್ರಹ
ಬೆಂಗಳೂರು, ಜ.16: ಸಮಾಜದಲ್ಲಿ ಶಾಂತಿ ಕದಡುತ್ತಿರುವ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಅವರನ್ನು ಬಂಧಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕ್ರಾಂತಿ ಸೇನೆ ಸದಸ್ಯರು ನಗರದಲ್ಲಿಂದು ಪ್ರತಿಭಟನೆ ನಡೆಸಿದರು.
ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಎದುರು ಜಮಾಯಿಸಿದ, ಸೇನೆ ಕಾರ್ಯಕರ್ತರು, ಸೋಮಶೇಖರ ರೆಡ್ಡಿ ತಮ್ಮ ಶಾಸಕ ಸ್ಥಾನಕ್ಕೆ ಗೌರವ ತರುವಂತೆ ಮಾತನಾಡಬೇಕು. ಅವರ ಹೇಳಿಕೆ ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ಮಧ್ಯೆ ವಿಷಬೀಜ ಬಿತ್ತುವಂತಿದೆ ಎಂದು ದೂರಿದರು.
ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿ ಸೇನೆ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಸೈಫುಲ್ಲಾ, ಬಳ್ಳಾರಿಯ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಸಭೆಯೊಂದರಲ್ಲಿ ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ. ಅವರ ಹೇಳಿಕೆ ಸೌಹಾರ್ದತೆ ಹಾಳುಮಾಡುವ ದುರುದ್ದೇಶ ಹೊಂಡಿದೆ. ಕೋಮು ಸಾಮರಸ್ಯಕ್ಕೆ ಧಕ್ಕೆ ತರುವಂತಹ ಹೇಳಿಕೆ ನೀಡಿದ್ದರೂ ಸಹ ರೆಡ್ಡಿ ಅವರನ್ನು ಆಡಳಿತಾರೂಧ ಬಿಜೆಪಿ ಸರ್ಕಾರ ಅವರನ್ನು ಬಂಧಿಸಿಲ್ಲ ಎಂದು ದೂರಿದರು.
ಸಮಾಜದಲ್ಲಿ ಶಾಂತಿ ಕದಡುವ, ಧರ್ಮಗಳ ನಡುವೆ ಸಂಘರ್ಷ ಉಂಟುಮಾಡುವ ಇಂತಹ ಹೇಳಿಕೆ ಖಂಡನೀಯ. ಸೋಮಶೇಖರ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 