ಲೋಕದರ್ಶನ ವರದಿ
ವಿಜಯಪುರ 12:ಜಿಲ್ಲೆಯಲ್ಲಿರುವ ಅಪಘಾತ ವಲಯಗಳನ್ನು ಗುರುತಿಸಿ ರಸ್ತೆ ಸುರಕ್ಷತಾ ನಿಯಮಗಳಿಗನುಸರಿಸಿ, ಸುಸಜ್ಜಿತ ರಸ್ತೆಗಳನ್ನು ನಿಮರ್ಿಸಲು ಲೋಕೋಪಯೋಗಿ ಇಲಾಖೆಯಿಂದ ವಿಶೇಷ ಅನುದಾನ ಬಿಡುಗಡೆಗೊಳಿಸಲು ಗೃಹ ಸಚಿವ ಎಂ.ಬಿ.ಪಾಟೀಲ್ ಕ್ರಮಕೈಗೊಂಡಿದ್ದು, ಸಚಿವರ ಸೂಚನೆಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿಂದು ಈ ಕುರಿತ ಸಭೆ ಜರುಗಿತು.
ಕಳೆದ ವಾರ ಜಿಲ್ಲೆಗೆ ಭೇಟಿ ನೀಡಿ ಪೋಲೀಸ್ ಇಲಾಖೆ ಸಭೆ ನಡೆಸಿದ್ದ ಗೃಹ ಸಚಿವ ಎಂ.ಬಿ.ಪಾಟೀಲ್, ಸಭೆಯಲ್ಲಿ ಜಿಲ್ಲೆಯಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ರಸ್ತೆ ಅಪಘಾತಗಳನ್ನು ತಗ್ಗಿಸುವ ಕುರಿತು ಅಧಿಕಾರಿಗಳಿಂದ ವಿವರ ಮಾಹಿತಿ ಪಡೆದಿದ್ದರು. ಜಿಲ್ಲೆಯಾದ್ಯಂತ ಇರುವ ಅಪಘಾತ ಸಂಭವಿಸುವ ಸ್ಥಳಗಳನ್ನು ಗುರುತಿಸಲು ಸೂಚಿಸಿದ್ದ ಅವರು ಲೋಕೋಪಯೋಗಿ ಇಲಾಖೆ ಸಚಿವರಾದ ಎಚ್.ಡಿ.ರೇವಣ್ಣನವರನ್ನು ವಿನಂತಿಸಿ, ಜಿಲ್ಲೆಗೆ ವಿಶೇಷ ಅನುದಾನ ಒದಗಿಸಿ ಅಪಘಾತ ವಲಯಗಳ ರಸ್ತೆಗಳನ್ನು ಸುಧಾರಿಸಿ, ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಕೋರಿದ್ದರು.
ಗೃಹ ಸಚಿವರ ಕೋರಿಕೆಗೆ ಸ್ಪಂದಿಸಿರುವ ಲೋಕೋಪಯೋಗಿ ಸಚಿವರು ವಿಜಯಪುರ ಜಿಲ್ಲೆಗೆ ವಿಶೇಷ ಅನುದಾನ ಒದಗಿಸಲು ಒಪ್ಪಿಗೆ ನೀಡಿದ್ದು, ಉಭಯ ಸಚಿವರ ಸೂಚನೆಯ ಹಿನ್ನೆಲೆಯಲ್ಲಿ ವಿಜಯಪುರದಲ್ಲಿಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲೆಯಲ್ಲಿ ಅಪಘಾತ ವಲಯಗಳನ್ನು ಗುರುತಿಸಿ ಪ್ರಸ್ತಾವನೆ ಸಲ್ಲಿಸುವ ನಿಮಿತ್ತ ಸಭೆ ಜರುಗಿತು.
ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಪ್ರಕಾಶ ನಿಕ್ಕಂ, ಲೋಕೋಪಯೋಗಿ ಇಲಾಖೆ ಅಭಿಯಂತರ ಜಿ.ಎಸ್.ಪಾಟೀಲ ಸೇರಿದಂತೆ ಪೋಲೀಸ್, ಲೋಕೋಪಯೋಗಿ, ಸಾರಿಗೆ, ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು ವಿಸ್ತೃತ ಚಚರ್ೆ ನಡೆಸಿದರು.
ಬೆಂಗಳೂರು ಕೇಂದ್ರ ಕಛೇರಿಯಿಂದ ಆಗಮಿಸಿರುವ ಅಧಿಕಾರಿಗಳ ತಂಡ 2ದಿನಗಳ ಕಾಲ ವಿಜಯಪುರದಲ್ಲಿದ್ದು, ಸ್ಥಳ ಪರಿವೀಕ್ಷಣೆ ನಡೆಸಿ, ವರದಿ ತಯಾರಿಸಿ ಸಚಿವರಿಗೆ ಸಲ್ಲಿಸಲಿದೆ.