39 ವರ್ಷಗಳ ಸೇವೆಗೆ ಸುಜಾತ ಚಲವಾದಿಗೆ ಚಲವಾದಿ ಸಮಾಜದಿಂದ ವಿಶೇಷ ಸನ್ಮಾನ
Special felicitation for Sujatha Chalavadi by the Chalavadi community for 39 years of service
ಮಮದಾಪುರ 11 : ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಮಮದಾಪುರ ಗ್ರಾಮದ ಆರೋಗ್ಯ ಇಲಾಖೆಯಲ್ಲಿ ಬರೋಬ್ಬರಿ 39 ವರ್ಷಗಳ ಕಾಲ ಸುಶ್ರೂಷಕಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಸುಜಾತ ಜಟ್ಟೆಪ್ಪ ಚಲವಾದಿ ಅವರನ್ನು ಮಮದಾಪುರದ ಚಲವಾದಿ ಸಮಾಜದ ವತಿಯಿಂದ ವಿಶೇಷವಾಗಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮದ ಯುವ ನಾಯಕ ಸುಖದೇವ್ ಕಟ್ಟಿಮನಿ, “ಭೂಮಿಗೆ ಬರುವುದಕ್ಕಿಂತ ಮೊದಲು ನಮ್ಮನ್ನು ಕಾಯುವ ಭಗವಂತ ಮೇಲಿದ್ದಾನೆ. ಆದರೆ ಭೂಮಿಯ ಮೇಲೆ ನಮ್ಮೆಲ್ಲರ ಆರೋಗ್ಯವನ್ನು ಕಾಪಾಡುವ ದೇವರಂದರೆ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿ” ಎಂದು ಹೇಳಿದರು.
ಸುಜಾತ ಚಲವಾದಿ ಅವರು ತಮ್ಮ 39 ವರ್ಷಗಳ ಸುದೀರ್ಘ ಸೇವಾ ಅವಧಿಯಲ್ಲಿ ಜನರೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿಕೊಂಡು, ಪ್ರಾಮಾಣಿಕತೆ ಮತ್ತು ಸೇವಾ ಮನೋಭಾವದಿಂದ ಜನರ ಪ್ರೀತಿಗೆ ಪಾತ್ರರಾಗಿದ್ದಾರೆ. ಸರ್ಕಾರಿ ಸೇವೆಯಿಂದ ನಿವೃತ್ತಿಯಾಗಿದ್ದರೂ, ಜನರ ಸೇವೆಯಿಂದ ಅವರು ನಿವೃತ್ತರಾಗಿಲ್ಲ ಎಂದು ಕಟ್ಟಿಮನಿ ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಮಮದಾಪುರದ ವಿರಕ್ತಮಠದ ಅಭಿನವ ಮುರುಗೇಂದ್ರ ಮಹಾಸ್ವಾಮಿಗಳು, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಗಂಗೂರು, ಸದಾಶಿವ ಕಾಖಂಡಿಮಠ, ಕೌಸರ್ ನಿಯಾಜ್ ಅತ್ತಾರ್, ಲಕ್ಷ್ಮಣ್ ತೇಲಿ, ಸುಖದೇವ್ ಕಟ್ಟಿಮನಿ, ಸಾಬುರಾವ್ ಚಲವಾದಿ ಸೇರಿದಂತೆ ಹಲವು ಗಣ್ಯರು ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದು, ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್ 