ಜುಲೈ 29ರವರೆಗೆ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ; ಸಾರ್ವಜನಿಕರ ಸಹಕಾರಕ್ಕೆ ಮನವಿ
Special revision of voter list till July 29; Public's cooperation requested
ಲೋಕದರ್ಶನ ವರದಿ
ಹಾವೇರಿ 30: ಜಿಲ್ಲೆಯ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ಬೂತ್ ಮಟ್ಟದ ಅಧಿಕಾರಿಗಳ (ಬಿಎಲ್‌ಒ) ಮನೆ-ಮನೆ ಭೇಟಿ ಅಭಿಯಾನವನ್ನು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ್ ಉದ್ಘಾಟಿಸಿದರು.
ನಗರದ ವಾಲ್ಮೀಕಿ ವೃತ್ತದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶುದ್ಧ ಹಾಗೂ ನಿಖರ ಮತದಾರರ ಪಟ್ಟಿ ಪ್ರಜಾಪ್ರಭುತ್ವದ ಬಲವಾಗಿದೆ. ಅರ್ಹ ಮತದಾರರ ಹೆಸರು ಸೇರೆ್ಡ ಮತ್ತು ಅನರ್ಹರ ಹೆಸರು ತೆಗೆಯುವ ಪ್ರಕ್ರಿಯೆ ಪರಿಣಾಮಕಾರಿಯಾಗಿ ನಡೆಯುತ್ತಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಪ್ರಸ್ತುತ 13,35,542 ಮತದಾರರಿದ್ದು, ಪ್ರತಿಯೊಂದು ಮನೆಗೂ ಬಿಎಲ್‌ಒಗಳು ಭೇಟಿ ನೀಡಿ ಎನ್ಯೂಮರೇಷನ್ ಫಾರ್ಮ್ ವಿತರಿಸಲಿದ್ದಾರೆ. ಸಾರ್ವಜನಿಕರು ಅಗತ್ಯ ಮಾಹಿತಿಯನ್ನು ನೀಡಿ, ಭರ್ತಿ ಮಾಡಿದ ಫಾರ್ಮ್ಗಳನ್ನು ಸಮಯಕ್ಕೆ ಮರಳಿಸುವ ಮೂಲಕ ಪರಿಷ್ಕರಣೆ ಕಾರ್ಯಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಲ್ಜಿತ್ ಕುಮಾರ್ ಮಾತನಾಡಿ, ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜುಲೈ 29ರವರೆಗೆ ಬಿಎಲ್‌ಒಗಳು ಮನೆ-ಮನೆಗೆ ಭೇಟಿ ನೀಡಲಿದ್ದಾರೆ. ಎರಡು ಪ್ರತಿಗಳ ಎನ್ಯೂಮರೇಷನ್ ಫಾರ್ಮ್ ನೀಡಲಾಗುತ್ತಿದ್ದು, ಭರ್ತಿ ಮಾಡಿದ ಒಂದು ಪ್ರತಿಯನ್ನು ಬಿಎಲ್‌ಒಗಳಿಗೆ ಸಲ್ಲಿಸಬೇಕು. ಅದರ ಆಧಾರದ ಮೇಲೆ ಕರಡು ಮತದಾರರ ಪಟ್ಟಿಯಲ್ಲಿ ಹೆಸರು ದಾಖಲಿಸಲಾಗುತ್ತದೆ ಎಂದು ತಿಳಿಸಿದರು.
ಮತದಾನವು ಪ್ರತಿಯೊಬ್ಬ ನಾಗರಿಕನ ಮೂಲಭೂತ ಹಕ್ಕಾಗಿದ್ದು, ಎಲ್ಲರೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಪುನೀತ್ ಬಿ.ಆರ್., ಜಿಲ್ಲಾ ಉಪವಿಭಾಗಾಧಿಕಾರಿ ಕಲ್ಯಾಣಿ ಕಬ್ಬೆ, ತಹಶೀಲ್ದಾರ್ ಶರಣಮ್ಮ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ಬಳಿಕ ವಾಲ್ಮೀಕಿ ವೃತ್ತದಿಂದ ಮೈಲಾರ ಮಹದೇವಪ್ಪ ವೃತ್ತದವರೆಗೆ ಮತದಾರರ ಜಾಗೃತಿ ಜಾಥಾ ನಡೆಯಿತು.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 