ಹೊಸಹಳ್ಳಿಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಪೂರ್ಣ

ಹೊಸಹಳ್ಳಿಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಪೂರ್ಣ  Special electoral roll revision work completed in Hosahalli

ಲೋಕದರ್ಶನ ವರದಿ  

ಹೂವಿನಹಡಗಲಿ 10: ರಾಜ್ಯಾದ್ಯಂತ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ವೇಗವಾಗಿ ಸಾಗುತ್ತಿದ್ದು, ಐದು ಕೋಟಿಗೂ ಹೆಚ್ಚು ಮತದಾರರ ಮನೆಗಳಿಗೆ ಎನ್ಯುಮರೇಷನ್ ನಮೂನೆಗಳನ್ನು ತಲುಪಿಸುವ ಕಾರ್ಯ ನಡೆಯುತ್ತಿದೆ.  ಹೂವಿನಹಡಗಲಿ ತಾಲೂಕಿನ ಹೊಸಹಳ್ಳಿ ಗ್ರಾಮದ 49ನೇ ಮತಗಟ್ಟೆ ವ್ಯಾಪ್ತಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ.

ಈ ಸಾಧನೆಗೆ ಕಾರಣರಾದ ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ನಿಂಗಣ್ಣ ತೊಗರಿಕಟ್ಟೆ, ಗ್ರಾಮ ಲೆಕ್ಕಾಧಿಕಾರಿ, ರಾಜಕೀಯ ಪಕ್ಷಗಳ ಬಿಎಲ್‌ಎಗಳಾದ ಮುತ್ತುರಾಜ ಹಸಿಬಿ, ರಾಕೇಶ್ ಬಾಕಿ, ಚುನಾವಣಾ ಸಿಬ್ಬಂದಿ ಸಲೀಂ, ಮಂಜುನಾಥ, ಕುಬೇರ ನಾಯ್ಕ ಸೇರಿದಂತೆ ಕಾರ್ಯದಲ್ಲಿ ತೊಡಗಿದ್ದ ಸಿಬ್ಬಂದಿಯನ್ನು ತಾಲೂಕು ಆಡಳಿತದ ವತಿಯಿಂದ ಸನ್ಮಾನಿಸಲಾಯಿತು.  ಈ ಸಂದರ್ಭದಲ್ಲಿ ಚುನಾವಣಾ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಶ್ರಮಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಸೇವೆಯನ್ನು ತಾಲೂಕು ಆಡಳಿತ ಪ್ರಶಂಸಿಸಿತು.