ಕೇಂದ್ರ ಕಾರಾಗೃಹ ಧಾರವಾಡದ ಬಂಧಿಗಳಿಗೆ ವಿಶೇಷ ಕೌಶಲ್ಯ ತರಬೇತಿ
Special skills training for inmates of Central Jail Dharwad
ಲೋಕದರ್ಶನ ವರದಿ
ಧಾರವಾಡ 25: ಕೌಶಲ್ಯಾಭಿವೃದ್ಧಿ ನಿಗಮದಿಂದ ಧಾರವಾಡ ಕೇಂದ್ರ ಕಾರಾಗೃಹ ಬಂಧಿಗಳಿಗೆ ವಿಶೇಷ ಕೌಶಲ್ಯ ತರಬೇತಿ (ಅಸಿಸ್ಟಂಟ್ ಫ್ಯಾಶನ್ ಡಿಸೈನರ್) ಕಾರ್ಯಕ್ರಮವನ್ನು ನಿನ್ನೆ (ಜೂ.24) ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಬೆಂಗಳೂರಿನ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯಕ್ ಅವರು ಸಸಿಗೆ ನೀರುಣಿಸುವುದರ ಮೂಲಕ ಉದ್ಘಾಟಿಸಿ, ಮಾತನಾಡಿದರು.
ಕೌಶಲ್ಯ ಅಭಿವೃದ್ಧಿ ನಿಗಮದಿಂದ ಹಲವಾರು ವಿಶೇಷ ತರಬೇತಿ ಕಾರ್ಯಕ್ರಮಗಳಿದ್ದು, ಕಾರಾಗೃಹದ ಬಂದಿಗಳಿಗೆ ಬೇಡಿಕೆ ಇರುವ ಕೌಶಲ್ಯ ತರಬೇತಿಯು ವ್ಯಕ್ತಿಯ ಜೀವನದಲ್ಲಿ ಮಹತ್ವದ ಪರಿವರ್ತನೆ ಶಕ್ತಿಯನ್ನು ಕಾರಾಗೃಹದಲ್ಲಿರುವ ಬಂದಿಗಳಿಗೆ ಉದ್ಯೋಗೋನ್ಮುಖ ಕೌಶಲ್ಯಗಳನ್ನು ಕಲಿಸುವ ಮೂಲಕ ಅವರಲ್ಲಿ ಆತ್ಮವಿಶ್ವಾಸ ಬೆಳೆಸಿ ಸಮಾಜದಲ್ಲಿ ಮುಖ್ಯವಾಹಿನಿಗೆ ಮರಳಲು ಸಹಕಾರಿಯಾಗಲಿದೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಮಾತನಾಡಿ, ಕೌಶಲ್ಯಾಭಿವೃದ್ದಿ ಕಾರ್ಯಕ್ರಮಗಳ ಕಾರಾಗೃಹದ ಬಂದಿಗಳಿಗೆ ಬದುಕು ಕಟ್ಟಿಕೊಳ್ಳಲು ಅಗತ್ಯವಾದ ಕೌಶಲ್ಯಗಳನ್ನು ಒದಗಿಸುತ್ತವೆ ಮತ್ತು ಬಂದಿಗಳು ಫ್ಯಾಶನ್ ಡಿಸೈನಿಂಗ್ ಮತ್ತು ಆಹಾರ ಸಂಸ್ಕರಣಾ ಕ್ಷೇತ್ರದಲ್ಲಿ ತರಬೇತಿಯನ್ನು ಪಡೆದುಕೊಂಡರೆ ಸ್ವಯಂ ಉದ್ಯೋಗ ಕೈಗೊಂಡು ಸಮಾಜದಲ್ಲಿ ಉತ್ತಮ ರೀತಿಯಲ್ಲಿ ಸ್ವಾವಲಂಬಿ ಜೀವನ ಕಟ್ಟಿಕೊಳ್ಳಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.
ಕೇಂದ್ರ ಕಾರಾಗೃಹದ ಸಹಾಯಕ ಅಧೀಕ್ಷಕಿ ನಿರ್ಮಲಾ ಬಿ.ಆರ್. ಅವರು ಮಾತನಾಡಿ, ಸರ್ಕಾರದ ವಿವಿಧ ಇಲಾಖೆಗಳಿಂದ ಬಂದಿಗಳ ಬೇಡಿಕೆಯಂತೆ ವಿವಿಧ ತರಬೇತಿ ಕಾರ್ಯಕ್ರಮಗಳನ್ನು ನೀಡುತ್ತಲಿದ್ದು, ಬಂದಿಗಳು ಕೌಶಲ್ಯ ತರಬೇತಿಯ ಕಾರ್ಯಕ್ರಮವನ್ನು ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.
ಶ್ರೀ ರೇಣುಕಾ ವೆಲಫೇರ ಎಜ್ಯುಕೇಶನ ಸೊಸೈಟಿಯ ಅಧ್ಯಕ್ಷರು ಮಾತನಾಡಿ, ಫ್ಯಾಶನ್ ಡಿಸೈನಿಂಗ್ ಕ್ಷೇತ್ರದಲ್ಲಿ ಅಗತ್ಯವಿರುವ ತಾಂತ್ರಿಕ ಜ್ಞಾನ ಹೊಲಿಗೆ ಕೌಶಲ್ಯ ಹಾಗೂ ಉದ್ಯೋಗಾವಕಾಶಗಳಿಗೆ ಸಂಬಂಧಿಸಿದ ತರಬೇತಿಯನ್ನು ನೀಡಲಾಗುವದು ಮತ್ತು ತರಬೇತಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರವನ್ನು ನೀಡಲಾಗುವುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಸಿ.ಎಂ.ಚನಬಸನಗೌಡರ ಹಾಗೂ ಕರಕುಶಲ ಜವಳಿ ಮಂತ್ರಾಲಯದ ಸಹಾಯಕ ನಿರ್ದೇಶಕ ಕಿರಣ ವಿ.ಎನ್ ಮತ್ತು ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಾಯಕ ನಿರ್ದೇಶಕ ಗಂಗಪ್ಪ ಹಣಬರ ಹಾಗೂ ಕಾರಾಗೃಹದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು, ಕಾರಾಗೃಹದ ಬಂದಿಗಳು ಉಪಸ್ಥಿತರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 