ರಾಜ್ಯ ವನ್ಯಜೀವಿ ಮಂಡಳಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ಸೌಮ್ಯರೆಡ್ಡಿ ನಿರ್ಧಾರ
ಬೆಂಗಳೂರು, ಮಾ. 21: ವಿವಾದಿತ ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆ ಜಾರಿಗೆ ಇದ್ದ ತೊಡಕು ನಿವಾರಿಸಲು ರಾಜ್ಯದ ವನ್ಯಜೀವಿ ಮಂಡಳಿ ತೀರ್ಮಾನಿಸಿರುವ ಕಾರಣ ವನ್ಯಜೀವಿ ಮಂಡಳಿ ಸದಸ್ಯತ್ವಕ್ಕೆ ಜಯನಗರ ಶಾಸಕಿ ಸೌಮ್ಯರೆಡ್ಡಿ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ.ಈ ಕುರಿತ ಪ್ರಸ್ತಾವನೆಗೆ ಅನುಮೋದನೆ ನೀಡಿರುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಮಾ.9 ರಂದು ನಡೆದ 14ನೇ ವನ್ಯಜೀವಿ ಮಂಡಳಿ ಸಭೆಯಲ್ಲಿ ಪರಿಸರವಾದಿಗಳು ಮತ್ತು ಮಂಡಳಿಯ ಕೆಲ ಸದಸ್ಯರಿಂದ ತೀವ್ರ ವಿರೋಧಕ್ಕೊಳಗಾಗಿದ್ದ ಯೋಜನೆಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ಪರಿಸರವಾದಿಗಳ ವಿರೋಧದ ಮಧ್ಯೆಯೂ ಯೋಜನೆ ಪರ ತೀರ್ಮಾನ ಕೈಗೊಳ್ಳಲಾಗಿದ್ದು, ಯೋಜನೆ ಬೆಂಬಲಿಸಿ ಕೇಂದ್ರಕ್ಕೆ ಶಿಫಾರಸು ಮಾಡಲು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಹಲವಾರು ರಾಜಕೀಯ ಒತ್ತಡಗಳಿಂದ ಹಾಗೂ ಕಾಣದ ಕೈಗಳ ಕೈವಾಡದಿಂದ ಮತ್ತೆ ಯೋಜನೆ ಕುರಿತು ಚರ್ಚಿಸಲು ಮುಖ್ಯಮಂತ್ರಿಗಳು ಮತ್ತೊಮ್ಮೆ ಸಭೆ ನಡೆಸಿದ್ದಾರೆ. ಬೇರೆ ಮಾರ್ಗವಿದ್ದರೂ ಈ ಯೋಜನೆಯನ್ನು ಏಕೆ ಮಾಡಿದ್ದು ಹಾಗೂ ಸಭೆಯಲ್ಲಿ ಅರಣ್ಯ ಸಚಿವರೇ ಗೈರು ಹಾಜರಾಗಿದ್ದರು. ರಾಜ್ಯ ವನ್ಯಜೀವಿ ಮಂಡಳಿ ಅಸ್ತಿತ್ವದಲ್ಲಿದ್ದರೂ ಪ್ರಯೋಜನವಿಲ್ಲದಂತಾಗಿದೆ. ಈ ಯೋಜನೆ ಜಾರಿಗೆ ಬಂದರೆ ಮರಗಳ ಮಾರಣಹೋಮದಿಂದ ಮುಂದೆ ಪರಿಸರದ ಮೇಲಾಗುವ ದುಷ್ಪರಿಣಾಮಗಳಿಗೆ ಸರ್ಕಾರದ ಈ ನಿರ್ಧಾರವೇ ಕಾರಣವಾಗಿರುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.ಈ ಯೋಜನೆಯನ್ನು ಮುಖ್ಯಮಂತ್ರಿಗಳು ಜಾರಿಗೆ ತರಲು ನಿರ್ಧರಿಸಿರುವುದರಿಂದ ನಾನು ನನ್ನ ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ನಿರ್ಧರಿಸುತ್ತಿರುವುದಾಗಿ ಸೌಮ್ಯಾರೆಡ್ಡಿ ಹೇಳಿದ್ದು, ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಅರಣ್ಯ ಸಚಿವರಿಗೆ ಪತ್ರ ನೀಡಿದ್ದಾರೆ.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 