ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ: ಬೂತ್ ಮಟ್ಟದ ಅಧಿಕಾರಿಗಳಿಗೆ ತರಬೇತಿ
Special revision of voters' list: Training for booth-level officials
ಯರಗಟ್ಟಿ 30 : ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026 ಕಾರ್ಯಕ್ರಮದ ಪೂರ್ವಭಾವಿಯಾಗಿ ತಾಲ್ಲೂಕು ದಂಡಾಧಿಕಾರಿ ಹಾಗೂ ತಹಶೀಲ್ದಾರ್ ಎಂ.ವಿ. ಗುಂಡಪ್ಪಗೋಳ ಅವರ ಅಧ್ಯಕ್ಷತೆಯಲ್ಲಿ ಬೂತ್ ಲೆವೆಲ್ ಆಫೀಸರ್ ಮತ್ತು ಬೂತ್ ಲೆವೆಲ್ ಏಜೆಂಟ್ ಗಳಿಗೆ ಜಂಟಿ ತರಬೇತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಅಧಿಕಾರಿಗಳು ಮತದಾರರ ಪಟ್ಟಿಯ ಶುದ್ಧತೆ, ನಿಖರತೆ ಹಾಗೂ ಮನೆಮನೆ ಭೇಟಿ ಮೂಲಕ ಮಾಹಿತಿಯ ಸಂಗ್ರಹದ ಮಹತ್ವವನ್ನು ವಿವರಿಸಿದರು. ಪ್ರತಿಯೊಬ್ಬ ಅರ್ಹ ಮತದಾರರ ಹೆಸರು ಪಟ್ಟಿಯಲ್ಲಿ ಸೇರೆ್ಡಗೊಳ್ಳುವಂತೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕೆಂದು ಸೂಚಿಸಲಾಯಿತು.
ತಾಲ್ಲೂಕು ಪಂಚಾಯಿತಿ ಮುಖ್ಯಾಧಿಕಾರಿ ಮಹೇಶ್ ಭಜಂತ್ರಿ ಮಾತನಾಡಿ, ಮತದಾರರ ಪಟ್ಟಿ ಶುದ್ಧತೆ ಕಾಪಾಡುವಲ್ಲಿ ಪಾತ್ರ ಅತ್ಯಂತ ಪ್ರಮುಖವಾಗಿದೆ ಎಂದು ಹೇಳಿದರು. ಮತದಾನ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ನಡೆಸುವುದು ಚುನಾವಣಾ ಆಯೋಗದ ಉದ್ದೇಶವಾಗಿದೆ ಎಂದು ಅವರು ತಿಳಿಸಿದರು. ಕಾರ್ಯಕ್ರಮದಲ್ಲಿ ಸಂಬಂಧಿತ ಅಧಿಕಾರಿಗಳು, ಗ್ರಾಮ ಆಡಳಿತ ಸಿಬ್ಬಂದಿ ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 