ನೆಮ್ಮದಿಯ ಬದುಕಿಗೆ ಆಧ್ಯಾತ್ಮಿಕ ಮೌಲ್ಯಗಳ ಅಗತ್ಯ: ಡಾ.ಪ್ರಭುಗೌಡ
Spiritual values are essential for a peaceful life: Dr. Prabhugowda
ತಾಳಿಕೋಟಿ 30: ಮನುಷ್ಯ ವಿಜ್ಞಾನ ಮತ್ತು ತಂತ್ರಜ್ಞಾನದ ಮೂಲಕ ಭೌತಿಕವಾಗಿ ಇಂದು ಬಹಳಷ್ಟು ಪ್ರಗತಿಯನ್ನು ಸಾಧಿಸಿದ್ದಾನೆ ಆದರೆ ಅವನ ಬದುಕಿನಲ್ಲಿ ನೆಮ್ಮದಿ ಎಂಬುದಿಲ್ಲ. ಶಾಂತಿ ಹಾಗೂ ನೆಮ್ಮದಿಯ ಬದುಕಿಗಾಗಿ ಜೀವನದಲ್ಲಿ ಆಧ್ಯಾತ್ಮಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದು ಅತ್ಯಗತ್ಯವಾಗಿದೆ ಎಂದು ಖ್ಯಾತ ನೇತ್ರ ತಜ್ಞ ಡಾ.ಪ್ರಭುಗೌಡ ಲಿಂಗದಳ್ಳಿ ಹೇಳಿದರು.
ಸೋಮವಾರ ಪಟ್ಟಣದ ರಜಪೂತ ಬಡಾವಣೆಯಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಹಮ್ಮಿಕೊಂಡ ಪುರಾಣ ಕಾರ್ಯಕ್ರಮದಲ್ಲಿ ಸಮಾಜದ ವತಿಯಿಂದ ನೀಡಿದ ಸನ್ಮಾನವನ್ನು ಸ್ವೀಕರಿಸಿ ಅವರು ಮಾತನಾಡಿದರು. ಆರೋಗ್ಯ ಸರ್ವ ಶ್ರೇಷ್ಠ ಸಂಪತ್ತಾಗಿದೆ, ಅದರ ಕುರಿತು ಎಲ್ಲರಿಗೂ ಕಾಳಜಿವಿರಲಿ. ಯುವ ಸಮುದಾಯ ಮಾದಕ ಪದಾರ್ಥಗಳ ವ್ಯಸನಿಗಳಾಗಬಾರದು. ಯೌವನ ಒಂದು ಅನುಗ್ರಹವಾಗಿದೆ ಅದನ್ನು ಸತ್ಕಾರ್ಯಗಳಲ್ಲಿ ತೊಡಗಿಸಿ. ಆರೋಗ್ಯವಂತ ಸಮಾಜದಿಂದ ಮಾತ್ರ ಬಲಿಷ್ಠ ರಾಷ್ಟ್ರವನ್ನು ಕಟ್ಟಲು ಸಾಧ್ಯ. ಹೆತ್ತವರು ತಮ್ಮ ಮಕ್ಕಳಿಗೆ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರಗಳನ್ನೂ ಕೊಡಬೇಕು, ಇವತ್ತು ನಮ್ಮ ಸಮಾಜದಲ್ಲಿ ಶಿಕ್ಷಣ ವಂತರ ಕೊರತೆ ಇಲ್ಲ ಸಂಸ್ಕಾರವಂತರ ಕೊರತೆ ಇದೆ. ಈ ನಿಟ್ಟಿನಲ್ಲಿ ಜಗನ್ಮಾತೆ ಶ್ರೀ ದೇವಿ ನಮ್ಮೆಲ್ಲರನ್ನು ಆಶೀರ್ವದಿಸಲಿ ಎಂದರು. ಸಮಾಜದ ಯುವ ಮುಖಂಡ ವಿಜಯ ಸಿಂಗ್ ಹಜೇರಿ ಮಾತನಾಡಿ ಡಾ.ಪ್ರಭುಗೌಡರು ವೈದ್ಯಕೀಯ ಸೇವೆಯ ಜೊತೆಗೆ ಹಲವಾರು ಸಮಾಜಮುಖಿ ಸೇವಾ ಕಾರ್ಯಗಳನ್ನೂ ಮಾಡುತ್ತಿದ್ದಾರೆ ಅವರಿಗೆ ಎಲ್ಲರೂ ಸಹಕರಿಸುವ ಅಗತ್ಯವಿದೆ ಎಂದರು. ಪುರಾಣಿಕ ವಸಂತ ಜೋಶಿ ಕಾರ್ಯಕ್ರಮದ ಸಮ್ಮುಖ ವಹಿಸಿದ್ದರು.
ಈ ಸಮಯದಲ್ಲಿ ರಜಪೂತ ಸಮಾಜದ ಅಧ್ಯಕ್ಷ ಹರಿಸಿಂಗ್ ಮೂಲಿಮನಿ, ಉಪಾಧ್ಯಕ್ಷ ರತನಸಿಂಗ್ ಕೊಕಟನೂರ,ಭರತ ವಿಜಾಪೂರ, ಸುರೇಶ ಹಜೇರಿ, ಗೋವಿಂದಸಿಂಗ ಗೌಡಗೇರಿ, ಸಿರಸಕುಮಾರ ಹಜೇರಿ, ಜಯಸಿಂಗ್ ಮೂಲಿಮನಿ, ವಿಠಲ ಹಜೇರಿ, ಪ್ರಹ್ಲಾದ ಹಜೇರಿ, ರಮೇಶ ಗೌಡಗೇರಿ, ಸಂಜಯಸಿಂಗ್ ರಜಪೂತ, ಮತ್ತಿತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 