ಕ್ರೀಡಾದಿನಾಚರಣೆ: ಪ್ರಜ್ವಲ್ ಗೋಣಿ ಅವರಿಗೆ ಸನ್ಮಾನ
Sports Day Celebration: Tribute to Prajwal Goni
ಕ್ರೀಡಾದಿನಾಚರಣೆ: ಪ್ರಜ್ವಲ್ ಗೋಣಿ ಅವರಿಗೆ ಸನ್ಮಾನ
ಬೈಲಹೊಂಗಲ, 30 : ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನ ಆಚರಿಸಲಾಯಿತು. ದೇಶದ ಖ್ಯಾತ ಹಾಕಿಪಟು ಮೇಜರ್ ಧ್ಯಾನಚಂದ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.
ಅಥ್ಲೆಟಿಕ್ಸ್ ವಿಭಾಗದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಶಾಲೆಯ ಹಳೆಯ ವಿದ್ಯಾರ್ಥಿ ಪ್ರಜ್ವಲ ಗೋಣಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಕ್ರೀಡಾಪಟುಗಳಿಗೆ ಶಿಸ್ತುಬದ್ಧ ದಿನಚರಿಯ ಜೊತೆಗೆ ಸೂಕ್ತವಾದ ಆಹಾರ ಕ್ರಮ ಅತ್ಯಗತ್ಯವಾಗಿದೆ ಎಂದು ಹೇಳಿದರು. ವಿದ್ಯಾರ್ಥಿಗಳು ದುಶ್ಚಟಗಳಿಗೆ ಮತ್ತು ಮೊಬೈಲ್ ಗೀಳಿಗೆ ಬಲಿಯಾಗಬೇಡಿ ಎಂದು ಅವರು ಮಕ್ಕಳಿಗೆ ಕಿವಿಮಾತು ಹೇಳಿದರು. ಮೇಜರ್ ಧ್ಯಾನಚಂದ್ ಅವರ ಜೀವನ, ಸಾಧನೆ, ಕ್ರೀಡೆಗಳ ಮಹತ್ವ ಕುರಿತು ವಿದ್ಯಾ ಗರಗದ, ಪಲ್ಲವಿ ಸೂರ್ಯವಂಶಿ, ಅರ್ಿತಾ ಬೋಬಡೆ, ಸೃಷ್ಟಿ ಕುಲಕರ್ಣಿ ಮಾತನಾಡಿದರು. ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಮಾಡಿದ ಶಾಲೆಯ ವಿದ್ಯಾರ್ಥಿಗಳಾದ ಮುತ್ತುರಾಜ ಜೋಗಿಗುಡ್ಡ, ಕಲ್ಮೇಶಗುಡ್ಡದ ಇವರಿಗೆ ಪ್ರಮಾಣಪತ್ರ ವಿತರಿಸಲಾಯಿತು.
ದೈಹಿಕ ಶಿಕ್ಷಣ ಶಿಕ್ಷಕರಾದ ಪಿ.ಎಸ್. ಗುರುನಗೌಡರ ಪ್ರಸ್ತಾವಿಕವಾಗಿ ಮಾತನಾಡಿ ನಿತ್ಯ ಯೋಗ, ಧ್ಯಾನದಿಂದ ವಿದ್ಯಾರ್ಥಿಗಳ ಮಾನಸಿಕ ಮತ್ತು ದೈಹಿಕ ಆರೋಗ್ಯ ಉತ್ತಮವಾಗುತ್ತದೆ ಎಂದರು. ಸಮತೋಲಿತ ಆಹಾರ, ಉತ್ತಮ ನಿದ್ದೆ ಕ್ರಿಯಾಶೀಲತೆಯನ್ನು ಹೆಚ್ಚಿಸುತ್ತದೆ ಎಂದು ಅವರು ಅಭಿಪ್ರಾಯಪಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಮುಖ್ಯಶಿಕ್ಷಕರಾದ ಎನ್.ಆರ್.ಠಕ್ಕಾಯಿ ಮಾತನಾಡಿ ಮೇಜರ್ ಧ್ಯಾನಚಂದ್ ಅವರು ಓಲಂಪಿಕ್ಸದಲ್ಲಿ ಮಾಡಿದ ಸಾಧನೆ ಭಾರತೀಯರಾದ ನಮ್ಮೆಲ್ಲರಿಗೂ ಅತ್ಯಂತ ಹೆಮ್ಮೆಯ ವಿಷಯ ಎಂದರು. ಕ್ರೀಡಾಸಾಧಕರ ಜೀವನ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಶಿಕ್ಷಕರಾದ ಜಗದೀಶ ನರಿ, ಶಿವಾನಂದ ಬಳಿಗಾರ, ವಿರೇಂದ್ರ ಪಾಟೀಲ, ಮಂಜುಳಾ ಕಾಳಿ, ಸಂತೋಷ ಸಾಳುಂಕೆ, ಜ್ಯೋತಿ ಅಳಗೋಡಿ, ಹಾಗೂ ಹಳೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಮೂಗಪ್ಪ ನಾಗಣ್ಣವರ ಪ್ರಾರ್ಥಿಸಿದರು. ಭಾಗ್ಯಶ್ರೀ ಬಡಿಗೇರ ನಿರೂಪಿಸಿದರು. ಸಾನಿಕಾ ಕುಲಕರ್ಣಿ ಸ್ವಾಗತಿಸಿದರು. ಪಲ್ಲವಿ ಸೂರ್ಯವಂಶಿ ವಂದಿಸಿದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 