ಹಾಲು ಉತ್ಪಾದಕರಿಗೆ ವಿಶೇಷ ತರಬೇತಿ ಕಾರ್ಯಕ್ರಮ
Special training program for milk producers
ಗದಗ 08: ತಾಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು, ಹಾಗೂ ಮುಖ್ಯ ಕಾರ್ಯನಿರ್ವಾಹಕರುಗಳಿಗೆ ವಿಶೇಷ ತರಬೇತಿ ಕಾರ್ಯಕ್ರಮವು ಮಂಗಳವಾರ ಪಶುವೈದ್ಯಕೀಯ ಪಾಲಿಕ್ಲಿನಿಕ್ ಇದರ ಸಭಾಭವನ ಗದಗದಲ್ಲಿ ಜರುಗಿತು.
ಧಾರವಾಡ ಹಾಲು ಒಕ್ಕೂಟದ ವ್ಯವಸ್ಥಾಪಕರ ನಿರ್ದೇಶಕರಾದ ಡಿ.ಟಿ. ಕಳಸದರವರು ಮಾತನಾಡುತ್ತಾ ಗೋವಿನಿಂದ ಗ್ರಾಹಕರವರೆಗೆ ಡೇರಿ ತಂತ್ರಜ್ಞಾನ ವಿಶ್ವ ಹೈನೋದ್ಯಮವು ತನ್ನ ಸುದೀರ್ಘ ಅಭಿವೃಧ್ಧಿಯ ಹಾದಿಯಲ್ಲಿ ಕಾಲಕಾಲಕ್ಕೆ ಅಗತ್ಯವಿದ್ದ ಡೇರಿ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಹಾಲು ಉತ್ಪಾದಕರ ಸಮುದಾಯಕ್ಕೆ ಅಗತ್ಯ ಸೇವಾ ಮತ್ತು ಗ್ರಾಹಕರಿಗೆ ಗುಣಮಟ್ಟದ ಹಾಲು ಮತ್ತು ಅದರ ಉತ್ಪನ್ನಗಳನ್ನು ಒದಗಿಸುತ್ತಾ ಬಂದಿದೆ. ಜಾಗತಿಕ ಡೈರಿ ಕ್ಷೇತ್ರವು ಪಶುಪಾಲನೆಯಿಂದ ಗ್ರಾಹಕರವರೆಗಿನ ತನ್ನ ಕಾರ್ಯಚಟುವಟಿಕೆಯಲ್ಲಿನ ಶಕ್ತಿ, ಸಾಮರ್ಥ್ಯವನ್ನು ಅನಾವರಣಗೊಳಿಸುವ ಉದ್ದೇಶ ಹೊಂದಿದೆ. ಗ್ರಾಮೀಣ ಪ್ರದೇಶದಲ್ಲಿನ ಪಶುಪಾಲನೆಯಿಂದ ಆರಂಭವಾಗುವ ಹ್ಯೆನೋದ್ಯಮದ ಕಾರ್ಯವ್ಯಾಪ್ತಿಯು ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಅಗತ್ಯವಿರುವ ಗ್ರಾಹಕರ ಮನೆ ಬಾಗಿಲಿಗೆ ತಲುಪಿಸುವವರೆಗೆ ವಿಸ್ತಾರಗೊಂಡಿದೆ. ವಿಶ್ವ ಇಂದು ಹೆಚ್ಚುತ್ತಿರುವ ಜನಸಂಖ್ಯೆಗಣುಗುಣವಾಗಿ ಅಗತ್ಯವಿರುವ ಆಹಾರ ಸರಬರಾಜಿನ ಸಮಸ್ಯೆಯನ್ನು ಎದುರಿಸುತ್ತಿರುವದಲ್ಲದೆ ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೊಗ್ಯಕ್ಕೆ ಅವಶ್ಯವಿರುವ ಪೌಷ್ಠಿಕಾಂಶಯುಕ್ತ ಆಹಾರದ ಕೊತರೆಯು ಸವಾಲನ್ನು ಸಮರ್ಥವಾಗಿ ನಿಭಾಯಿಸಬೇಕಾದ ಅನಿವಾರ್ಯತೆಯಲ್ಲಿದೆ. ಜಗತ್ತಿನ ಎಲ್ಲಾ ರಾಷ್ಟ್ರಗಳಲ್ಲಿನ ಅಪೌಷ್ಠಿಕತೆ ನಿವಾರಣೆ ಮಾಡಿ ಆರೋಗ್ಯವಂತ ಸಮಾಜ ನಿರ್ಮಾಣದ ಕನಸು ಕೆ.ಎಂ.ಎಫ್ ನಿಂದ ಸಾಧ್ಯವಾಗಿದೆ ಎಂದು ಹೇಳಿದರು.
ಪಶುಪಾಲನಾ ಹಾಗೂ ಪಶುವೈದ್ಯ ಸೇವಾ ಇಲಾಖೆಯ ಉಪನಿರ್ದೇಶಕರಾದ ಎಚ್. ಬಿ. ಹುಲಗಣ್ಣವರ ಮಾತನಾಡುತ್ತಾ ಗ್ರಾಮೀಣ ಪ್ರದೇಶದಲ್ಲಿ ಇಂದು ಆಧುನಿಕ ತಂತ್ರಜ್ಞಾನವನ್ನು ಎಲ್ಲಾ ಹಂತಗಳಲ್ಲಿ ಅಳವಡಿಸಿಕೊಳ್ಳುತ್ತಿದ್ದು, ತಳಿ ಅಭಿವೃದ್ಧಿ, ಹಸಿರು ಮೇವು ಮತ್ತು ಸಮತೋಲಿನ ಪಶು ಆಹಾರ ಉತ್ಪಾದನೆ, ಪಶು ವೈದ್ಯಕೀಯ ಸೇವೆ, ಹಾಲು ಶೇಖರಣೆ ಹೀಗೆ ಎಲ್ಲಾ ಹಂತಗಳಲ್ಲಿ ಆಧುನಿಕ ತಂತ್ರಜ್ಞಾನದ ಉಪಯೋಗವನ್ನು ವಿಸ್ತರಿಸಿಕೊಳ್ಳಲಾಗಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯೂನಿಯನ್‌ದ ಅಧ್ಯಕ್ಷರಾದ ಸಿ. ಎಂ. ಪಾಟೀಲರವರು ವಹಸಿ ಮಾತನಾಡುತ್ತಾ ಸಮಾಜದಲ್ಲಿ ಆರ್ಥಿಕವಾಗಿ ಅಬಲರಾದವರು, ಅವಕಾಶವಂಚಿತ ಜನರಿದ್ದು, ಇಂತಹ ಜನರ ಆರ್ಥಿಕ, ಸಾಮಾಜಿಕ ಸ್ಥಿತಿಗತಿಯನ್ನು ಉತ್ತಮಗೊಳಿಸಲು ಹಾಲು ಉತ್ಪಾದಕರ ಸಹಕಾರ ಸಂಘಗಳಿಂದ ಮಾತ್ರ ಸಾಧ್ಯ, ಗ್ರಾಮೀಣ ಪ್ರದೇಶದ ಮಹಿಳೆಯರು ಸಂಘಟಿತರಾಗಿ ಹಾಲು ಉತ್ಪಾದಕರ ಸಹಕಾರ ಸಂಘಗಳನ್ನು ಸ್ಥಾಪಿಸಿಕೊಂಡು ತಮ್ಮ ಆರ್ಥಿಕ ಅಭಿವೃಧ್ಧಿಯನ್ನು ಹೊಂದಲು ಪ್ರಯತ್ನಿಸಿಬೇಕೆಂದು ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಹಾಗೂ ಗದಗ ಜಿಲ್ಲಾ ಸಹಕಾರ ಯೂನಿಯನ್‌ದ ಸಹಯೋಗದೊಂದಿಗೆ ಜರುಗುವ ಇಂತಹ ಕಾರ್ಯಕ್ರಮದಲ್ಲಿ ಎಲ್ಲಾ ಸಂಘದವರು ಭಾಗವಹಿಸಿ ಕಾಲಕಾಲಕ್ಕೆ ಜರುಗುವ ತರಬೇತಿಯಲ್ಲಿ ಭಾಗವಹಿಸಿ ಅದರ ಸದುಪಯೋಗ ಪಡೆದು ತಮ್ಮ ಸಂಘಗಳ ಏಳ್ಗೆಗೆ ಶ್ರಮಿಸಬೇಕೆಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಹಕಾರ ಸಂಘಗಳ ಉಪನಿಬಂಧಕಿಯರಾದ ಎಸ್. ಎಸ್. ಕಬಾಡೆ, ಸಹಕಾರ ಸಹಕಾರ ಸಂಘಗಳ ಸಹಾಯಕ ನಿಬಂಧಕಿಯರಾದ ಪುಷ್ಪಾ ಕೆ. ಕಡಿವಾಳ, ಮುಖ್ಯ ಪಶುವೈದ್ಯಾಧಿಕಾರಿ (ಆಡಳಿತ)ಗಳಾದ ಎಚ್. ವಾಯ್. ಹೊನ್ನಿನಾಯ್ಕರ, ಪಾಲಿಕ್ಲಿನಿಕ್‌ದ ಮುಖ್ಯ ಪಶುವೈದ್ಯಾಧಿಕಾರಿಗಳಾದ ಡಾ. ಹೀರಾಲಾಲ ಜಿನಗಿ, ಡಾ. ಆರ್. ವಾಯ್. ಗುರಿಕಾರ, ಧಾರವಾಡ ಹಾಲು ಒಕ್ಕೂಟದ ಜಿಲ್ಲಾ ಮುಖ್ಯಸ್ಥರಾದ ಪ್ರಸನ್ನ ಪಟ್ಟೇದ, ಹಾಲು ಒಕ್ಕೂಟದ ಗದಗ ಜಿಲ್ಲೆಯ ಎಲ್ಲಾ ವಿಸ್ತರಣಾಧಿಕಾರಿಗಳು ಉಪಸ್ಥಿತರಿದ್ದರು.
ಪ್ರಾರಂಭದಲ್ಲಿ ನಾಗಾವಿ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿಗಳಾದ ಕೇದಾರಸ್ವಾಮಿ ಶಿರಹಟ್ಟಿಮಠ ಇವರು ಪ್ರಾರ್ಥನೆ ಮಾಡಿದರು ಗದಗ ಜಿಲ್ಲಾ ಸಹಕಾರ ಯೂನಿಯನ್ನಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ ಎಸ್. ಕರಿಯಪ್ಪನವರ ಇವರು ಸ್ವಾಗತಿಸಿ ನಿರೂಪಿಸಿದರು ನಂತರ ವಿಸ್ತರಣಾಧಿಕಾರಿಗಳಾದ ದೀಲೀಪ್ ಆಯ್. ನದಾಫ ಇವರು ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 