ಸಭಾಪತಿ ಹೊರಟ್ಟಿ ಅವರಿಂದ ತ್ರಿಚಕ್ರ ವಾಹನ ವಿತರಣೆ
Speaker Horatti distributes three-wheelers
ಗದಗ 11 : ಕರ್ನಾಟಕ ರಾಜ್ಯ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಬುಧವಾರ ಜಿಲ್ಲಾಡಳಿತ ಭವನದ ಆವರಣದಲ್ಲಿ ವಿಕಲಚೇತನ ಇಬ್ಬರು ಫಲಾನುಭವಿಗಳಿಗೆ ತ್ರಿಚಕ್ರ ವಾಹನಗಳನ್ನು ವಿತರಣೆ ಮಾಡಿದರು.
ವಿಧಾನ ಪರಿಷತ್ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಡಿ ಖರೀದಿಸಲಾದ ಎರಡು ವಾಹನಗಳನ್ನು ವಿತರಿಸಿ ನಂತರ ಮಾತನಾಡಿದ ಅವರು, ಸರ್ಕಾರದ ಸೌಲಭ್ಯಗಳನ್ನು ಅರ್ಹರು ಪಡೆದು ಅಭಿವೃದ್ಧಿ ಹೊಂದಬೇಕು. ತ್ರಿಚಕ್ರ ವಾಹನ ಸದ್ಭಳಕೆ ಸರಿಯಾಗಿ ಮಾಡಿಕೊಳ್ಳುವಂತೆ ತಿಳಿಸಿದರು.ತ್ರಿಚಕ್ರ ವಾಹನಗಳನ್ನು ಸರಿಯಾಗಿ ಇಟ್ಟುಕೊಂಡು ಜೀವನ ಸಾಗಿಸಲು ಕರ್ನಾಟಕ ರಾಜ್ಯ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಹೇಳಿದರು.ಈ ಸಂಧರ್ಭದಲ್ಲಿ ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ, ಜಿ ಪಂ ಮುಖ್ಯ ಯೋಜನಾಧಿಕಾರಿ ಶ್ರೀಮತಿ ನಿರ್ಮಲಾ, ಜಿಲಗಲಾ ಅಂಗವಿಕಲರ ಕಲ್ಯಾಣಾಧಿಕಾರಿ ಮಹಾಂತೇಶ ಕೆ, ವಾರ್ತಾಧಿಕಾರಿ ವಸಂತ ಮಡ್ಲೂರ, ಅವ್ವ ಟ್ರಸ್ಟ್ ಸಂಚಾಲಕ ಬಸವರಾಜ ದಾರವಾಡ, ಪಕ್ಕಿರ್ಪ ಕೌಜಗೇರಿ, ನಾಜಿಯಾ ಅಬ್ಬಿಗೇರಿ, ಇಲಾಖೆಯ ಸಿಬ್ಬಂದಿ ವರ್ಗ ಹಾಜರಿದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 