ಧಾರವಾಡ ಹಾಲು ಒಕ್ಕೂಟದಿಂದ ವಿಶೇಷ ತರಬೇತಿ ಶಿಬಿರ
Special training camp by Dharwad Milk Union
ಲೋಕದರ್ಶನ ವರದಿ
ಗದಗ 27: ಧಾರವಾಡ ಹಾಲು ಒಕ್ಕೂಟ, ಗದಗ ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಗದಗ ಮತ್ತು ಉತ್ತರ ಕನ್ನಡ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ರೋಣ ಹಾಗೂ ಗಜೇಂದ್ರಗಡ ತಾಲ್ಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಮುಖ್ಯ ಕಾರ್ಯನಿರ್ವಾಹಕರಿಗೆ ಜಿಲ್ಲಾ ಮಟ್ಟದ ವಿಶೇಷ ತರಬೇತಿ ಶಿಬಿರ ಗುರುವಾರ ರೋಣದ ರಾಘವೇಂದ್ರರಾವ್ ಕುಲಕರ್ಣಿ ಮಂಗಳಭವನದಲ್ಲಿ ನಡೆಯಿತು.
ಧಾರವಾಡ ಹಾಲು ಒಕ್ಕೂಟದ ಮಾಜಿ ಅಧ್ಯಕ್ಷ ಹಾಗೂ ಹಾಲಿ ನಿರ್ದೇಶಕ ಶ್ರೀ ನೀಲಕಂಠ ಅಸೂಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕರ್ನಾಟಕವು ಹಾಲು ಉತ್ಪಾದನೆಯಲ್ಲಿ ದೇಶದಲ್ಲಿ ಎರಡನೇ ಸ್ಥಾನದಲ್ಲಿದ್ದು, ಧಾರವಾಡ ಹಾಲು ಒಕ್ಕೂಟ ವೈಜ್ಞಾನಿಕ ಮಾದರಿಯಲ್ಲಿ ಹಾಲು ಶೇಖರಣೆ ಹಾಗೂ ರೈತರ ಹಿತ ರಕ್ಷಣೆಗೆ ನಿರಂತರವಾಗಿ ಶ್ರಮಿಸುತ್ತಿದೆ ಎಂದರು. ರೈತರಿಗೆ ಸೂಕ್ತ ತರಬೇತಿ, ಮೇವು ಬೀಜ, ಪಶು ಆಹಾರ, ಮನೆ ಬಾಗಿಲಿಗೆ ಪಶುವೈದ್ಯಕೀಯ ಸೇವೆ ಹಾಗೂ ವಿಮಾ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ತಿಳಿಸಿದರು.
ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಡಿ.ಟಿ. ಕಳಸದ ಮಾತನಾಡಿ, ರಾಜ್ಯದಲ್ಲಿನ 16 ಹಾಲು ಒಕ್ಕೂಟಗಳಲ್ಲಿ ಧಾರವಾಡ ಹಾಲು ಒಕ್ಕೂಟ ಪ್ರಗತಿಯಲ್ಲಿ ಮೊದಲ ಸ್ಥಾನದಲ್ಲಿದೆ. ಒಕ್ಕೂಟವು ಸುಮಾರು ?21 ಕೋಟಿ ಲಾಭ ಗಳಿಸಿದ್ದು, ಅದರಲ್ಲಿ 18 ಕೋಟಿಗೂ ಅಧಿಕ ಮೊತ್ತವನ್ನು ರೈತರು ಮತ್ತು ಹಾಲು ಉತ್ಪಾದಕರ ಸಂಘಗಳಿಗೆ ಪ್ರೋತ್ಸಾಹಧನವಾಗಿ ಮರುಹಂಚಿಕೆ ಮಾಡಲಾಗಿದೆ ಎಂದರು. ಹಾಲಿನ ಪುಡಿ ಹಾಗೂ ಪನೀರ್ ಉತ್ಪಾದನಾ ಘಟಕಗಳಿಗೆ ಉತ್ತೇಜನ ನೀಡಲಾಗುತ್ತಿದೆ ಎಂದು ಹೇಳಿದರು.
ಸಹಕಾರ ಸಂಘಗಳು ಕಾನೂನುಬದ್ಧ ಕರ್ತವ್ಯಗಳನ್ನು ಸಮರ್ಕವಾಗಿ ನಿರ್ವಹಿಸುವುದು, ನಿಯಮಿತವಾಗಿ ಲೆಕ್ಕಪರಿಶೋಧನೆ ಮಾಡಿಸುವುದು ಹಾಗೂ ವಾರ್ಷಿಕ ಮಹಾಸಭೆಯಲ್ಲಿ ಅರ್ಹ ಲೆಕ್ಕಪರಿಶೋಧಕರನ್ನು ಆಯ್ಕೆ ಮಾಡಿ ವರದಿಯನ್ನು ಇಲಾಖೆಗೆ ಸಲ್ಲಿಸುವುದು ಕಡ್ಡಾಯ ಎಂದು ಸಹಕಾರ ಅಭಿವೃದ್ಧಿ ಅಧಿಕಾರಿ ಪ್ರಶಾಂತ ಮುಧೋಳರ ಹೇಳಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 