ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಚಾಲನೆ
Special revision of voter list launched
ಲೋಕದರ್ಶನ ವರದಿ
ಸವದತ್ತಿ 01: ಮತದಾನ ಪ್ರತಿಯೊಬ್ಬ ನಾಗರಿಕನ ಹಕ್ಕು ಮತ್ತು ಕರ್ತವ್ಯವಾಗಿದೆ. ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 30 ರಿಂದ ಜುಲೈ 29 ರವರೆಗೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ನಡೆಯಲಿದ್ದು, ಸಾರ್ವಜನಿಕರು ಸಕ್ರಿಯವಾಗಿ ಪಾಲ್ಗೊಳ್ಳಬೇಕೆಂದು ಚುನಾವಣಾಧಿಕಾರಿ ಸತೀಶಕುಮಾರ ಎಮ್ ಕರೆ ನೀಡಿದರು.ನಗರದ ತಹಶೀಲ್ದಾರ ಕಾರ್ಯಾಲಯದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮತದಾರರ ಪಟ್ಟಿಯ ಪರಿಷ್ಕರಣಾ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಚುನಾವಣಾಧಿಕಾರಿ ಸತೀಶಕುಮಾರ ಎಮ್, ಪ್ರತಿಯೊಬ್ಬ ನಾಗರಿಕನು ಸ್ವಯಂಪ್ರೇರಿತರಾಗಿ ಈ ಪ್ರಕ್ರಿಯೆಯಲ್ಲಿ ಭಾಗವಹಿಸಿ, ಮತದಾರರ ಪಟ್ಟಿಯನ್ನು ದೋಷರಹಿತವಾಗಿಸಲು ಸಹಕರಿಸಬೇಕು ಎಂದು ಮನವಿ ಮಾಡಿದರು.
ತಹಶೀಲ್ದಾರ ಮಲ್ಲಿಕಾರ್ಜುನ ಹೆಗ್ಗನ್ನವರ ಮಾತನಾಡಿ, ಮತದಾರರ ಪಟ್ಟಿಯನ್ನು ನಿಖರ, ಪಾರದರ್ಶಕ ಮತ್ತು ದೋಷರಹಿತವಾಗಿಸುವುದು ಈ ಪರಿಷ್ಕರಣೆಯ ಮುಖ್ಯ ಉದ್ದೇಶವಾಗಿದೆ. ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಮೂರು ಬಾರಿ ಭೇಟಿ ನೀಡಲಿದ್ದಾರೆ. ಅವರಿಗೆ ಅಗತ್ಯ ದಾಖಲೆಗಳನ್ನು ಒದಗಿಸುವ ಮೂಲಕ ಆರೋಗ್ಯಯುತ ಮತದಾನಕ್ಕೆ ಸಹಕರಿಸಿ. ಈಗಾಗಲೇ ಗ್ರಾಮೀಣ ಭಾಗಗಳಲ್ಲಿ ಜಿಂಗಲ್ ಮತ್ತು ಧ್ವನಿವರ್ಧಕಗಳ ಮೂಲಕ ವ್ಯಾಪಕ ಪ್ರಚಾರ ಕೈಗೊಳ್ಳಲಾಗಿದೆ ಎಂದು ಹೇಳಿದರು.ಮೂಲಿಮಠದ ಮಲ್ಲಿಕಾರ್ಜುನ ಶಿವಾಚಾರ್ಯ ಶ್ರೀಗಳ ದಾಖಲಾತಿಗಳನ್ನು ಪಡೆಯುವ ಮೂಲಕ ಮತದಾನ ಪಟ್ಟಿ ಪರಿಷ್ಕರಣಾ ಕಾರ್ಯಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು.ಈ ಸಂದರ್ಭದಲ್ಲಿ ನಗರಸಭೆ ಪೌರಾಯುಕ್ತ ಸಂಗನಬಸಯ್ಯ ಗದಗಿನಮಠ, ಬಿಇಒ ಎ.ಎ. ಖಾಜಿ, ಸಿಡಿಪಿಒ ಅಮೃತ ಸಾಣಿಕೊಪ್ಪ, ಶಿರಸ್ತೇದಾರ ಶಶಿರಾಜ ವನಕಿ,ಮಲಯ್ಯ ಕಂಬಿ, ಸೇರಿದಂತೆ ಬೂತ್ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 