ಕೊಪ್ಪಳ ಎಂ.ಹೆಚ್‌.ಪಿ.ಎಸ್ ಶಾಲೆಯಲ್ಲಿ ಸ್ಪರ್ಶ್‌ ಕುಷ್ಠರೋಗ ಜಾಗೃತಿ ಅಭಿಯಾನ

ಕೊಪ್ಪಳ ಎಂ.ಹೆಚ್‌.ಪಿ.ಎಸ್ ಶಾಲೆಯಲ್ಲಿ ಸ್ಪರ್ಶ್‌ ಕುಷ್ಠರೋಗ ಜಾಗೃತಿ ಅಭಿಯಾನ Sparsh Leprosy Awareness Campaign at Koppal MHPS School


        ಕೊಪ್ಪಳ   02 :   ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿಗಳ ಕಛೇರಿ, ತಾಲೂಕಾ ಆರೋಗ್ಯಾಧಿಕಾರಿಗಳ ಕಛೇರಿ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಶಾಸಕರ ಸರಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆ, ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಸೋಮವಾರ ಶಾಲಾ ಆವರಣದಲ್ಲಿ “ಸ್ಪರ್ಶ್‌ ಕುಷ್ಠರೋಗ ಜಾಗೃತಿ ಅಭಿಯಾನ-2026” ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.  

ಕೊಪ್ಪಳ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮಹೇಶ ಉಮಚಗಿ ಅವರು ಕಾರ್ಯಕ್ರಮ ಕುರಿತು ಮಾತನಾಡಿ, “ತಾರತಮ್ಯವನ್ನು ಕೊನೆಗೊಳಿಸುವುದು ಘನತೆಯನ್ನು ಕಾಪಾಡುವುದು” ಎಂಬ ಈ ವರ್ಷದ ಘೋಷವಾಕ್ಯದೊಂದಿಗೆ ಕಾರ್ಯಕ್ರಮ ಆಚರಿಸಲಾಗುತ್ತದೆ. ಜನವರಿ 30 ರಿಂದ ಫೆಬ್ರವರಿ 13 ರವರೆಗೆ “ಸ್ಪರ್ಶ್‌ ಕುಷ್ಠರೋಗ ಜಾಗೃತಿ ಅಭಿಯಾನ ಕಾರ್ಯಕ್ರಮ-2026” ಹಮ್ಮಿಕೊಳ್ಳಲಾಗಿದೆ.

         ಇದರ ಉದ್ದೇಶ ಪ್ರತಿಯೋಬ್ಬರಿಗೂ ಕುಷ್ಠರೋಗದ ಬಗ್ಗೆ ಅರಿವು ಮೂಡಿಸಿ, ಶೀಘ್ರ ಪತ್ತೆ ತ್ವರಿತ ಚಿಕಿತ್ಸೆ ಪಡೆದುಕೊಳ್ಳುವುದು ಹಾಗೂ ಸಾಮಾಜಿಕ ಕಳಂಕದಿಂದ ಹೊರಬರುವುದು. ಇದು ಮೈಕೊಬ್ಯಾಕ್ಟೇರಿಯಾ ಲೆಪ್ರೈ ಎಂಬ ಸುಕ್ಷ್ಮಾಣುವಿನಿಂದ ಹರಡುತ್ತದೆ. ರೋಗಿಯು ಕೆಮ್ಮಿದಾಗ ಮತ್ತು ಸೀನಿದಾಗ ಗಾಳಿಯಲ್ಲಿ ಸೇರಿಕೊಂಡು ಒಬ್ಬರಿಂದ ಇನ್ನೊಬ್ಬರಿಗೆ ಹರುಡುತ್ತದೆ. ರೋಗದ ಲಕ್ಷಣಗಳು ಚರ್ಮದ ಮೇಲೆ ಯಾವುದೇ ತಿಳಿಬಿಳಿ, ತಾಮ್ರ ಬಣ್ಣದ ಸ್ಪರ್ಶಜ್ಞಾನವಿಲ್ಲದ ಮಚ್ಚೆ, ದಪ್ಪನಾದ ಎಣ್ಣೆ ಪಸರಿಸಿದಂತಹ ಹೊಳೆಯುವ ಚರ್ಮ, ದೇಹದ ಮೇಲಿನ ಗಂಟುಗಳು, ಕಣ್ಣಿನ ರೆಪ್ಪೆಗಳನ್ನು ಮುಚ್ಚುವಲ್ಲಿ ತೊಂದರೆ,

          ಕೈ ಅಥವಾ ಕಾಲುಗಳಲ್ಲಿ ಬಹುದಿನದ ಗಾಯ, ಕೈ ಅಥವಾ ಕಾಲುಗಳಲ್ಲಿ ಬೆರಳು ಮಡಿಚಿಕೊಂಡಿರುವುದು, ನಡೆಯುವಾಗ ಕಾಲು ಎಳೆಯುವುದು, ಕೈ ಅಥವಾ ಕಾಲುಗಳಲ್ಲಿ ಜುಮ್ಮೆನಿಸುವಿಕೆ ಅಥವಾ ಮರಗಟ್ಟುವಿಕೆ, ಅಂಗೈ ಅಥವಾ ಪಾದಗಳಲ್ಲಿ ಶೀತ, ಬಿಸಿ ಅಥವಾ ಸಂವೇದನೆ ನಷ್ಟವಾಗಿರುವುದು, ಕೈಗಳಲ್ಲಿ ವಸ್ತುಗಳನ್ನು ಹಿಡಿಯುವುದು ಹಾಗೂ ಪಾದರಕ್ಷೆಗಳನ್ನು ತೊಡುವಲ್ಲಿ ಬಲಹೀನತೆ ಕಂಡುಬರುವುದು. ಇಂತಹ ಲಕ್ಷಣಗಳು ಯಾರಿಗಾದರು ಕಂಡುಬಂದರೆ ತಕ್ಷಣ ತಮ್ಮ ಸಮೀಪದ ಸರ್ಕಾರಿ ಆಸ್ಪತ್ರೆ ಅಥವಾ ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರನ್ನ ಸಂರ​‍್ಪಕಷಿಸಬೇಕು. ರೋಗ ಕಚಿತಪಟ್ಟರೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತದೆ ಎಂದು ತಿಳಿಸಿದರು. 

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವ್ಹಿ.ಪಿ ಅವರು ಕುಷ್ಠರೋಗ ನಿರ್ಮೂಲನೆಯಲ್ಲಿ ಶಾಲಾ ವಿದ್ಯಾರ್ಥಿಗಳ ಪಾತ್ರ ಹಾಗೂ ವಹಿಸಬೇಕಾದ ಮುಂಜಾಗ್ರತ ಕ್ರಮಗಳ ಕುರಿತು ಮಾತನಾಡಿ, ಗ್ರಾಮೀಣ ಪ್ರದೇಶ ಮತ್ತು ನಗರ ಪ್ರದೇಶಗಳಲ್ಲಿ ಜಾಗೃತಿ ಮೂಡಿಸಬೇಕು. ಹದಿ-ಹರೆಯದವರ ಆರೋಗ್ಯ ರಕ್ಷಣೆ ಮತ್ತು ಇತರೆ ಸಾಂಕ್ರಾಮಿಕ, ಅಸಾಂಕ್ರಾಮಿಕ ರೋಗಗಳ ಬಗ್ಗೆ ವಿವರವಾದ ಮಾಹಿತಿ ನೀಡಿದರು. 

ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಗಂಗಮ್ಮ ಕೆ. ಅವರು ಮಾತನಾಡಿ, ಕುಷ್ಠರೋಗದ ಬಗ್ಗೆ ಪ್ರತಿಯೊಬ್ಬರು ತಿಳಿದುಕೊಳ್ಳಿ, ಜಾಗೃತಿ ಮೂಡಿಸೋಣ, ತಪ್ಪು ಕಲ್ಪನೆಗಳನ್ನು ಹೋಗಲಾಡಿಸೋಣ ಮತ್ತು ಕುಷ್ಠರೋಗದಿಂದ ಬಾಧಿತರಾದ ಎಲ್ಲರನ್ನೂ ಹಿಂದುಳಿಯದಂತೆ ನೋಡಿಕೊಳ್ಳೋಣ ಎಂದು ತಿಳಿಸಿದರು. ನಂತರ ಕುಷ್ಠರೋಗ ನಿರ್ಮೂಲನೆ ಕುರಿತು ಪ್ರತಿಜ್ಞಾವಿಧಿ ಬೋಧಿಸಿದರು.  

ಶಾಲೆಯ ಮುಖ್ಯೋಪಾದ್ಯಾಯರಾದ ಅಂದಪ್ಪ ಅವರು ಮಾತನಾಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು “ಸ್ಪರ್ಶ್‌ ಕುಷ್ಠರೋಗ ಜಾಗೃತಿ ಅಭಿಯಾನ” ಹಮ್ಮಿಕೊಳ್ಳುವ ಮೂಲಕ ಜಾಗೃತಿ ಮೂಡಿಸುತ್ತಿದೆ. ಈ ಕಾರ್ಯಕ್ರಮ ವಿದ್ಯಾರ್ಥಿಗಳಿಗೆ ಬಹಳ ಉಪಯುಕ್ತವಾಗಿದೆ. ಜೊತೆಗೆ ವಿವಿದ ಸಾಂಕ್ರಾಮಿಕ, ಅಸಾಂಕ್ರಾಮಿಕ ರೋಗಗಳ ಬಗ್ಗೆ ಜಾಗೃತಿ ಮೂಡಿಸುತ್ತಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ತಮ್ಮ ತಮ್ಮ ಮನೆ, ಊರು, ವಾರ್ಡ್‌ಗಳಲ್ಲಿ ಹಾಗೂ ಸುತ್ತ ಮುತ್ತಲಿನ ಸಾರ್ವಜನಿಕರಿಗೆ ಅರಿವು ಮೂಡಿಸುವಂತೆ ಕರೆ ನೀಡಿದರು.  

     ಕಾರ್ಯಕ್ರಮದಲ್ಲಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ  ಡಾ. ದಿನೇಶ್, ಹಿರಿಯ ಮೇಲ್ವಿಚಾರಕ ವೀರಭದ್ರ​‍್ಪ, ಆರೋಗ್ಯ ನೀರೀಕ್ಷಣಾಧಿಕಾರಿ ಪರಶುರಾಮ, ಲಿಂಕ್‌ವರ್ಕರ್ ಉದಯ ಸೇರಿದಂತೆ ಸಹಶಿಕ್ಷಕರು, ಆಶಾ ಕಾರ್ಯಕರ್ತೆಯರು, ವಿದ್ಯಾರ್ಥಿಗಳು ಹಾಗೂ ಶಾಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು.