ವಿಶೇಷ ತರಬೇತಿ ಕಾರ್ಯಾಗಾರಕ್ಕೆ ಚಾಲನೆ
Special training workshop launched
ತಾಳಿಕೋಟಿ 21: ವಿ.ವಿ. ಸಂಘದ ಶ್ರೀ ಖಾಸ್ಗತೇಶ್ವರ ಐ ಕ್ಯು ಎಸ್ ಸಿ ಹಾಗೂ ಕೌಶಲ್ಯ ತರಬೇತಿ, ವೃತ್ತಿ ಮಾರ್ಗದರ್ಶನ ಘಟಕದ ಆಶ್ರಯದಲ್ಲಿ ಪ್ರಶಿಕ್ಷಣಾರ್ಥಿಗಳ ಸ್ಪರ್ಧಾತ್ಮಕ ಪರೀಕ್ಷಾ ಸಾಮರ್ಥ್ಯವನ್ನು ವೃದ್ಧಿಸುವ ಉದ್ದೇಶದಿಂದ ಟಿಇಟಿ ಸಿಟಿಇಟಿ ಹಾಗೂ ಸಿಇಟಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕಾರ್ಯಾಗಾರವನ್ನು ಸೋಮವಾರ ಉದ್ಘಾಟಿಸಿ, ಕನ್ನಡ ವಿಷಯದ ವಿಶೇಷ ಉಪನ್ಯಾಸವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಲಾಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಶ್ರೀ ಎನ್. ಡಿ. ನದಾಫ್, ಉಪನ್ಯಾಸಕರು, ಎಂ.ಜಿ.ವಿ.ಸಿ. ಶಿಕ್ಷಣ ಮಹಾವಿದ್ಯಾಲಯ, ಮುದ್ದೇಬಿಹಾಳ, ಅವರು ಕನ್ನಡ ವಿಷಯದ ಬೋಧನಾ ವಿಧಾನ ವ್ಯಾಕರಣ, ಭಾಷಾ ಕೌಶಲ್ಯ ಹಾಗೂ ಟಿಇಟಿ ಸಿಟಿಈಟಿ ಮತ್ತು ಸಿಇಟಿ ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕ ಗಳಿಸಲು ಅನುಸರಿಸಬೇಕಾದ ಅಧ್ಯಯನ ತಂತ್ರಗಳ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ ನಿರಂತರ ಓದು, ಆತ್ಮವಿಶ್ವಾಸ ಮತ್ತು ಸಮಯದ ಸಮರ್ಕ ನಿರ್ವಹಣೆಯೇ ಯಶಸ್ಸಿನ ಗುಟ್ಟು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ. ಆರ್. ಎಂ. ಬಂಟನೂರ ಅವರು ಮಾತನಾಡಿ ಇಂತಹ ತರಬೇತಿ ಕಾರ್ಯಾಗಾರಗಳು ಭವಿಷ್ಯದಲ್ಲಿ ಶಿಕ್ಷಕರಾಗಿ ನೇಮಕಾತಿಗೊಳ್ಳಲು ಪ್ರಮುಖ ಪಾತ್ರ ವಹಿಸುತ್ತವೆ ಎಂದು ಹೇಳಿ ಪ್ರತಿಯೊಬ್ಬ ಪ್ರಶಿಕ್ಷಣಾರ್ಥಿಯೂ ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ತಮ್ಮ ಗುರಿ ಸಾಧಿಸಬೇಕು ಎಂದು ತಿಳಿಸಿದರು.ಪ್ರಶಿಕ್ಷಣಾರ್ಥಿ ಶಿವರಾಜ ಉಪ್ಪಾರ ನಿರೂಪಿಸಿದರು. ಪ್ರಶಿಕ್ಷಣಾರ್ಥಿ ಐಶ್ವರ್ಯ ದೊಡ್ಡಮನಿ ಸ್ವಾಗತಿಸಿದರು. ಪ್ರಶಿಕ್ಷಣಾರ್ಥಿ ದೀಪಿಕಾ ಪುಷ್ಾರೆ್ಪಣ ಸಲ್ಲಿಸಿದರು. ಪ್ರಶಿಕ್ಷಣಾರ್ಥಿ ರೂಪಾ ವಂದನಾರೆ್ಣ ಸಲ್ಲಿಸಿ ಕಾರ್ಯಕ್ರಮವನ್ನು ಸಮಾರೋಪಗೊಳಿಸಿದರು.ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಉಪನ್ಯಾಸಕರು, ಪ್ರಶಿಕ್ಷಣಾರ್ಥಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದು, ಕಾರ್ಯಕ್ರಮವು ಶೈಕ್ಷಣಿಕ ಉತ್ಸಾಹ ಮತ್ತು ಸ್ಪರ್ಧಾತ್ಮಕ ಮನೋಭಾವವನ್ನು ಮೂಡಿಸುವ ಮೂಲಕ ಯಶಸ್ವಿಯಾಗಿ ನೆರವೇರಿತು.
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ 