ಮುಂಡಗೋಡ ತಾಲೂಕಿನಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ವಿಶೇಷ ಪ್ರೇರಣಾ ಶಿಬಿರ
Special motivational camp for SSLC students in Mundagoda taluk
ಮುಂಡಗೋಡ 09: ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶವನ್ನು ಹೆಚ್ಚಿಸುವ ಉದ್ದೇಶದಿಂದ ಮುಂಡಗೋಡ ತಾಲೂಕಿನ ವಿವಿಧ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ವತಿಯಿಂದ ವಿಶೇಷ ಪ್ರೇರಣಾ ಶಿಬಿರಗಳನ್ನು ಹಮ್ಮಿಕೊಳ್ಳಲಾಗಿದೆ. ದಿನಾಂಕ 04-02-2026 ರಿಂದ 06-02-2026 ಹಾಗೂ 09-02-2026 ರಿಂದ 11-02-2026 ರವರೆಗೆ ಎರಡು ಹಂತಗಳಲ್ಲಿ ಈ ಶಿಬಿರಗಳು ನಡೆಯುತ್ತಿವೆ. ಶಿಬಿರವನ್ನು ಶಿರಸಿ ಶೈಕ್ಷಣಿಕ ಜಿಲ್ಲಾ ಪ್ರೌಢಶಾಲಾ ಮುಖ್ಯಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾದ ಎಸ್.ಡಿ. ಮುಡೆಣ್ಣವರ ಉದ್ಘಾಟಿಸಿ ಮಾತನಾಡಿ, ಎಲ್.ಬಿ.ಎ ಆಧಾರಿತ ಪ್ರಶ್ನೆಗಳು ಹಾಗೂ ಶಿಕ್ಷಣ ಇಲಾಖೆಯ ‘40 ಪ್ಲಸ್ ಮಿಷನ್’ ಕಾರ್ಯಕ್ರಮವನ್ನು ಸಮರ್ಕವಾಗಿ ಬಳಸಿಕೊಂಡರೆ ವಿದ್ಯಾರ್ಥಿಗಳು ಹೆಚ್ಚು ಅಂಕ ಗಳಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ತಾಲೂಕು ಎಸ್.ಎಸ್.ಎಲ್.ಸಿ ನೋಡಲ್ ಅಧಿಕಾರಿ ನಾಗರಾಜ ನಾಯ್ಕ ಮಾತನಾಡಿ, ಈ ವರ್ಷ ಮುಂಡಗೋಡ ತಾಲೂಕಿನ ಎಸ್.ಎಸ್.ಎಲ್.ಸಿ ಫಲಿತಾಂಶವನ್ನು ಶೇ.95 ಕ್ಕಿಂತ ಹೆಚ್ಚು ತರುವ ಗುರಿ ಹೊಂದಲಾಗಿದೆ ಎಂದರು. ವಿದ್ಯಾರ್ಥಿಗಳು ಶಿಕ್ಷಕರ ಮಾರ್ಗದರ್ಶನವನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಅವರು ಸಲಹೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಿ.ಸಿ. ಕೇಶಪ್ಪನಟ್ಟಿ ವಹಿಸಿ ಮಾತನಾಡಿ, ಶಿಬಿರದಲ್ಲಿ ನೀಡಲಾಗುವ ಮಾರ್ಗದರ್ಶನವನ್ನು ಸದುಪಯೋಗಪಡಿಸಿಕೊಂಡು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ರೋಟರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಜಿ.ಎನ್. ಕುಲಕರ್ಣಿ, ಕನ್ನಡ ವಿಷಯದ ಸಂಪನ್ಮೂಲ ಶಿಕ್ಷಕ ವಾಸುದೇವ ಮಡ್ಲಿ ಸೇರಿದಂತೆ ಅನೇಕ ಶಿಕ್ಷಕರು ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ರಮೇಶ್ ಪವಾರ, ಸ್ವಾಗತವನ್ನು ಬಿ.ಕೆ. ಬಡಗೇರ, ವಂದನೆಯನ್ನು ಸುನೀಲ್ ಲಮಾಣಿ ಸಲ್ಲಿಸಿದರು. ವಿದ್ಯಾರ್ಥಿನಿಯರು ಪ್ರಾರ್ಥನೆ ನೆರವೇರಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 