ಮುಂಬೈ ನಗರದಲ್ಲಿ ಉಗುಳಿದರೆ ೧,೦೦೦ ರೂಪಾಯಿ ದಂಡ...!
ಮುಂಬೈ,ಮಾ ೧೯ಕೊರೊನಾ ವೈರಸ್ ಹಬ್ಬುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡಲು ಬೃಹನ್ ಮುಂಬೈ ಮುನಿಸಿಪಲ್ ಕಾರ್ಪೋರೇಷನ್ ( ಬಿಎಂಸಿ) ಸಂಚಲದ ನಿರ್ಧಾರ ಕೈಗೊಂಡಿದೆ. ಮುಂಬೈ ಬೃಹತ್ ಮಹಾನಗರದ ಸಾರ್ವಜನಿಕ ಸ್ಥಳಗಳಲ್ಲಿ ಉಗುಳಿದರೆ ೧,೦೦೦ ರೂ ದಂಡ ವಿಧಿಸಲು ಬಿಎಂಸಿ ನಿರ್ಣಯಿಸಿದೆ. ನಿರ್ಣಯ ಜಾರಿಯ ಭಾಗವಾಗಿ ಮುಂಬೈ ನಗರದಲ್ಲಿ ಬಹಿರಂಗ ಸ್ಥಳಗಳಲ್ಲಿ ಉಗುಳಿದ ೧೦೭ ಮಂದಿಯಿಂದ ೧.೦೭ ಲಕ್ಷ ರೂಪಾಯಿ ದಂಡವನ್ನು ಸಂಗ್ರಹಿಸಿದ್ದೇವೆ ಎಂದು ಬಿಎಂಸಿ ಅಧಿಕಾರಿಗಳು ತಿಳಿಸಿದ್ದಾರೆ. ಇನ್ನೂ ೪೬ ಮಂದಿಗೆ ಸಾರ್ವಜನಿಕವಾಗಿ ಉಗುಳದಂತೆ ಎಚ್ಚರಿಕೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೊರೊನಾ ವೈರಸ್ ಸೋಂಕು ಹಬ್ಬುವುದನ್ನು ತಡೆಗಟ್ಟಲು ನಾಗರೀಕರು ಸಹಕರಿಸಬೇಕೆಂದು ಬಿಎಂಸಿ ಅಧಿಕಾರಿಗಳು ಮುಂಬೈ ಜನರಿಗೆ ಮನವಿಮಾಡಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವವರಿಗೆ ಸಾವಿರ ರೂಪಾಯಿ ದಂಡ ಅಥವಾ ಭಾರತೀಯ ದಂಡ ಸಂಹಿತೆಯ ಸೆಕ್ಷನ್ ೧೮೯ ರ ಅಡಿ ಬಂಧಿಸಲಾಗುವುದು ಎಂದು ಬಿಎಂಸಿ ಅಧಿಕಾರಿಯೊಬ್ಬರು ಎಚ್ಚರಿಸಿದ್ದಾರೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 