ಚೊಚ್ಚಲ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಟ್ರೋಫಿ ಗೆದ್ದು ಇತಿಹಾಸ ನಿರ್ಮಿಸಿದ ದಕ್ಷಿಣ ಆಫ್ರಿಕಾ
South Africa creates history by winning its first World Test Championship trophy
ಆಸ್ಟ್ರೇಲಿಯಾ ವಿರುದ್ಧದ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 5 ವಿಕೆಟ್ ಗಳಿಂದ ಗೆಲುವು ಸಾಧಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಟ್ರೋಫಿ ಗೆದ್ದು ಇತಿಹಾಸ ನಿರ್ಮಿಸಿದೆ. . ಈ ಮೂಲಕ ದಕ್ಷಿಣ ಆಫ್ರಿಕಾಕ್ಕಿದ್ದ ಚೋಕರ್ಸ್ ಹಣೆಪಟ್ಟಿ ಕಳಚಿದೆ.
ಲಂಡನ್ ನ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಮೊದಲು ಆಸ್ಟ್ರೇಲಿಯಾ ದಕ್ಷಿಣ ಆಫ್ರಿಕಾಗೆ ಗೆಲ್ಲಲು 282 ರನ್ ಗಳ ಗುರಿ ನೀಡಿತ್ತು.
ದಕ್ಷಿಣ ಆಫ್ರಿಕಾ ಪರ ಐಡೆನ್ ಮಾರ್ಕ್ರಾಮ್ 136 ರನ್ ಗಳ ಭರ್ಜರಿ ಶತಕ ಸಿಡಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಇನ್ನು ತಂಡದ ನಾಯಕ ಟೆಂಬಾ ಬವುಮಾ 66 ರನ್ ಬಾರಿಸಿದರು. ಅಂತಿಮವಾಗಿ ಆಫ್ರಿಕಾ 5 ವಿಕೆಟ್ ನಷ್ಟಕ್ಕೆ 282 ರನ್ ಬಾರಿಸುವ ಮೂಲಕ ಚೊಚ್ಚಲ ಟೆಸ್ಟ್ ಚಾಂಪಿಯನ್ಶಿಪ್ ಟ್ರೋಫಿ ಮುಡಿಗೇರಿಸಿಕೊಂಡಿತು.
ದಕ್ಷಿಣ ಆಫ್ರಿಕಾ ಪರ ಬೌಲಿಂಗ್ ನಲ್ಲಿ ಕಾಗಿಸೋ ರಬಾಡಾ ಒಟ್ಟಾರೆ 9 ವಿಕೆಟ್ ಪಡೆದಿದ್ದರೆ, ಮಾರ್ಕೊ ಜಾನ್ಸೆನ್ 4 ಮತ್ತು ಲುಂಗಿ ಎನ್‌ಗಿಡಿ 3 ವಿಕೆಟ್ ಪಡೆದು ದಕ್ಷಿಣ ಆಫ್ರಿಕಾದ ಚೊಚ್ಚಲ ಟ್ರೋಫಿ ಗೆಲ್ಲುವ ಕನಸನ್ನು ನನಸು ಮಾಡಿದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 