ಮತದಾರ ಪಟ್ಟಿ ವಿಶೇಷ ಪರಿಷ್ಕರಣೆ: ಜಾಗೃತಿ ಅಭಿಯಾನ
Special revision of voter list: Awareness campaign
ಲೋಕದರ್ಶನ ವರದಿ
ವಿಜಯಪುರ 29: ಮತದಾರರ ಪಟ್ಟಿಯ ವಿಶೇಷ ಸಮಗ್ರ 2026 ಹಿನ್ನೆಲೆಯಲ್ಲಿ ಮತದಾರರ ನೋಂದಣಿ, ಹೆಸರು ಪರೀಶೀಲನೆ ಹಾಗೂ ತಿದ್ದುಪಡಿ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು. ಜಿಲ್ಲಾ ಪಂಚಾಯಿತಿ ಹಾಗೂ ಸ್ವೀಪ್ ಸಮಿತಿಯ ಸಹಯೋಗದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಯುವ ಮತದಾರರ ಭಾಗವಹಿಸುವಿಕೆ ಹೆಚ್ಚಿಸಲು ವಿಶೇಷ ಗಮನ ನೀಡಲಾಯಿತು.
ಕಾರ್ಯಕ್ರಮದಲ್ಲಿ 18 ವರ್ಷ ಪೂರ್ಣಗೊಂಡ ಎಲ್ಲ ಯುವಕರು ತಮ್ಮ ಹೆಸರುಗಳನ್ನು ಮತದಾರರ ಪಟ್ಟಿಯಲ್ಲಿ ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು ಎಂದು ಅಧಿಕಾರಿಗಳು ತಿಳಿಸಿದರು. ಸರಿಯಾದ ಮತ್ತು ಸಂಪೂರ್ಣ ಮತದಾರರ ಪಟ್ಟಿ ಪ್ರಜಾಪ್ರಭುತ್ವದ ಬಲವರ್ಧನೆಗೆ ಅಗತ್ಯವೆಂದು ಅವರು ಹೇಳಿದರು.
ಗ್ರಾಮ ಪಂಚಾಯಿತಿಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಲಾಯಿತು. ತಪ್ಪು ಮಾಹಿತಿಯನ್ನು ಸರಿಪಡಿಸಲು ಹಾಗೂ ಸ್ಥಳಾಂತರಗೊಂಡವರು ತಮ್ಮ ವಿವರಗಳನ್ನು ನವೀಕರಿಸಿಕೊಳ್ಳಲು ಸೂಚನೆ ನೀಡಲಾಗಿದೆ. ಕಾರ್ಯಕ್ರಮದಲ್ಲಿ ಹಲವು ಕಾಲೇಜುಗಳ ಉಪನ್ಯಾಸಕರು, ಅಧಿಕಾರಿಗಳು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 