ಬಳ್ಳಾರಿ,ಜೂ 05: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಇಲಾಖೆಯ ಸಾಂಸ್ಕೃತಿಕ ಸಮುಚ್ಚಯ ಆವರಣದಲ್ಲಿ ನಗರ ಶಾಸಕರಾದ ಜಿ.ಎಸ್.ಸೋಮಶೇಖರ ರೆಡ್ಡಿ ಅವರು ಶುಕ್ರವಾರ ಗಿಡನೆಟ್ಟು ನೀರಣಿಸಿದ ಮೂಲಕ ವಿಶ್ವ ಪರಿಸರ ದಿನಾಚರಣೆಗೆ ಚಾಲನೆ ನೀಡಿದರು.
ಮಹಾನಗರ ಪಾಲಿಕೆಯ ಆಯುಕ್ತರಾದ ತುಷಾರಾಮಣಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿದರ್ೇಶಕರಾದ ಸಿದ್ದಲಿಂಗೇಶ ಕೆ.ರಂಗಣ್ಣವರ ಸಹ ಇದೇ ಸಂದರ್ಭದಲ್ಲಿ ಗಿಡ ನೆಟ್ಟರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಿಬ್ಬಂದಿ ವರ್ಗದವರು, ಜಿಲ್ಲಾ ಕಸಾಪ ಅಧ್ಯಕ್ಷ ಸಿದ್ದರಾಮ ಕಲ್ಮಠ ಸೇರಿದಂತೆ ಇತರೆ ಗಣ್ಯವ್ಯಕ್ತಿಗಳು ಇದ್ದರು.