ಹದಿಹರೆಯದವರ ಸಮಸ್ಯೆಗಳ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ
Special lecture program on adolescent issues
ಯಮಕನಮರಡಿ 24: ಸ್ಥಳೀಯ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಮಹಿಳಾ ಸಬಲೀಕರಣ ಘಟಕ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕದಡಿ ವಿದ್ಯಾರ್ಥಿನಿಯರಿಗಾಗಿ ಹದಿಹರೆಯದವರ ಸಮಸ್ಯೆಗಳ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮಕ್ಕೆ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಗಳಾಗಿ ಡಾ.ಸ್ವಪ್ನಾ ಕುಲಕರ್ಣಿ ಆಯುರ್ವೇಧ ವೈಧ್ಯರು ಬೆಳಗಾವಿ ಇವರು ಆಗಮಿಸಿ, ವಿದ್ಯಾರ್ಥಿನಿಯರಿಗೆ ಹದಿಯರೆಯದ ಸಮಸ್ಯೆಗಳು ಹಾಗೂ ನಿರ್ವಹಣೆ ಕುರಿತು ತಿಳಿವಳಿಕೆ ನೀಡಿದರು. ಸಂಪನ್ಮೂಲ ವ್ಯಕ್ತಿಗಳು ಮಾತನಾಡುತ್ತ ಹದಿಹರೆಯದ ವಯಸ್ಸು ಹೆಣ್ಣು ಮಕ್ಕಳಲ್ಲಿ ಮಹತ್ವದ ಹಂತವಾಗಿದ್ದು ಬಾಲ್ಯಾವಸ್ಥೆಯನ್ನು ದಾಟಿ ಹರೆಯಕ್ಕೆ ಕಾಲಿಡುವಾಗ ಮಕ್ಕಳಲ್ಲಿ ಆಗುವ ದೈಹಿಕ ಮಾನಸಿಕ ಹಾಗೂ ಭಾವನಾತ್ಮಕ ಬದಲಾವಣೆಗಳ ಕುರಿತು ವಿವರಿಸಿದರು.ಈ ವಯಸ್ಸಿನಲ್ಲಾಗುವ ಮಾನಸಿಕ ಚಂಚಲತೆಗಳು ಭಾವನಾತ್ಮಕ ದುಗುಡ ದುಮ್ಮಾನಗಳು ಹಾಗೂ ಮುಖ್ಯವಾಗಿ ಸಂಭವಿಸುವ ಆರೋಗ್ಯ ಸಮಸ್ಯೆಗಳ ಕುರಿತು ವಿದ್ಯಾರ್ಥಿನಿಯರಿಗೆ ವಿವರವಾಗಿ ತಿಳಿಸಿ ಉತ್ತಮ ಗುರಿ ಇಟ್ಟು ಮನೋನಿಗ್ರಹ ಕಾಯ್ದುಕೊಂಡು ಭವಿಷ್ಯರೂಪಿಸಿಕೊಳ್ಳಲು ಕರೆ ಕೊಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯ ಶ್ರೀ.ಎಸ.ಎ.ರಾಮನಕಟ್ಟಿ ವಹಿಸಿದ್ದರು.ಉಪನ್ಯಾಸಕಿ ವಿಧ್ಯಾ ಹೊಳೆಪ್ಪಗೋಳ ಸ್ವಾಗತಿಸಿ ಪ್ರಾಸ್ತಾವಿಕ ನುಡಿ ಆಡಿದರು.ಉಪನ್ಯಾಸಕಿ ಎಸ್.ಆರ್.ಹುನ್ನರಗಿ ಅತಿಥಿಗಳ ಪರಿಚಯ ಮಾಡಿಕೊಟ್ಟರು. ಉಪನ್ಯಾಸಕಿ ದೀಪಾ ತೇಲಿ ಇವರು ವಂದನೆಗಳನ್ನು ಸಲ್ಲಿಸಿದರು.ಉಪನ್ಯಾಸಕಿ ಗಂಗಮ್ಮ ಮಠಪತಿ ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲ ಉಪನ್ಯಾಸಕ ವೃಂಧ ಹಾಗೂ ಎಲ್ಲ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 