ಬೆಂಗಳೂರು, ಮೇ 8, ಕೋವಿಡ್- 19ರ ಪರಿಣಾಮ ಹಾಗೂ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ರಸ್ತೆ ಬದಿಯಲ್ಲಿ ಚರ್ಮ ವೃತ್ತಿಯಲ್ಲಿ ತೊಡಗಿ ಜೀವನೋಪಾಯಕ್ಕೆ ತೊಂದರೆಯಾಗಿರುವ ಚರ್ಮ ಕುಶಲ ಕರ್ಮಿಗಳಿಗೆ ( ಕುಲಕಸುಬು) ವಿಶೇಷ ಪ್ಯಾಕೇಜ್ ಅನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದಾರೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದ್ದಾರೆ.11,722 ಕುಟುಂಬಗಳಿಗೆ ಪ್ರತಿ ಕುಟುಂಬಕ್ಕೆ ತಲಾ 5 ಸಾವಿರದಂತೆ ಒಂದು ಬಾರಿ ಪರಿಹಾರವನ್ನು ಸರ್ಕಾರ ನೀಡಿದೆ. ಡಾ.ಬಾಬು ಜಗಜೀವನ್ ರಾಂ ಚರ್ಮ ಕೈಗಾರಿಕೆ ಅಭಿವೃದ್ಧಿ ನಿಗಮದ ಮೂಲಕ ಈ ಫಲಾನುಭವಿಗಳಿಗೆ ನೇರವಾಗಿ ಅವರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು. ಈ ವಿಶೇಷ ಪ್ಯಾಕೇಜ್ ನಿಂದ ಚರ್ಮ ಕುಶಲ ಕರ್ಮಿಗಳಿಗೆ ಜೀವನೋಪಾಯಕ್ಕೆ ನೆರವಾಗಲಿದೆ. ಈ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ ಮುಖ್ಯಮಂತ್ರಿಗಳಿಗೆ ಸಮಾಜ ಕಲ್ಯಾಣ ಇಲಾಖೆಯ ಪರವಾಗಿ ಅಭಿನಂದಿಸುವುದಾಗಿ ಅವರು ತಿಳಿಸಿದ್ದಾರೆ.