ಬೆಳಗಾವಿ ಮೀರಜ್ ನಡುವೆ ವಿಶೇಷ ಪ್ಯಾಸೆಂಜರ್ ರೈಲು: ಈರಣ್ಣ ಕಡಾಡಿ

ಬೆಳಗಾವಿ, 30 : ದಸರಾ ಹಬ್ಬದ ಹಿನ್ನಲೆಯಲ್ಲಿ ಬೆಳಗಾವಿ ಮೀರಜ್ ನಡುವೆ ವಿಶೇಷ ಪ್ಯಾಸೆಂಜರ್ ರೈಲು ಸಂಚಾರವನ್ನು ನನ್ನ ಮನವಿ ಮೇರೆಗೆ  ಅಕ್ಟೋಂಬರ 1 ರಿಂದ 31 ರವರೆಗೆ  ಒಂದು ತಿಂಗಳವರೆಗೆ  ಪ್ಯಾಸೆಂಜರ್ ರೈಲಿನ ಸಂಚಾರವನ್ನು ವಿಸ್ತರಿಸಲಾಗಿದೆ ಪ್ರಯಾಣಿಕರು ಈ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ರಾಜ್ಯಸಭಾ ಸಂಸದ  ಹಾಗೂ ನೈರುತ್ಯ ರೈಲ್ವೆ ಸಲಹಾ ಸಮಿತಿ ಸದಸ್ಯ ಈರಣ್ಣ ಕಡಾಡಿ ಅವರು ತಿಳಿಸಿದ್ದಾರೆ