ಕ್ರೀಡೆಗೆ ಪಾಠದಷ್ಟೇ ಮಹತ್ವ: ದಮ್ಮೂರಮಠ
Sports are as important as academics: Dammuramatha
ತಾಳಿಕೋಟಿ 06: ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ವಿಕಾಸಕ್ಕೆ ಕ್ರೀಡೆಗಳು ಪೂರಕವಾಗಿದ್ದು, ಪಾಠದ ಜೊತೆಗೆ ಕ್ರೀಡೆಗೂ ಸಮಾನ ಮಹತ್ವ ನೀಡಬೇಕು ಎಂದು ಮುದ್ದೇಬಿಹಾಳ ಕ್ಷೇತ್ರ ಸಮನ್ವಯಾಧಿಕಾರಿ ಡಾ. ದಮ್ಮೂರಮಠ ಹೇಳಿದರು.
ಪಟ್ಟಣದ ಸರ್ವಜ್ಞ ವಿದ್ಯಾಪೀಠ ಪ್ರೌಢಶಾಲೆಯಲ್ಲಿ 2026-27ನೇ ಸಾಲಿನ ಪಶ್ಚಿಮ ವಲಯ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದ ಕ್ರೀಡಾ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ, ಕ್ರೀಡಾ ಮನೋಭಾವದಿಂದ ಭಾಗವಹಿಸಬೇಕು ಎಂದರು.
ಕ್ರೀಡೆಯಲ್ಲಿ ಸೋತಾಗ ಕುಗ್ಗದೆ, ಗೆದ್ದಾಗ ಹಿಗ್ಗದೆ ಸಮಚಿತ್ತದಿಂದ ಸ್ಪರ್ಧಿಸಬೇಕು. ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ಮೂಲಕ ಅವರ ಪ್ರತಿಭೆಯನ್ನು ಬೆಳೆಸಬೇಕು ಎಂದು ತಿಳಿಸಿದರು. ಸ್ಥಳೀಯ ಪಿಎಸ್ಐ ಜ್ಯೋತಿ ಖೋತ ಮಾತನಾಡಿ, ಕ್ರೀಡೆಗಳು ಜೀವನದ ಅವಿಭಾಜ್ಯ ಅಂಗವಾಗಬೇಕು ಎಂದರು.
ಸಂಸ್ಥಾಪಕ ಅಧ್ಯಕ್ಷ ಸಿದ್ದನಗೌಡ ಮಂಗಳೂರು ಅಧ್ಯಕ್ಷತೆ ವಹಿಸಿದ್ದರು. ದೈಹಿಕ ಶಿಕ್ಷಕ ಶಾಂತಗೌಡ ಬಿರಾದಾರ ಪ್ರತಿಜ್ಞಾವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಸಿಆರ್ಸಿ ರಾಜು ವಿಜಾಪುರ, ಅಶೋಕ ಮಾಡಗಿ ಸೇರಿದಂತೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 