ಸಿಬಿಐ ವಿಶೇಷ ನಿದರ್ೇಶಕ ಆಸ್ಥಾನಾ ಪ್ರಕರಣ

ಯಥಾಸ್ಥಿತಿ ಕಾಪಾಡಿಕೊಳ್ಳಲು ಆದೇಶ

 ನವದೆಹಲಿ 23: ದೇಶದ ಅತ್ಯುನ್ನತ ತನಿಖಾ ಸಂಸ್ಥೆಯಲ್ಲಿನ ಆಂತರಿಕ ಸಂಘರ್ಷ ದಿನಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಸಿಬಿಐ ವಿಶೇಷ ನಿದರ್ೆಶಕ ರಾಕೇಶ್ ಆಸ್ಥಾನಾ ವಿರುದ್ಧದ ಕ್ರಿಮಿನಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ದೆಹಲಿ ಹೈಕೋಟರ್್ ಮಂಗಳವಾರ ಸಿಬಿಐಗೆ ಆದೇಶಿಸಿದೆ.

                ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನ್ನ ವಿಶೇಷ ನಿದರ್ೆಶಕ ರಾಕೇಶ್ ಆಸ್ಥಾನಾ ಅವರ ವಿರುದ್ಧ ಎಫ್ಐಆರ್ ದಾಖಲಿಸಿತ್ತು. ರಾಕೇಶ್ ಆಸ್ಥಾನಾ ಅವರು ಭ್ರಷ್ಟಾಚಾರ ಪ್ರಕರಣವೊಂದರಲ್ಲಿ ತನ್ನನ್ನು ಬಂಧಿಸದಂತೆ ಮತ್ತು ತಮ್ಮ ವಿರುದ್ಧದ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಹೈಕೋಟರ್್ ಮೊರೆ ಹೋಗಿದ್ದರು.

                ರಾಕೇಶ್ ಆಸ್ಥಾನಾ ಅಜರ್ಿಯ ವಿಚಾರಣೆ ನಡೆಸಿದ ನ್ಯಾಯಮೂತರ್ಿ ನಜಿಮ್ ವಜಿರಿ ಅವರು, ಮುಂದಿನ ಆದೇಶದವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸಿಬಿಐಗೆ ಸೂಚಿಸಿದ್ದಾರೆ. ಅಲ್ಲದೆ ವಿಶೇಷ ನಿದರ್ೆಶಕರ ವಿರುದ್ಧ ನಡೆಯುತ್ತಿರುವ ತನಿಖೆಗೆ ಯಾವುದೇ ತಡೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

                ಸಂಬಂಧ ಪ್ರತಿಕ್ರಿಯೆ ಸಲ್ಲಿಸುವಂತೆ ಸಿಬಿಐ ನಿದರ್ೆಶಕ ಅಲೋಕ್ ಕುಮಾರ್ ವಮರ್ಾ ಅವರಿಗೆ ಹಾಗೂ ಸಿಬ್ಬಂದಿ ಮತ್ತು ತರಬೇತಿ ಇಲಾಖೆಗೂ ಪ್ರತಿಕ್ರಿಯೆ ಸಲ್ಲಿಸುವಂತೆ  ಹೈಕೋಟರ್್ ನೋಟಿಸ್ ನೀಡಿ, ವಿಚಾರಣೆಯನ್ನು ಅಕ್ಟೋಬರ್ 29ಕ್ಕೆ ಮುಂದೂಡಿದೆ.

                ಈಗಾಗಲೇ ರಾಕೇಶ್ ಅಸ್ತಾನ ವಿರುದ್ಧ ಸಿಬಿಐ ನಿದರ್ೆಶಕ ಅಲೋಕ್ ವಮರ್ಾ ಅವರು ದೂರು ದಾಖಲಿಸಿಕೊಂಡು ಕ್ರಮ ಜರುಗಿಸಲು ಮುಂದಾಗಿದ್ದರು. ಹಿನ್ನೆಲ್ಲೆಯಲ್ಲಿ ಬಂಧನದ ಭೀತಿಯಲ್ಲಿರುವ ಆಸ್ತಾನ ಕೋಟರ್್ ಮೊರೆ ಹೋಗಿದ್ದು, ಪ್ರಕರಣ ರದ್ದುಗೊಳಿಸುವಂತೆ ಮನವಿ ಮಾಡಿದ್ದರು.

                ಹಿಂದೆ ಅಲೋಕ್ ವಮರ್ಾ ವಿರುದ್ಧವೇ ಸುಮಾರು 10 ಪ್ರಕರಣಗಳಲ್ಲಿ ಹಲವರಿಂದ ಲಂಚ ಸ್ವೀಕರಿಸಿದ್ದಾರೆ ಎಂದು ರಾಕೇಶ್ ಆಸ್ತಾನ ಸಹ ಆರೋಪಿಸಿದ್ದರು. ಕುರಿತು ಸಂಪುಟ ಕಾರ್ಯದಶರ್ಿ ಹಾಗೂ ಕೇಂದ್ರ ಜಾಗೃತ ಆಯೋಗಕ್ಕೂ ಪತ್ರ ಬರೆದಿದ್ದರು.              

ವಮರ್ಾ-ಆಸ್ಥಾನಾಗೆ ಮೋದಿ ಬುಲಾವ್ ದೇಶದ ಅತ್ಯುನ್ನತ ತನಿಖಾ ಸಂಸ್ಥೆಯಲ್ಲಿನ ಆಂತರಿಕ ಸಂಘರ್ಷ ಹೊಸ ತಿರುವು ಪಡೆದುಕೊಂಡಿದ್ದು, ಸಿಬಿಐ ನಿದರ್ೆಶಕ ಅಲೋಕ್ ವಮರ್ಾ ಮತ್ತು ನಂ.2 ಸ್ಥಾನದಲ್ಲಿರುವ ವಿಶೇಷ ನಿದರ್ೆಶಕ ರಾಕೇಶ್ ಆಸ್ಥಾನಾ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಬುಲಾವ್ ನೀಡಿದ್ದಾರೆ. ಎರಡು ಕೋಟಿ ರುಪಾಯಿ ಲಂಚ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನ್ನ ವಿಶೇಷ ನಿದರ್ೆಶಕ ರಾಕೇಶ್ ಆಸ್ಥಾನಾ ಅವರ ವಿರುದ್ಧವೇ ಎಫ್ಐಆರ್ ದಾಖಲಿಸಿದೆ. ಅಲ್ಲದೆ ರಾ ಸಂಸ್ಥೆಯ ನಂ.2 ಸ್ಥಾನದಲ್ಲಿರುವ ಸಮಂತ್ ಕುಮಾರ್ ಗೋಯಲ್ ಅವರ ಹೆಸರನ್ನೂ ಎಫ್ಐಆರ್ ನಲ್ಲಿ ಉಲ್ಲೇಖಿಸಿದೆ. ಇದೇ ಪ್ರಕರಣದಲ್ಲಿ ಆರೋಪಿಯಾಗಿರುವ ಸಿಬಿಐ ಉಪ ಪೊಲೀಸ್ ಅಧೀಕ್ಷಕ ದೇವೇಂದರ್ ಕುಮಾರ್ ಅವರನ್ನು ಸಿಬಿಐ ಅಧಿಕಾರಿಗಳು ಇಂದು ಬಂಧಿಸಿದ್ದಾರೆ. ವಿವಾದಾತ್ಮಕ ಮಾಂಸ ರಫ್ತುದಾರ ಮೊಯಿನ್ ಖುರೇಷಿ ಪ್ರಕರಣದಲ್ಲಿ ತನಿಖಾಧಿಕಾರಿಯಾಗಿದ್ದ ದೇವೇಂದರ್ ಕುಮಾರ್ ಅವರನ್ನು, ಪ್ರಕರಣದ ಮತ್ತೊಬ್ಬ ಆರೋಪಿ ಸತೀಶ್ ಸನಾಗೆ ಕ್ಲೀನ್ ಚಿಟ್ ನೀಡಲು ಲಂಚ ಪಡೆದ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆಸ್ಥಾನಾ ನೇತೃತ್ವದ ಸಿಬಿಐ ತಂಡ ಸೆಪ್ಟೆಂಬರ್ 26, 2018ರಂದು ಸತೀಶ್ ಸನಾಗೆ ಕ್ಲೀನ್ ಚಿಟ್ ನೀಡಲು ಆರೋಪಿಯಿಂದ ನಕಲಿ ಹೇಳಿಕೆ ಪಡೆದಿದ್ದಾರೆ. ಆದರೆ ದಿನ ಆರೋಪಿ ಉದ್ಯಮಿ ಹೈದರಾಬಾದ್ ನಲ್ಲಿದ್ದರು ಎಂಬುದು ಸಿಬಿಐ ತನಿಖೆ ವೇಳೆ ಬಹಿರಂಗವಾಗಿದೆ