‘ಎಲ್ಲರ ಅಮ್ಮ’ ಯಲ್ಲಮ್ಮ ದೇವಿಗೆ ವಿಶೇಷ ಪೂಜೆ

‘ಎಲ್ಲರ ಅಮ್ಮ’ ಯಲ್ಲಮ್ಮ ದೇವಿಗೆ ವಿಶೇಷ ಪೂಜೆ Special worship to Goddess Yallamma, the 'Mother of All'

ಉಗರಗೋಳ 03 : ಸಮೀಪದ ಯಲ್ಲಮ್ಮನಗುಡ್ಡದಲ್ಲಿ ಬನದ ಹುಣ್ಣಿಮೆ ಅಂಗವಾಗಿ ಶನಿವಾರ ನಡೆದ ಜಾತ್ರೆಯಲ್ಲಿ ಲಕ್ಷಲಕ್ಷ ಸಂಖ್ಯೆಯಲ್ಲಿ ಭಕ್ತರು ಸೇರಿದ್ದರು. ಮೈಕೊರೆಯುವ ಚಳಿ ಮಧ್ಯೆಯೂ ಉತ್ಸಾಹದಿಂದ ಪಾಲ್ಗೊಂಡು, ಶ್ರದ್ಧೆಯಿಂದ ಧಾರ್ಮಿಕ ಆಚರಣೆ ಕೈಗೊಂಡರು. ಈ ಜಾತ್ರೆಗೆ ಕರ್ನಾಟಕಕ್ಕಿಂತ ಮಹಾರಾಷ್ಟ್ರದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ‘ಎಲ್ಲರ ಅಮ್ಮ’ ಯಲ್ಲಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಜಾತ್ರೆಗೂ ಒಂದು ದಿನ ಮುಂಚೆಯೇ ಗುಡ್ಡದತ್ತ ಭಕ್ತರ ದಂಡು ಹರಿದುಬಂತು. ಶನಿವಾರ ನಸುಕಿನ ಹೊತ್ತಿಗೆ ಇಡೀ ಗುಡ್ಡದ ಪರಿಸರ ಭಕ್ತರಿಂದ ಕಿಕ್ಕಿರಿದು ತುಂಬಿತ್ತು. ‘ಉಧೋ ಉಧೋ ಯಲ್ಲಮ್ಮ ನಿನ್ಹಾಲ್ಕ ಉಧೋ...’ ಎಂಬ ಜೈಕಾರ ಮುಗಿಲು ಮುಟ್ಟಿತ್ತು. 

ಶನಿವಾರ ಬೆಳಿಗ್ಗೆ ಮತ್ತು ಸಂಜೆ ರೇಣುಕಾ ಯಲ್ಲಮ್ಮ ದೇವಿಗೆ ವಿಶೇಷ ಪೂಜೆ ನೆರವೇರಿತು. ನಸುಕಿನಿಂದಲೇ ಸರದಿ ಸಾಲಿನಲ್ಲಿ ನಿಂತು ಭಕ್ತರು ದೇವಿ ದರ್ಶನ ಪಡೆದರು. ಜೋಗುಳಬಾವಿ ಹಾಗೂ ಯಲ್ಲಮ್ಮನಗುಡ್ಡದ ಎಣ್ಣೆ ಹೊಂಡದಲ್ಲಿ ಭಕ್ತರು ಪವಿತ್ರಸ್ನಾನ ಮಾಡಿದರು. ಪುರುಷರು ಮತ್ತು ಮಹಿಳೆಯರಿಗೆ ಸ್ನಾನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿತ್ತು. ನಂತರ ರಸ್ತೆಬದಿ ಮತ್ತು ಗುಡ್ಡದ ವಿಶಾಲವಾದ ಪರಿಸರದಲ್ಲಿ ನೈವೇದ್ಯ ಸಿದ್ಧಪಡಿಸಿ, ಪರಡಿ ತುಂಬಿ ಭಕ್ತಿ ಸಮರ​‍್ಿಸಿದರು. ಜೋಗತಿಯರ ನೃತ್ಯ, ಜಾನಪದ ಕಲಾತಂಡಗಳ ಪ್ರದರ್ಶನ ಭಕ್ತರನ್ನು ಸೆಳೆಯಿತು. ಯಲ್ಲಮ್ಮನ ಇತಿಹಾಸ ಸಾರುವ ಗೀತೆಗಳು ಮತ್ತು ಭಕ್ತಿಗೀತೆಗಳಿಗೆ ಯುವಜನರು ಉತ್ಸಾಹದಿಂದ ಹೆಜ್ಜೆಹಾಕಿದರು. ಭಂಡಾರದಲ್ಲಿ ಮಿಂದೆದ್ದ ಯುವಜನರು, ದೇವಸ್ಥಾನದ ಮೇಲೂ ಭಂಡಾರ ಹಾರಿಸಿ ಸಂಭ್ರಮಿಸಿದರು. ತೆಂಗಿನಕಾಯಿ, ಕರ​‍್ೂರ, ಕುಂಕುಮಹಿಭಂಡಾರ ಸೇರಿದಂತೆ ವಿವಿಧ ಅಂಗಡಿಗಳಲ್ಲಿ ಪೂಜಾ ಸಾಮಗ್ರಿಗಳ ಮಾರಾಟ ಜೋರಾಗಿತ್ತು. ಚೌಕಾಸಿ ಮಧ್ಯೆಯೂ ಜನರು ವಿವಿಧ ವಸ್ತುಗಳ ಖರೀದಿಗೆ ಮುಗಿಬಿದ್ದಿರುವುದು ಕಂಡುಬಂತು. 

ಸಂಚಾರ ಸಮಸ್ಯೆ:  ಈ ವರ್ಷವೂ ಜಾತ್ರೆಯನ್ನು ಸಂಚಾರ ಸಮಸ್ಯೆ ಬಿಟ್ಟುಬಿಡದೆ ಕಾಡಿತು. ಕೆಲ ಸವಾರರು ಬೇಕಾಬಿಟ್ಟಿಯಾಗಿ ವಾಹನ ನಿಲ್ಲಿಸಿದ ಪರಿಣಾಮ ಯಲ್ಲಮ್ಮನಗುಡ್ಡಹಿಉಗರಗೋಳ ಮಾರ್ಗದಲ್ಲಿ ಸಂಚಾರ ಸಮಸ್ಯೆ ತಲೆದೋರಿತು. ಮೂರ್ನಾಲ್ಕು ಕಿ.ಮೀ ದೂರದವರೆಗೆ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಟ್ರಾಫಿಕ್ ಸಮಸ್ಯೆ ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು.