ಖಾಸಗತೇಶ್ವರ ಮಠದ ಜಾತ್ರೆ ಅಂಗವಾಗಿ ಭಕ್ತರಿಗೆ ವಿಶೇಷ ಪ್ರಸಾದ ವ್ಯವಸ್ಥೆ
Special *prasada* arrangements for devotees as part of the Khasagateshwara Matha fair
ತಾಳಿಕೋಟೆ 27: ಪಟ್ಟಣದ ಐತಿಹಾಸಿಕ ಖಾಸಗತೇಶ್ವರ ಮಠದ ಜಾತ್ರಾ ಮಹೋತ್ಸವದ ಕೊನೆಯ ದಿನದ ಅಂಗವಾಗಿ ನಡೆಯುವ ಆನೆ ಅಂಬಾರಿ ಹಾಗೂ ಮಹಾ ರಥೋತ್ಸವಕ್ಕೆ ಆಗಮಿಸುವ ಸಾವಿರಾರು ಭಕ್ತರಿಗಾಗಿ ವಿಜಯಪುರದ ಅನುಗ್ರಹ ಕಣ್ಣಿನ ಆಸ್ಪತ್ರೆ ಮುಖ್ಯಸ್ಥ ಡಾ. ಪ್ರಭುಗೌಡ ಲಿಂಗದಳ್ಳಿ ಅಭಿಮಾನಿ ಬಳಗದ ವತಿಯಿಂದ ವಿಶೇಷ ಪ್ರಸಾದ ವ್ಯವಸ್ಥೆ ಮಾಡಲಾಯಿತು.
ಸೋಮವಾರ ಬೆಳಿಗ್ಗೆ 9 ಗಂಟೆಯಿಂದ ಆರಂಭವಾದ ಮಹಾಪ್ರಸಾದ ಸೇವಾ ಕಾರ್ಯಕ್ರಮಕ್ಕೆ ಡಾ. ಪ್ರಭುಗೌಡ ಲಿಂಗದಳ್ಳಿ ಅಭಿಮಾನಿ ಬಳಗದ ಮುಖ್ಯಸ್ಥ ಶಿವಕುಮಾರ ದೇಸಾಯಿ ಹಾಗೂ ಅನುಗ್ರಹ ಕಣ್ಣಿನ ಆಸ್ಪತ್ರೆ ವ್ಯವಸ್ಥಾಪಕ ಮಲ್ಲನಗೌಡ ಬಿರಾದಾರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ ಐದು ವರ್ಷಗಳಿಂದ ಡಾ. ಪ್ರಭುಗೌಡ ಅವರ ಅಭಿಮಾನಿ ಬಳಗದ ವತಿಯಿಂದ ಜಾತ್ರೆಗೆ ಆಗಮಿಸುವ ಭಕ್ತರಿಗೆ ವಿಶೇಷ ಪ್ರಸಾದ ವಿತರಣೆ ಮಾಡಲಾಗುತ್ತಿದೆ. ಈ ಬಾರಿಯೂ ಸುಮಾರು ಏಳು ಸಾವಿರ ಭಕ್ತರಿಗೆ ಸಾಕಾಗುವಷ್ಟು ಕೇಸರಿಬಾತ್ ಹಾಗೂ ಪಲಾವ್ ಸೇರಿದಂತೆ ವಿವಿಧ ಆಹಾರ ಪದಾರ್ಥಗಳನ್ನು ಸಿದ್ಧಪಡಿಸಲಾಗಿದೆ ಎಂದು ತಿಳಿಸಿದರು.
ಭಕ್ತರು ಶಾಂತಿಯುತವಾಗಿ ಪ್ರಸಾದ ಸ್ವೀಕರಿಸಿ ತೆರಳಬೇಕು ಎಂದು ಮನವಿ ಮಾಡಿದ ಅವರು, ಎಲ್ಲಾ ಸೇವಾ ಕಾರ್ಯಗಳು ಡಾ. ಪ್ರಭುಗೌಡ ಲಿಂಗದಳ್ಳಿ ಅವರ ಮಾರ್ಗದರ್ಶನದಲ್ಲಿ ನಡೆಯುತ್ತಿವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಡಾ. ನಜೀರ್ ಅಹ್ಮದ್ ಕೊಲ್ಯಾಳ, ನಿಂಗನಗೌಡ ಬಿರಾದಾರ, ಬಾಲು ಅಸ್ಕಿ, ಮಲ್ಲನಗೌಡ ದ್ಯಾಪುರ, ಮಹಾಂತೇಶ ಹುಜರಾತಿ ಹಾಗೂ ಅನುಗ್ರಹ ಆಸ್ಪತ್ರೆಯ ಸಿಬ್ಬಂದಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ 