ಜಿಲ್ಲೆಯಲಿ ವಿಶೇಷ ಮಧ್ಯಸ್ಥಿಕೆ ಅಭಿಯಾನ : ಸದುಪಯೋಗಕ್ಕೆ ನ್ಯಾಯಾಧೀಶ ಕರೆ
Special Mediation Campaign in the district: Judges call for good use
ರಾಜಿಯಾಗಬಹುದಾದ ಪ್ರಕರಣಗಳ ಇತ್ಯರ್ಥಕ್ಕೆ
ವಿಜಯಪುರ ಜುಲೈ 05: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ ಇಲಾಖೆ ಮತ್ತು ಜಿಲ್ಲಾ ನ್ಯಾಯವಾದಿಗಳ ಸಂಘದ ಸಂಯುಕ್ತಶ್ರಾಯದಲ್ಲಿ ಮಧ್ಯಸ್ಥಿಕೆ ಅಭಿಯಾನದ ಕುರಿತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹರೀಶ ಎ. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಜಿಲ್ಲೆಯಾದ್ಯಂತ ಎಲ್ಲ ನ್ಯಾಯಾಲಯಗಳಲ್ಲಿ ಬಾಕಿ ಇರುವ ಮಧ್ಯಸ್ಥಿಕೆಯ ಮೂಲಕ ರಾಜಿ ಆಗಬಹುದಾದ ಪ್ರಕರಣಗಳ ಇತ್ಯರ್ಥಕ್ಕೆ ಜುಲೈ01ರಿಂದ ಬರುವ ಅಕ್ಟೋಬರ್ 07ರವರೆಗೆ ಮಧ್ಯಸ್ಥಿಕೆ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಕಕ್ಷಿದಾರರು ಸದರಿ ಅಭಿಯಾನದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.
ಮಧ್ಯಸ್ಥಿಕೆ ಅಭಿಯಾನದ ಕುರಿತಾಗಿ ಹೆಚ್ಚಿನ ಮಾಹಿತಿ ಅವಶ್ಯವಿದ್ದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ತಾಲೂಕಾ ಕಾನೂನು ಸೇವೆಗಳ ಸಮಿತಿ, ಇಂಡಿ, ಸಿಂದಗಿ, ಬಸವನಬಾಗೇವಾಡಿ, ಮುದ್ದೇಬಿಹಾಳ ಕಚೇರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಡಿ.ಜಿ.ಬಿರಾದಾರ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಹಾಗರಗಿ ಸೇರಿದಂತೆ ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿಗಳು, ಪದಾಧಿಕಾರಿಗಳು, ವಕೀಲರುಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 