ಮತದಾರರ ಪಟ್ಟಿಗಳ ವಿಶೇಷ-ಸಮಗ್ರ ಪರಿಷ್ಕರಣೆ ; ಬೂತ್ ಮಟ್ಟದ ಏಜೆಂಟರ್ ನೇಮಕಕ್ಕೆ ರಾಜಕೀಯ ಪಕ್ಷಗಳಿಗೆ ಡಿಸಿ ಕರೆ
Special-comprehensive revision of voter lists; DC calls on political parties to appoint booth-level
ಬಾಗಲಕೋಟೆ 27 : ಭಾರತ ಚುನಾವಣೆ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ 3 ಹಂತದ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆಯನ್ನು ಕೈಗೊಳ್ಳಲಾಗುತ್ತಿದ್ದು, ಮಾನ್ಯತೆ ಪಡೆದ ರಾಷ್ರ್ಟೀಯ ಹಾಗೂ ರಾಜ್ಯ ರಾಜಕೀಯ ಪಕ್ಷಗಳು ಬೂತ್ ಮಟ್ಟದ ಏಜೇಂಟರಿ ಬಿಎಲ್‌ಎ) ಗಳನ್ನು ನೇಮಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಂಗಪ್ಪ ಸೂಚಿಸಿದರು.
ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಬುಧವಾರರದಂದು ಮತದಾರರ ಪಟ್ಟಿಗಳ ವಿಶೇಷ-ಸಮಗ್ರ ಪರಿಷ್ಕರಣೆ ಕುರಿತಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆಯು, ಮತದಾರರು, ರಾಜಕೀಯ ಪಕ್ಷಗಳು ಮತ್ತು ಚುನಾವಣಾ ಸಿಬ್ಬಂದಿಗಳನ್ನು ಒಳಗೊಂಡಂತಹ ಪಾರದರ್ಶಕ ಹಾಗೂ ಪಾಲ್ಗೊಳ್ಳುವಿಕೆಯ ಪ್ರಕ್ರಿಯೆಯಾಗಿದ್ದು, ಎಲ್ಲರೂ ಸಹಕಾರ ನೀಡಬೇಕು ಎಂದು ಹೇಳಿದರು.
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ ಮುಖ್ಯ ಉದ್ದೇಶ ಅರ್ಹ ಮತದಾರರನ್ನು ಮತದಾರರ ಪಟ್ಟಿಗೆ ಸೇರಿಸುವುದು ಮತ್ತು ಅನರ್ಹರರನ್ನು ನಿಯಮಾನುಸಾರ ಮತದಾರರ ಪಟ್ಟಿಯಿಂದ ಕೈ ಬಿಡುವುದಾಗಿದೆ ಎಂದರು. ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರೀಯೆ ಅಂಗವಾಗಿ ಜೂನ 20 ರಿಂದ 29 ರವರೆಗೆ ತರಬೇತಿ ಹಾಗೂ ಮುದ್ರಣ ತಯಾರಿ ಮಾಡಿಕೊಳ್ಳಲಾಗುವುದು, ಜೂನ 30 ರಿಂದ ಜುಲೈ 29 ವರೆಗೆ ಒಂದು ತಿಂಗಳು ಅವಧಿಯಲ್ಲಿ ಜಿಲ್ಲೆಯಾಧ್ಯಂತ ಬಿ.ಎಲ್.ಒ ಗಳು ಮನೆ ಮನೆಗೆ ಭೇಟಿ ನೀಡುವರು. ಈ ಸಂದರ್ಭದಲ್ಲಿ ಪ್ರತಿ ಮತದಾರರಿಗೂ ಮುದ್ರಿತವಾದ ಗಣತಿ ನಮೂನೆಗಳನ್ನು ನೀಡಿ ಸಂಗ್ರಹಿಸಲಾಗುವುದು. ಗಣತಿ ನಮೂನೆಗಳ ವಿತರಣೆ ಮತ್ತು ಸಂಗ್ರಹಣೆಗಾಗಿ ಮನೆ ಮನೆಗೆ ಭೇಟಿ ನೀಡುವ ಪ್ರಕ್ರಿಯೆಯಲ್ಲಿ ಮತದಾರರು ಸಹ ಬುತ್ ಮಟ್ಟದ ಅಧಿಕಾರಿಗಳಿಗೆ ಸಂಪೂರ್ಣ ಸಹಕಾರ ನೀಡಬೇಕಾಗುತ್ತದೆ ಎಂದು ತಿಳಿಸಿದರು. ಜಿಲ್ಲೆಯಲ್ಲಿ 07 ಮತಕ್ಷೇತ್ರಗಳನ್ನು ಒಳಗೊಂಡಂತೆ ಒಟ್ಟು 1785 ಮತಗಟ್ಟೆಗಳಿದ್ದು, ಈ ಎಲ್ಲಾ ಮತಗಟ್ಟೆಗಳಿಗೆ ಮತಗಟ್ಟೆ ಮಟ್ಟದ ಅಧಿಕಾರಿಗಳನ್ನು ನೇಮಕ ಮಾಡಲಾಗಿರುತ್ತದೆ. ಪ್ರತಿ 10 ರಿಂದ 12 ಮತಗಟ್ಟೆ ಮಟ್ಟದ ಅಧಿಕಾರಿಗಳ ಮೇಲೆ ಒಬ್ಬ ಸುಪರ್ ವೈಸರನ್ನು ನೇಮಕ ಮಾಡಲಾಗಿದೆ . ಪರಿಷ್ಕರಣೆ ಪ್ರಕ್ರಿಯೆ, ನಮೂನೆಗಳು ಮತ್ತು ವೇಳಾ ಪಟ್ಟಿಯ ಕುರಿತು ಹೆಚ್ಚಿನ ವಿವರಗಳನ್ನು ಜಿಲ್ಲಾ ಚುನಾವಣಾಧಿಕಾರಿ, ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಮತ್ತು ಭಾರತ ಚುನಾವಣಾ ಆಯೋಗದ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಚಾರ ಪಡಿಸಲಾಗುವುದು ಎಂದು ಹೇಳಿದರು.
ಬಿಎಲ್‌ಒ ಗಳು ಕನಿಷ್ಠ ಮೂರು ಬಾರಿ ಮನೆ ಮನೆಗೆ ಭೇಟಿ ನೀಡಲಿದ್ದು, ಒಂದು ವೇಳೆ ಮತದಾರರು ಸಿಗದಿದ್ದ ಪಕ್ಷದಲ್ಲಿ ಮಹಜರು ಸಿದ್ದಪಡಿಸಿ ವರದಿ ನೀಡಲಿದ್ದಾರೆ, ಮತದಾರರ ಪೈಕಿ ಅವರ ಮನೆಯ ಹಿರಿಯ ನಾಗರಿಕರು ಸಹ ಸಹಿ ಮಾಡಲು ಅವಕಾಶ ಕಲ್ಪಿಸಲಾಗಿರುತ್ತದೆ. ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆಗೆ ಮತದಾರರು ಹಾಗೂ ರಾಜಕೀಯ ಪಕ್ಷಗಳು ಅಧಿಕಾರಿಗಳು ಪರಸ್ಪರ ಸಹಕಾರ ನೀಡುವುದರೊಂದಿಗೆ ಸಮಗ್ರ ಪರಿಷ್ಕರಣೆ ಪ್ರಕ್ರಿಯೆನ್ನು ಯಶಸ್ವಿಗೊಳಿಸಬೇಕು ಎಂದರು. ಸಭೆಯಲ್ಲಿ ಚುನಾವಣಾ ಶಿರೇಸ್ತೆದಾರ್ ಮಹೇಶ ಪಾಂಡವ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಇದ್ದರು.
ಅಶೋಕ ತೇಲಿ, ಅಪರ ಜಿಲ್ಲಾಧಿಕಾರಿ
ಕೆಪಿಸಿಸಿ ಮಾಜಿ ಸದಸ್ಯ, ವೈದ್ಯ ಡಾ. ಡಿ.ಎಚ್.ಮಾಲದಾರ ವಿಧಿವಶ
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ? 