ಬಸವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

ಬಸವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ  Special Puja at Basaveshwara Temple


ಯರಗಟ್ಟಿ 31: ಪಟ್ಟಣದ ಮರಡಿ ಬಸವೇಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ಮೂರನೇ ಸೋಮವಾರದ ಅಂಗವಾಗಿ ರುದ್ರಾಭಿಷೇಕ, ಪುಷ್ಪಾರ್ಚನೆ, ಬಿಲ್ವಾರ್ಚನೆ, ಸಹಸ್ರನಾಮಾವಳಿ ಸೇರಿದಂತೆ ವಿವಿಧ ವಿಶೇಷ ಪೂಜಾ ವಿಧಿವಿಧಾನಗಳು ನೆರವೇರಿದವು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.