ಶ್ರೀನಗರ, ಮೇ 25,ದಕ್ಷಿಣ ಕಾಶ್ಮೀರ ಜಿಲ್ಲೆಯ ಕುಲ್ಗಾವ್ ನಲ್ಲಿ ಸೋಮವಾರ ಭದ್ರತಾ ಪಡೆಗಳ ಭಯೋತ್ಪಾದಕರ ಶೋಧ ಕಾರ್ಯಾಚರಣೆ ವೇಳೆ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಕುಲ್ಗಾವ್ ಜಿಲ್ಲೆಯ ಖುರ್ ಹಾಜಿಪೊರಾ ಗ್ರಾಮದಲ್ಲಿ ಉಗ್ರರು ಅಡಗಿರುವ ಖಚಿತ ಮಾಹಿತಿಯ ನಂತರ, ಜಮ್ಮು ಕಾಶ್ಮೀರ ಪೊಲೀಸರ ರಾಷ್ಟ್ರೀಯ ರೈಫಲ್ಸ್ (ಆರ್ಆರ್), ಅರೆಸೇನಾಪಡೆ ಮತ್ತು ವಿಶೇಷ ಕಾರ್ಯಾಚರಣೆ (ಎಸ್‌ಒಜಿ) ಪಡೆಗಳು ಜಂಟಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ ಭದ್ರತಾ ಪಡೆಗಳ ಆಗಮನವಾಗುತ್ತಿದ್ದಂತೆ ಉಗ್ರರು ಗುಂಡಿನ ದಾಳಿಗೆ ಮುಂದಾದರು ಭದ್ರತಾ ಪಡೆಗಳ ಪ್ರತಿದಾಳಿಯಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ ಎಂದು ಅಧಿಕೃತ ಮೂಲಗಳು ಖಚಿತಪಡಿಸಿವೆ. ಹಾಗೂ ಇನ್ನೂ ಇಬ್ಬರು ಅಥವಾ ಮೂರು ಉಗ್ರರು ಈ ಪ್ರದೇಶದಲ್ಲಿ ಅಡಗಿರುವ ಶಂಕೆಯಿಂದ ಎನ್ನಲಾಗಿದೆ. ಏತನ್ಮಧ್ಯೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪ್ರತಿಭಟನಾಕಾರರು ಪ್ರವೇಶಿಸದಂತೆ ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿತ್ತು. ಆದಾಗ್ಯೂ, ಅನೇಕ ಗ್ರಾಮಸ್ಥರು, ವಿಶೇಷವಾಗಿ ಯುವಕರು ಬೀದಿಗಿಳಿದು ಭದ್ರತಾ ಪಡೆಗಳೊಂದಿಗೆ ಘರ್ಷಣೆ ನಡೆಸಿದರು, ಅವರು ಪ್ರತಿಭಟನಾಕಾರರನ್ನು ಎನ್ಕೌಂಟರ್ ಸೈಟ್ ಕಡೆಗೆ ಹೋಗದಂತೆ ತಡೆಯುತ್ತಿದ್ದರು ಎಂದು ತಿಳಿದುಬಂದಿದೆ.