ಬೆಂಗಳೂರು, ಮೇ 5, ರಾಜ್ಯದಲ್ಲಿ ಶೀಘ್ರದಲ್ಲೇ ಮುಜರಾಯಿ ಇಲಾಖೆಯ ಎಲ್ಲಾ ದೇವಾಲಯಗಳನ್ನು ತೆರೆಯುವುದಾಗಿ ಮುಜರಾಯಿ ಇಲಾಖೆ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.ಸಾಮಾಜಿಕ ಅಂತರ ನಿಯಮ ಕಾಯ್ದುಕೊಳ್ಳುವ ಷರತ್ತಿನ ಮೇಲೆಯೇ ದೇವಾಲಯಗಳಲ್ಲಿ ಪ್ರವೇಶಕ್ಕೆ ಅನುಮತಿ ನೀಡುವುದಾಗಿ ಖಾಸಗಿ ಮಾಧ್ಯಮವೊಂದಕ್ಕೆ ಅವರು ಹೇಳಿದ್ದಾರೆ.ದೇವಾಲಯದ ಒಳಗೆ ನೂಕು ನುಗ್ಗಲಿಗೆ ಅವಕಾಶ ಇಲ್ಲ. ಭಕ್ತರು ಸರತಿ ಸಾಲಿನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡೆ ದೇವರ ದರ್ಶನ ಪಡೆಯಬೇಕು. ಆರಂಭದಲ್ಲಿ ಮುಜುರಾಯಿ ಇಲಾಖೆಗೆ ಸೇರಿದ ಪ್ರಮುಖ ದೇವಸ್ಥಾನಗಳನ್ನು ತೆರೆಯಲಾಗುವುದು. ನಂತರ ಇತರೆ ದೇವಾಲಯಗಳನ್ನು ತೆರೆಯಲು ಅವಕಾಶ ನೀಡಲಾಗುವುದು ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.