ರಿಂಗ್‌ರೋಡಗೆ ಭೂಮಿ ಸ್ವಾಧೀನ ಪ್ರಕ್ರಿಯೆ ಚುರುಕುಗೊಳಿಸಿ: ಸಚಿವ ಸತೀಶ ಸೂಚನೆ
Speed up land acquisition process for Ring Road: Minister Satish instructs
ರಾಯಬಾಗ 07: ತಾಲೂಕಿನಲ್ಲಿ ನಿರ್ಮಿಸಲು ಉದ್ದೇಶಿತ ರಿಂಗ್‌ರೋಡ ರಸ್ತೆ ನಿರ್ಮಾಣಕ್ಕೆ ಬೇಕಾದ ಭೂಮಿಯನ್ನು ಸ್ವಾಧೀನ ಪ್ರಕ್ರಿಯೆಯನ್ನು ಚುರುಕುಗೊಳಿಸುವಂತೆ ಕೆಆರ್‌ಡಿಸಿಎಲ್ ಅಧಿಕಾರಿಗಳಿಗೆ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಸೂಚಿಸಿದರು.
ಸೋಮವಾರ ಪಟ್ಟಣದ ಲೋಕೋಪಯೋಗಿ ಇಲಾಖೆ ಪ್ರವಾಸಿ ಮಂದಿರದಲ್ಲಿ ತಾಲೂಕು ಅಧಿಕಾರಿಗಳ ಜೊತೆ ತಾಲೂಕಿನಲ್ಲಿ ಆಗಬೇಕಾಗಿರುವ ಇಲಾಖಾವಾರು ಪ್ರಗತಿ ಕಾರ್ಯಗಳನ್ನು ಪರೀಶೀಲನೆ ನಡೆಸಿದರು. ತೋಟಪಟ್ಟಿಗಳಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ನೋಡಿಕೊಳ್ಳಲು ಹೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು. ನರೇಗಾ ಯೋಜನೆಯಡಿ ಗ್ರಾಮೀಣ ಭಾಗದ ಕೆನಾಲಗಳನ್ನು ಸ್ವಚ್ಛಗೊಳಿಸುವಂತೆ ತಾ.ಪಂ.ಇಒ ಅವರಿಗೆ ಸೂಚಿಸಿದರು. ತಾಲೂಕಿನ 39 ಕೆರೆ ತುಂಬುವ ಯೋಜನೆ ಕಾಮಗಾರಿ ಅಂತಿಮ ಹಂತದಲ್ಲಿದ್ದು, ಶೀಘ್ರವಾಗಿ ಕೆರೆ ತುಂಬುವ ಯೋಜನೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.
ಸಚಿವರನ್ನು ಭೇಟಿಯಾಗಲು ಬಂದಿದ್ದ ಸಾರ್ವಜನಿಕರಿಂದ ಅಹವಾಲಗಳನ್ನು ಆಲಿಸಿ, ಅರ್ಜಿಗಳನ್ನು ಸ್ವೀಕರಿಸಿ, ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಜನರ ಸಮಸ್ಯೆಗಳನ್ನು ಸೂಕ್ತವಾಗಿ ಶೀಘ್ರವಾಗಿ ಬಗೆಹರಿಸುವಂತೆ ತಿಳಿಸಿದರು.
ಸಚಿವರನ್ನು ಭೇಟಿಯಾಗಲು ಬಂದಿದ್ದ ಸಾರ್ವಜನಿಕರಿಗೆ ಭೋಜನದ ವ್ಯವಸ್ಥೆ ಮಾಡಲಾಗಿತ್ತು.
ಚಿಕ್ಕೋಡಿ ಉಪವಿಭಾಗಾಧಿಕಾರಿ ಸುಭಾಷ ಸಂಪಗಾಂವಿ, ತಹಶೀಲ್ದಾರ ಸುರೇಶ ಮುಂಜೆ, ಕೃಷಿ ಅಧಿಕಾರಿ ವಿನೋದ ಮಾವರಕರ, ಟಿಎಚ್‌ಒ ಡಾ.ಎಸ್.ಎಮ್.ಪಾಟೀಲ, ತಾ.ಪಂ.ಇಒ ಸುರೇಶ ಕದ್ದು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಹಾವೀರ ಮೋಹಿತೆ, ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಪ್ಪಾಸಾಹೇಬ ಕುಲಗುಡೆ, ಮಾಜಿ ಶಾಸಕ ಎಸ್.ಬಿ.ಘಾಟಗೆ, ಲಕ್ಷ್ಮಣರಾವ ಜಿಂಗಳೆ, ಶಿವನಗೌಡ ಪಾಟೀಲ, ಅರ್ಜುನ ನಾಯಿಕವಾಡಿ, ಅರ್ಜುನ ಬಂಡಗರ, ಜ್ಯೋತಿ ಕೆಂಪಟ್ಟಿ, ಹಾಜಿ ಮುಲ್ಲಾ, ದೀಲೀಪ ಜಮಾದಾರ, ನಾಮದೇವ ಕಾಂಬಳೆ, ಅಬ್ದುಲ್‌ಸತ್ತಾರ ಮುಲ್ಲಾ, ಫಾರೂಕ ಮೊಮಿನ, ಕಿರಣ ಕಾಂಬಳೆ, ನಿರ್ಮಲ ಪಾಟೀಲ, ಶೈಲಜಾ ಕರಿಭೀಮಗೋಳ ಸೇರಿ ಅನೇಕರು ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 