ಹೊಸಹಳ್ಳಿಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಪೂರ್ಣ
Special electoral roll revision work completed in Hosahalli
ಲೋಕದರ್ಶನ ವರದಿ
ಹೂವಿನಹಡಗಲಿ 10: ರಾಜ್ಯಾದ್ಯಂತ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ವೇಗವಾಗಿ ಸಾಗುತ್ತಿದ್ದು, ಐದು ಕೋಟಿಗೂ ಹೆಚ್ಚು ಮತದಾರರ ಮನೆಗಳಿಗೆ ಎನ್ಯುಮರೇಷನ್ ನಮೂನೆಗಳನ್ನು ತಲುಪಿಸುವ ಕಾರ್ಯ ನಡೆಯುತ್ತಿದೆ. ಹೂವಿನಹಡಗಲಿ ತಾಲೂಕಿನ ಹೊಸಹಳ್ಳಿ ಗ್ರಾಮದ 49ನೇ ಮತಗಟ್ಟೆ ವ್ಯಾಪ್ತಿಯಲ್ಲಿ ಎಸ್ಐಆರ್ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ.
ಈ ಸಾಧನೆಗೆ ಕಾರಣರಾದ ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ನಿಂಗಣ್ಣ ತೊಗರಿಕಟ್ಟೆ, ಗ್ರಾಮ ಲೆಕ್ಕಾಧಿಕಾರಿ, ರಾಜಕೀಯ ಪಕ್ಷಗಳ ಬಿಎಲ್ಎಗಳಾದ ಮುತ್ತುರಾಜ ಹಸಿಬಿ, ರಾಕೇಶ್ ಬಾಕಿ, ಚುನಾವಣಾ ಸಿಬ್ಬಂದಿ ಸಲೀಂ, ಮಂಜುನಾಥ, ಕುಬೇರ ನಾಯ್ಕ ಸೇರಿದಂತೆ ಕಾರ್ಯದಲ್ಲಿ ತೊಡಗಿದ್ದ ಸಿಬ್ಬಂದಿಯನ್ನು ತಾಲೂಕು ಆಡಳಿತದ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಚುನಾವಣಾ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಶ್ರಮಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಸೇವೆಯನ್ನು ತಾಲೂಕು ಆಡಳಿತ ಪ್ರಶಂಸಿಸಿತು.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 