ಕರಾವಳಿ ಜಿಲ್ಲೆಗಳಿಗೆ ಏಕ, ಬಹು ನಿವೇಶನ ವಿನ್ಯಾಸ ಅನುಮೋದನೆಗೆ ವಿಶೇಷ ಸೇವೆ ಕಲ್ಪಿಸಿದೆ: ಸಚಿವ ಬಿ. ಎಸ್. ಸುರೇಶ್
Special service provided for single and multi-site design approval for coastal districts: Minister B
ಬೆಳಗಾವಿ ಸುವರ್ಣ ವಿಧಾನಸೌಧ ಡಿ.09: ರಾಜ್ಯದ ಇತರೆ ಜಿಲ್ಲೆಗಳಿಗಿಂತ ಕರಾವಳಿ ಜಿಲ್ಲೆಗಳು ಭೌಗೋಳಿಕವಾಗಿ ಭಿನ್ನವಾಗಿರುವುದರಿಂದ ಈ ಜಿಲ್ಲೆಗಳಿಗೆ ಅನ್ವಯವಾಗುವಂತೆ ಏಕ/ಬಹು ನಿವೇಶನ ವಿನ್ಯಾಸ ಅನುಮೋದನೆ ನೀಡುವ ಕುರಿತು ವಿಶೇಷ ಸೇವೆಗಳನ್ನು ಕಲ್ಪಿಸಲಾಗಿದೆ ಎಂದು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವ ಬಿ. ಎಸ್. ಸುರೇಶ್ ತಿಳಿಸಿದರು.ಅವರು ವಿಧಾನ ಪರಿಷತ್‌ನಲ್ಲಿ ಸದಸ್ಯ ಮಂಜುನಾಥ ಭಂಡಾರಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಮಾತನಾಡಿದರು.ಕರಾವಳಿ ಜಿಲ್ಲೆಗಳಲ್ಲಿ ಸ್ಥಳೀಯ ಯೋಜನಾ ಪ್ರದೇಶದ ವ್ಯಾಪ್ತಿಗೆ ಒಳಪಡದೇ ಇರುವ ಗ್ರಾಮ ಪಂಚಾಯತಿಯಲ್ಲಿನ ಒಂದು ಎಕರೆ ಒಳಗಿನ ಜಮೀನುಗಳಿಗೆ ಅನುಮೋದನೆ ನೀಡುವ ಪ್ರಕರಣಗಳಿಗೆ ತಾಂತ್ರಿಕ ಅನುಮೋದನೆ ನೀಡಲು ಸಹಾಯಕ ನಿರ್ದೇಶಕರ ಕಛೇರಿ ಹಾಗೂ ಹತ್ತಿರದ ಯೋಜನಾ ಪ್ರಾಧಿಕಾರಗಳ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯ ಅಧಿಕಾರಿಗಳಿಗೆ ಅಧಿಕಾರ ಪ್ರತ್ಯಾಯೋಜಿಸಿ, ತಾಲ್ಲೂಕು ಪಂಚಾಯತಿ ಕಛೇರಿಯಲ್ಲಿಯೇ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯ ಅಧಿಕಾರಿಗಳು ಕಾರ್ಯನಿರ್ವಹಿಸಲು ಆದೇಶಿಸಲಾಗಿದೆ.
ಕರಾವಳಿ ಜಿಲ್ಲೆ ಒಳಗೊಂಡಂತೆ ಇಡೀ ರಾಜ್ಯಕ್ಕೆ ಅನ್ವಯವಾಗುವಂತೆ ಏಕ- ಬಹು ನಿವೇಶನ ವಿನ್ಯಾಸ ಅನುಮೋದನೆ ನೀಡುವ ಕುರಿತ ನಿಯಮ ಗಳನ್ನು ಸಮನ್ವಯಗೊಳಿಸಲು ಮತ್ತು ವಿನ್ಯಾಸ ಅನುಮೋದನೆ ಯನ್ನು ಪಾರದರ್ಶಕತೆ ಹಾಗೂ ಜನ ಸ್ನೇಹಿಯಾಗಿಸಲು ಅನುಕೂಲವಾಗುವಂತೆ ಸೆಂಟರ್ ಫಾರ್ ಇ ಗವರ್ನೆನ್ಸ್ ವತಿಯಿಂದ ಯೂನಿಫೈಡ್ ಲ್ಯಾಂಡ್ ಮ್ಯಾನೇಜ್ಮೆಂಟ್ ಸಿಸ್ಟಮ್ ತಂತ್ರಾಂಶವನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 