ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ, ಎಸ್‌.ಐ.ಆರ್‌.ಪ್ರಕ್ರಿಯೆ ಪ್ರಾರಂಭ ಹಿ ಜಿಲ್ಲಾಧಿಕಾರಿ ಕವಿತಾ ಎಸ್‌.ಮನ್ನಿಕೇರಿ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ, ಎಸ್‌.ಐ.ಆರ್‌.ಪ್ರಕ್ರಿಯೆ ಪ್ರಾರಂಭ ಹಿ ಜಿಲ್ಲಾಧಿಕಾರಿ ಕವಿತಾ ಎಸ್‌.ಮನ್ನಿಕೇರಿ  Special comprehensive revision of the voter list, SIR process begins, Deputy Commissioner Kavita S.M

ವಿಜಯನಗರ 05:   ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ  ಪ್ರಕ್ರಿಯೆಯು  ಪ್ರಗತಿಯಲ್ಲಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್‌.ಮನ್ನಿಕೇರಿ ತಿಳಿಸಿದರು.  

ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಅವರು ವಿವರವಾದ ಮಾಹಿತಿ ನೀಡಿದರು. ಮತದಾರರ ಪಟ್ಟಿಗೆ ಹೆಸರು ಸೇರಿಸಲು, ತೆಗೆದುಹಾಕಲು ಹಾಗೂ ಪ್ರೊಜಿನಿ ಮ್ಯಾಪಿಂಗ್ ಮಾಡಲು ಜೂನ್ 16 ರವರೆಗೆ ಅವಕಾಶವಿರುತ್ತದೆ. ಆ ಬಳಿಕ ಪೋರ್ಟಲ್ ಫ್ರೀಜ್ ಆಗಲಿದ್ದು, ಕರಡು ಮತದಾರರ ಪಟ್ಟಿ ಪ್ರಕಟವಾಗುವವರೆಗೆ ಯಾವುದೇ ಬದಲಾವಣೆಗಳಿಗೆ ಅವಕಾಶವಿರುವುದಿಲ್ಲ  ಎಂದರು.  

 ಎಸ್‌.ಐ.ಆರ್‌. ಪ್ರಕ್ರಿಯೆ ಆರಂಭವಾಗಿದ್ದು ಮತಗಟ್ಟೆ ಅಧಿಕಾರಿಗಳಿಗೆ ಸಿದ್ದತೆ, ತರಬೇತಿ ಮತ್ತು ಮುದ್ರಣವು ಜೂನ್  20 ರಿಂದ 29 ವರೆಗೆ ನಡೆಯಲಿದೆ. ನಂತರ ಮತಗಟ್ಟೆ ಮಟ್ಟದ  ಬಿಎಲ್‌ಒಗಳು ಮನೆ ಮನೆ ಭೇಟಿಯು 2026 ರ ಜೂನ್ 30 ರಿಂದ ಜುಲೈ 29 ರವರೆಗೆ ಪ್ರತಿ ಮನೆಗೆ ಒಟ್ಟು 3 ಬಾರಿ ಭೇಟಿ ನೀಡಿ ಪರೀಶೀಲನಾ ಪಟ್ಟಿ ನೀಡಿ ಮತದಾರರಿಂದ ಸಹಿ ಪಡೆಯುವರು.  

 ನಂತರ ಕರಡು ಮತದಾರರ ಪಟ್ಟಿಯನ್ನು ಆಗಸ್ಟ್‌ 5 ರಂದು ಪ್ರಕಟಿಸಲಿದ್ದು ಆಕ್ಷೇಪಣೆಗಳಿದ್ದಲ್ಲಿ ಆಗಸ್ಟ್‌ 5 ರಿಂದ ಸೆಪ್ಟೆಂಬರ್  4 ರವರೆಗೆ ಸಲ್ಲಿಸಬಹುದು. ಅಂತಿಮ ಮತದಾರರ ಪಟ್ಟಿಯ ಪ್ರಕಟಣೆಯನ್ನು ಅಕ್ಟೋಬರ್  7 ರಂದು ಚುನಾವಣಾ ಆಯೋಗವು ಬಿಡುಗಡೆ ಮಾಡಲಿದೆ ಎಂದರು.